ಕ್ಲಬ್ ಮೇಲೆ ಸಿಸಿಬಿ ದಾಳಿ: 18 ಜನರ ಬಂಧನ, 9.12 ಲಕ್ಷ ನಗದು ಜಪ್ತಿ

ಬೆಂಗಳೂರು, ಆ.4: ನಗರದ ವಿಲ್ಸನ್ ಗಾರ್ಡನ್‌ನ ಫೋರ್ ರಿಕ್ರಿಯೇಷನ್ ಕ್ಲಬ್ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು, 18 ಜನರನ್ನು ಬಂಧಿಸಿ 9 ಲಕ್ಷ 12 ಸಾವಿರ ನಗದು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಫೋರ್ ರಿಕ್ರಿಯೇಷನ್ ಕ್ಲಬ್‌ನ ಮಾಲಕ ಸುರೇಶ್, ವ್ಯವಸ್ಥಾಪಕ ಕೃಷ್ಣ ಸೇರಿ ಜೂಜಾಡುತ್ತಿದ್ದ 16 ಮಂದಿಯನ್ನು ಬಂಧಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಫೋರ್ ರಿಕ್ರಿಯೇಷನ್ ಕ್ಲಬ್‌ನಲ್ಲಿ ಜೂಜಾಟವಾಡುತ್ತಿದ್ದ ಖಚಿತ ಮಾಹಿತಿಯಾಧರಿಸಿ ದಾಳಿ ನಡೆಸಿದ ಸಿಸಿಬಿ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದು, ಈ ಸಂಬಂಧ ವಿಲ್ಸನ್‌ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
Next Story





