Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಬಿಎಂಪಿ ಕಾಮಗಾರಿಗಳಿಗೆ ತಡೆ ಬೆಂಗಳೂರು...

ಬಿಬಿಎಂಪಿ ಕಾಮಗಾರಿಗಳಿಗೆ ತಡೆ ಬೆಂಗಳೂರು ಅಭಿವೃದ್ಧಿಗೆ ಮಾರಕ: ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ5 Aug 2019 6:30 PM IST
share
ಬಿಬಿಎಂಪಿ ಕಾಮಗಾರಿಗಳಿಗೆ ತಡೆ ಬೆಂಗಳೂರು ಅಭಿವೃದ್ಧಿಗೆ ಮಾರಕ: ಕಾಂಗ್ರೆಸ್

ಬೆಂಗಳೂರು, ಆ. 5: ಮೈತ್ರಿ ಸರಕಾರದ ಅವಧಿಯಲ್ಲಿ ನಡೆದಿದ್ದ ಕಾಮಗಾರಿಗಳ ಬಗ್ಗೆ ಸಂಶಯವಿದ್ದರೆ ತನಿಖೆ ನಡೆಸುವುದನ್ನು ಬಿಟ್ಟು ಅನುಮೋದನೆ ನೀಡಿದ್ದ ಕಾಮಗಾರಿಗಳಿಗೆ ತಡೆ ಹಿಡಿದಿರುವುದು ಬೆಂಗಳೂರು ಅಭಿವೃದ್ಧಿ ದೃಷ್ಟಿಯಿಂದ ಸಲ್ಲ ಎಂದು ಕಾಂಗ್ರೆಸ್ ಆಕ್ಷೇಪಿಸಿದೆ.

ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ, ರಾಮಲಿಂಗಾರೆಡ್ಡಿ, ಪರಿಷತ್ ಸದಸ್ಯ ರಿಜ್ವಾನ್ ಅರ್ಶದ್ ಜಂಟಿ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ದಿನೇಶ್ ಗುಂಡೂರಾವ್ ಮಾತನಾಡಿ, ನವ ಬೆಂಗಳೂರು ಯೋಜನೆ ಅಡಿ 8 ಸಾವಿರ ಕೋಟಿ ರೂ.ಮೊತ್ತದ ಯೋಜನೆಯನ್ನು ಬಿಜೆಪಿ ಸರಕಾರ ತಡೆಹಿಡಿದಿದೆ. ಹಿಂದಿನ ಮೈತ್ರಿ ಸರಕಾರ ಘೋಷಿಸಿದ್ದ ಯೋಜನೆಗಳನ್ನು ತಡೆಹಿಡಿಯುವ ಜೊತೆಗೆ ಬಿಬಿಎಂಪಿ ಬಜೆಟ್ ಅನ್ನು ತಡೆಹಿಡಿದಿರುವುದು ಬೆಂಗಳೂರು ಅಭಿವೃದ್ಧಿಗೆ ಮಾರಕ ಎಂದು ಟೀಕಿಸಿದರು.

ನಗರೋತ್ಥಾನ ಯೋಜನೆಯನ್ನು ಹಿಂದೆ ಸಿದ್ದರಾಮಯ್ಯ ಅನುಷ್ಠಾನಕ್ಕೆ ತಂದಿದ್ದರು. ಕಸ ವಿಲೇವಾರಿ ಸಮಸ್ಯೆ, ಕುಡಿಯುವ ನೀರು, ರಸ್ತೆ, ಟೆಂಡರ್ ಶ್ಯೂರ್ ಕಾಮಗಾರಿಗೆ ಚಾಲನೆ ನೀಡಿದ್ದರು. ಇದೀಗ ಮತ್ತೆ 11,500 ಕೋಟಿ ರೂ.ಗೆ ಅನುಮೋದನೆ ನೀಡಿ ಕಾಮಗಾರಿಗಳು ವೇಗವಾಗಿ ನಡೆದಿದ್ದವು. ಆದರೆ, ಯಡಿಯೂರಪ್ಪ ಬರುತ್ತಿದ್ದಂತೆ ತಡೆ ನೀಡಿದ್ದಾರೆ ಅವರು ವಾಗ್ದಾಳಿ ನಡೆಸಿದರು.

ಗುಣಮಟ್ಟ ಪರಿಶೀಲಿಸಿ: ಕಾಮಗಾರಿಗಳ ಬಗ್ಗೆ ಸಂಶಯವಿದ್ದರೆ ತನಿಖೆ ನಡೆಸಲಿ. ಅದು ಬಿಟ್ಟು ಕಾಮಗಾರಿಗಳಿಗೆ ತಡೆ ಹಿಡಿದಿರುವುದು ಸರಿಯಲ್ಲ. ಈಗಾಗಲೇ ಸಾಕಷ್ಟ ಹಣ ವೆಚ್ಚ ಮಾಡಲಾಗಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಇಂದಿಲ್ಲಿ ಹೇಳಿದರು.

8,500 ಕೋಟಿ ರೂ.ಮೊತ್ತದ ವಿವಿಧ ಕಾಮಗಾರಿಗಳು ಪ್ರಾರಂಭವಾಗಿವೆ. ರಸ್ತೆ, ಫ್ಲೈ ಓವರ್, ಚರಂಡಿ ಸೇರಿದಂತೆ ವಿವಿಧ ಕಾಮಗಾರಿಗಳು ಸೇರಿವೆ. 150 ಕೋಟಿ ರೂ.ಗಳಿಗಿಂತ ಹೆಚ್ಚು ಹಣ 28 ಕ್ಷೇತ್ರಗಳಿಗೆ ಹಂಚಿಕೆಯಾಗಿದೆ. ಹೀಗಾಗಿ ನವ ಬೆಂಗಳೂರು ಯೋಜನೆಗೆ ತಡೆ ಬೇಡ. ಗುಣಮಟ್ಟ ಪರಿಶೀಲನೆಗೆ ಅಭ್ಯಂತರವಿಲ್ಲ ಎಂದರು.

ಆಸ್ತಿಗಳ ಋಣಮುಕ್ತ ಮಾಡಿದ್ದೇವೆ: ಮಾಜಿ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ, ಬಿಜೆಪಿಯವರು ಈ ಹಿಂದೆ ಬಿಬಿಎಂಪಿ ಆಸ್ತಿಗಳನ್ನು ಅಡವಿಟ್ಟು ಹೋಗಿದ್ದರು. ಸಿದ್ದರಾಮಯ್ಯ ಅವಧಿಯಲ್ಲಿ ನಾವು ಅವುಗಳನ್ನು ಬಿಡಿಸಿದ್ದೆವು ಎಂದು ತಿಳಿಸಿದರು.

ಹೊರವಲಯದ 110 ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸಿದ್ದೇವೆ. ಮಳೆ ನೀರಿನಿಂದ ರಸ್ತೆ ಗುಂಡಿ ಬೀಳುತ್ತಿದ್ದವು. ಈಗ ವೈಟ್ ಟಾಪಿಂಗ್ ಮಾಡುತ್ತಿದ್ದೇವೆ. ಇದರಿಂದ 30 ವರ್ಷ ರಸ್ತೆ ಗುಣಮಟ್ಟದಿಂದ ಕೂಡಿರುತ್ತದೆ. ಹೊರಭಾಗದ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಉತ್ತಮ ಕೆಲಸಗಳು ಈಗ ನಡೆಯುತ್ತಿವೆ. ಇದನ್ನ ನಿಲ್ಲಿಸಿದರೆ ಅಭಿವೃದ್ಧಿ ಕಾಮಗಾರಿ ನಿಲ್ಲುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X