ಧಾರಾಕಾರ ಮಳೆ: ಬೆಳಗಾವಿಯ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ
![ಧಾರಾಕಾರ ಮಳೆ: ಬೆಳಗಾವಿಯ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ ಧಾರಾಕಾರ ಮಳೆ: ಬೆಳಗಾವಿಯ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ](https://www.varthabharati.in/sites/default/files/images/articles/2019/08/5/203916-1565015279.jpg)
ಸಾಂದರ್ಭಿಕ ಚಿತ್ರ
ಬೆಳಗಾವಿ, ಆ.5: ಬೆಳಗಾವಿ ಜಿಲ್ಲೆಯಾದ್ಯಂತ ನಿರಂತರವಾಗಿ ಧಾರಾಕಾರವಾಗಿ ಮಳೆ ಆಗುತ್ತಿರುವುದರಿಂದ ಚಿಕ್ಕೋಡಿ ಹಾಗೂ ಬೆಳಗಾವಿ ಶೈಕ್ಷಣಿಕ ಜಿಲ್ಲೆಯ (ರಾಮದುರ್ಗ ತಾಲೂಕು ಹೊರತುಪಡಿಸಿ) ಎಲ್ಲ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಆಗಸ್ಟ್ 6 ಮತ್ತು 7 ರಂದು ರಜೆ ಘೋಷಿಸಿ ಬೆಳಗಾವಿ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.
Next Story