ಆ. 6ರಂದು ಉಡುಪಿ ಜಿಲ್ಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಇಲ್ಲ: ಜಿಲ್ಲಾಡಳಿತ ಸ್ಪಷ್ಟನೆ
ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುಳ್ಳು ಸುದ್ದಿ

ಉಡುಪಿ: ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ಆ. 6 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿಸಲಾಗಿದೆ. ಕೆಲವು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗುತ್ತಿರುವ ಈ ಸಂದೇಶ ವಾಸ್ತವವಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ಉಡುಪಿ ಜಿಲ್ಲೆಯಲ್ಲಿ ರೆಡ್ ಅಲಟ್೯ ಘೋಷಿಸಿಲ್ಲ ಎಂದೂ ಸ್ಪಷ್ಟ ಪಡಿಸಿದೆ.
Next Story





