Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಒಂದು ವರ್ಷದಲ್ಲಿ ಬಿಬಿಎಂಪಿಯ ಆರು...

ಒಂದು ವರ್ಷದಲ್ಲಿ ಬಿಬಿಎಂಪಿಯ ಆರು ಆಸ್ತಿಗಳು ಋಣಮುಕ್ತ

ವಾರ್ತಾಭಾರತಿವಾರ್ತಾಭಾರತಿ5 Aug 2019 11:00 PM IST
share
ಒಂದು ವರ್ಷದಲ್ಲಿ ಬಿಬಿಎಂಪಿಯ ಆರು ಆಸ್ತಿಗಳು ಋಣಮುಕ್ತ

ಬೆಂಗಳೂರು, ಆ.5: ಬಿಬಿಎಂಪಿಯು ಕಳೆದ ಒಂದು ವರ್ಷದ ಅವಧಿಯಲ್ಲಿ ಆರು ಆಸ್ತಿಗಳನ್ನು ಋಣಮುಕ್ತಗೊಳಿಸುವ ಮೂಲಕ ಆರ್ಥಿಕ ಶಿಸ್ತನ್ನು ಪಾಲಿಸಿದೆ.

ಪಾಲಿಕೆಯಲ್ಲಿ ಹಿಂದೆ ಆಡಳಿತದಲ್ಲಿ ಬಿಜೆಪಿ ಸರಕಾರವು ನಗರದಲ್ಲಿನ 11 ಆಸ್ತಿಗಳನ್ನು ಅಡವಿಟ್ಟು ಆರ್ಥಿಕ ಅಶಿಸ್ತು ಪ್ರದರ್ಶಿಸಿತ್ತು. ಇದೀಗ ಆಡಳಿತದಲ್ಲಿರುವ ಮೈತ್ರಿ ಆಡಳಿತ ಅಡಮಾನವಿರಿಸಿದ್ದ ಆಸ್ತಿಗಳನ್ನು ಋಣಮುಕ್ತಗೊಳಿಸುತ್ತಿದೆ. ತಾನು ಅಡವಿಟ್ಟಿದ್ದ 11 ಆಸ್ತಿಗಳ ಪೈಕಿ ಈಗಾಗಾಲೇ 10 ಆಸ್ತಿಗಳನ್ನು ಬಿಡಿಸಿಕೊಂಡಿರುವ ಪಾಲಿಕೆ, ಕಳೆದ ಒಂದು ವರ್ಷದಲ್ಲಿ ಆರು ಆಸ್ತಿಗಳನ್ನು ಋಣಮುಕ್ತ ಮಾಡಿದೆ.

ಗಂಗಾಂಬಿಕೆ ಮಲ್ಲಿಕಾರ್ಜುನ್ ಪಾಲಿಕೆಯ ಮೇಯರ್ ಆಗಿ ಒಂದು ವರ್ಷ ಪೂರೈಸುವ ಮುನ್ನವೇ ಪಾಲಿಕೆಯ ಆರು ಆಸ್ತಿಗಳನ್ನು ಸಾಲದ ಸುಳಿಯಿಂದ ಬಿಡಿಸಿದಂತಾಗಿದೆ. ಒಂದೇ ವರ್ಷದಲ್ಲಿ ಸುಮಾರು 1086 ಕೋಟಿ ಸಾಲ ಹಿಂತಿರುಗಿಸಿರುವ ಪಾಲಿಕೆ, ಮತ್ತೆ ತನ್ನ ಆಸ್ತಿಗಳನ್ನು ತಮ್ಮದಾಗಿಸಿಕೊಂಡಿದೆ. ಈ ರೀತಿ ವರ್ಷವೊಂದರಲ್ಲಿ ಅತೀ ಹೆಚ್ಚು ಸಾಲ ಮರುಪಾವತಿ ಮಾಡಿರುವುದು ಪಾಲಿಕೆ ಇತಿಹಾಸದಲ್ಲೇ ಇದೇ ಮೊದಲ ಬಾರಿ ಎಂದು ವಿಶ್ಲೇಷಿಸಲಾಗುತ್ತಿದೆ.

2015-16ನೇ ಸಾಲಿನ ಆರ್ಥಿಕ ವರ್ಷದ ಅಂತ್ಯಕ್ಕೆ 11 ಆಸ್ತಿಗಳನ್ನು ಅಡವಿಟ್ಟಿದ್ದ ಬಿಬಿಎಂಪಿ 1796.41 ಕೋಟಿ ಸಾಲವನ್ನು ಹೊಂದಿತ್ತು. ನಂತರದ ಎರಡು ವರ್ಷಗಳಲ್ಲಿ 713 ಕೋಟಿ ಮರುಪಾವತಿಸಿದ ಬಿಬಿಎಂಪಿ, ಕೆಂಪೇಗೌಡ ಮ್ಯೂಸಿಯಂ, ಮೆಯೋ ಹಾಲ್, ಜಾನ್ಸನ್ ಮಾರ್ಕೆಟ್ ಮತ್ತು ಮಲ್ಲೇಶ್ವರ ಮಾರುಕಟ್ಟೆಗಳನ್ನು ಋಣಮುಕ್ತಗೊಳಿಸಿತ್ತು.

2018ರ ಆಗಸ್ಟ್‌ನಲ್ಲಿ ಮೇಯರ್ ಆಗಿ ಆಯ್ಕೆಯಾದ ಗಂಗಾಂಬಿಕೆ, ತಮ್ಮ ಅಧಿಕಾರಾವಧಿಯಲ್ಲಿ 1086 ಕೋಟಿ ರೂ. ಸಾಲ ಮರು ಪಾವತಿ ಮಾಡಿದ್ದಾರೆ. ಆರಂಭದಲ್ಲೇ 871 ಕೋಟಿ ರೂ. ಸಾಲ ಮರುಪಾವತಿಸಿ ದಾಸಪ್ಪ ಆಸ್ಪತ್ರೆ ಕಟ್ಟಡ, ಪಬ್ಲಿಕ್ ಯುಟಿಲಿಟಿ ಕಟ್ಟಡ, ಬಿಬಿಎಂಪಿ ಕಚೇರಿ ಪೂರ್ವ ಮತ್ತು ಕಲಾಸಿಪಾಳ್ಯ ಮಾರುಕಟ್ಟೆಯನ್ನು ಋಣಮುಕ್ತ ಮಾಡಿದ್ದರು.

ಗಂಗಾಂಬಿಕೆಯ ಅಧಿಕಾರದ ಅವಧಿ ಪೂರ್ತಿಯಾಗಲು ಇನ್ನೊಂದು ತಿಂಗಳಷ್ಟೇ ಬಾಕಿಯಿರುವ ಈ ಸಂದರ್ಭದಲ್ಲಿ ಮತ್ತೆ 211.68 ಕೋಟಿ ಸಾಲ ಮರುಪಾವತಿಸಿ ಸ್ಲಾಟರ್ ಹೌಸ್ ಮತ್ತು ರಾಜಾಜಿನಗರ ಆಸ್ತಿಯನ್ನು ಹಿಂಪಡೆದಿದ್ದಾರೆ. ಈ ಮೂಲಕ 1796 ಕೋಟಿ ಸಾಲ ಮೊತ್ತ 463 ಕೋಟಿಗೆ ಇಳಿದಿದೆ.

ಈಗಾಗಲೇ ಪಾಲಿಕೆ ಮಾಡಿದ್ದ ಸಾಲವನ್ನು ತೀರಿಸುವ ಉದ್ದೇಶದಿಂದ, ಸರಕಾರ ನೀಡುತ್ತಿದ್ದ ಅನುದಾನ ಮತ್ತು ಪಾಲಿಕೆಯ ತೆರಿಗೆ ಹಣವನ್ನು ಸರಿಯಾಗಿ ಬಳಕೆ ಮಾಡಲು ತೀರ್ಮಾನಿಸಲಾಗಿತ್ತು ಎಂದು ಪಾಲಿಕೆ ಆಯುಕ್ತ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.

ಬಿಬಿಎಂಪಿಯ ಮೇಯರ್ ಆಗಿ ಅಧಿಕಾರ ವಹಿಸಿಕೊಂಡ ಬಳಿಕ, ಪಾಲಿಕೆ ವ್ಯಾಪ್ತಿಯಲ್ಲಿನ ಆಸ್ತಿಗಳು ಕಾಪಾಡಿಕೊಳ್ಳುವುದು ನನ್ನ ಜವಾಬ್ದಾರಿ. ಆರ್ಥಿಕ ಶಿಸ್ತು ಕಾಪಾಡಲು ಯೋಜನೆ ರೂಪಿಸಿದ್ದೆವು. ಅದರ ಪ್ರಕಾರ ಆಸ್ತಿಗಳನು ಋಣಮುಕ್ತ ಮಾಡಲಾಗುತ್ತಿದೆ.

-ಗಂಗಾಂಬಿಕೆ ಮಲ್ಲಿಕಾರ್ಜುನ್, ಮೇಯರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X