ಭಾರೀ ಮಳೆ: ಆ. 6ರಂದು ಪುತ್ತೂರು, ಕಡಬ, ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ

ಪುತ್ತೂರು: ಭಾರೀ ಮಳೆಯಾಗುತ್ತಿರುವ ಕಾರಣ ಮಂಗಳವಾರ (ಆ. 6) ಪುತ್ತೂರು, ಕಡಬ ಮತ್ತು ಬೆಳ್ತಂಗಡಿ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ನೀಡಿ ಸಹಾಯಕ ಆಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ.
ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಒಂದು ದಿನದ ರಜೆ ನೀಡಲಾಗಿದೆ. ಪದವಿ ಮತ್ತು ನಂತರದ ತರಗತಿಗಳು ಎಂದಿನಂತೆ ನಡೆಯಲಿವೆ ಎಂದು ಪುತ್ತೂರು ಸಹಾಯಕ ಆಯುಕ್ತರಾದ ಎಚ್. ಕೆ. ಕೃಷ್ಣಮೂರ್ತಿ ತಿಳಿಸಿದ್ದಾರೆ.
Next Story





