Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ:...

ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ: ಕೃಷ್ಣಾ, ಘಟಪ್ರಭಾ ನದಿ ಪಾತ್ರಗಳಲ್ಲಿ ಪ್ರವಾಹ ಭೀತಿ

ಗ್ರಾಮಸ್ಥರು ಸುರಕ್ಷಿತ ಸ್ಥಳಗಳಿಗೆ ತೆರಳಲು ಬೆಳಗಾವಿ ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ6 Aug 2019 8:09 PM IST
share
ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ: ಕೃಷ್ಣಾ, ಘಟಪ್ರಭಾ ನದಿ ಪಾತ್ರಗಳಲ್ಲಿ ಪ್ರವಾಹ ಭೀತಿ

ಬೆಳಗಾವಿ, ಆ.6: ನೆರೆಯ ಮಹಾರಾಷ್ಟ್ರ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಾಗಿದೆ. ಕೃಷ್ಣಾ ಮತ್ತು ಘಟಪ್ರಭಾ ನದಿಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ನದಿ ದಂಡೆಯ ಗ್ರಾಮಸ್ಥರು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮನವಿ ಮಾಡಿಕೊಂಡಿದ್ದಾರೆ.

ಮಹಾರಾಷ್ಟ್ರದ ಜಲಾಶಯದಿಂದ ಕೃಷ್ಣಾ ನದಿಗೆ ಇಂದು ಬೆಳಗ್ಗೆ 8 ಗಂಟೆಯವರೆಗೆ 3 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಇದು 4 ಲಕ್ಷ ಕ್ಯೂಸೆಕ್‌ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಹಿಡಕಲ್ ಜಲಾಶಯ ಕೂಡ ಭರ್ತಿಯಾಗಿದ್ದು, ಒಂದು ಲಕ್ಷ ಕ್ಯೂಸೆಕ್ ಒಳಹರಿವು ಇದೆ. ಅದೇ ಪ್ರಮಾಣದಲ್ಲಿ ನೀರನ್ನು ಜಲಾಶಯದಿಂದ ಬಿಡುಗಡೆ ಮಾಡಲಾಗುತ್ತಿದೆ. ಆದುದರಿಂದ, ಕೃಷ್ಣಾ ಮತ್ತು ಘಟಪ್ರಭಾ ನದಿಪಾತ್ರದ ಜನರು ಆದಷ್ಟು ಬೇಗನೇ ಸುರಕ್ಷಿತ ಸ್ಥಳಕ್ಕೆ ತೆರಳಬೇಕು. ಸೇನೆ, ಪೊಲೀಸ್, ಅಗ್ನಿಶಾಮಕ ದಳ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಅನೇಕ ತಂಡಗಳು ಜನರು ಮತ್ತು ಜಾನುವಾರುಗಳನ್ನು ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಜಲಾವೃತಗೊಂಡಿರುವ ಗ್ರಾಮಗಳಲ್ಲಿ ಉಳಿದುಕೊಂಡಿರುವ ಜನ ಮತ್ತು ಜಾನುವಾರುಗಳನ್ನು ಸ್ಥಳಾಂತರಿಸುವ ಕೆಲಸ ನಿರಂತರವಾಗಿ ನಡೆದಿದೆ. ಆದಾಗ್ಯೂ ಯಾರಾದರೂ ಅಪಾಯದಲ್ಲಿ ಸಿಲುಕಿದ್ದರೆ ತಕ್ಷಣವೇ ಜಿಲ್ಲಾಧಿಕಾರಿ ಕಾರ್ಯಾಲಯ, ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಹಾಗೂ ವಿವಿಧ ತಾಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗಿರುವ ಸಹಾಯವಾಣಿ ಕೇಂದ್ರಗಳಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

2005-06ನೇ ಸಾಲಿನಲ್ಲಿ ಎದುರಾಗಿದ್ದ ಪ್ರವಾಹ ಪರಿಸ್ಥಿತಿ ಪುನಾರವರ್ತನೆಯಾಗುವ ಸಾಧ್ಯತೆಗಳಿರುವುದರಿಂದ ನದಿಪಾತ್ರದ ಜನರು ಗರಿಷ್ಠಮಟ್ಟದ ಎಚ್ಚರಿಕೆ ವಹಿಸಬೇಕು. ಯಾವುದೇ ಕಾರಣಕ್ಕೂ ಹರಿಯುತ್ತಿರುವ ನೀರಿನಲ್ಲಿ ಈಜಲು ಅಥವಾ ದಾಟಲು ಪ್ರಯತ್ನಿಸಬಾರದು. ಅಂತಹ ಸಂದರ್ಭಗಳಲ್ಲಿ ಸಹಾಯವಾಣಿ ಕೇಂದ್ರಕ್ಕೆ ಮಾಹಿತಿ ನೀಡಿದರೆ ಕೂಡಲೇ ರಕ್ಷಣಾ ತಂಡಗಳನ್ನು ಕಳುಹಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸಹಾಯವಾಣಿ/ನಿಯಂತ್ರಣ ಕೊಠಡಿ ಸಂಖ್ಯೆ: ಜಿಲ್ಲಾಧಿಕಾರಿ ಕಚೇರಿ-0831-2407290, ಪೊಲೀಸ್ ವರಿಷ್ಠಾಧಿಕಾರಿ ಕಚೇರಿ-0831-2405231, ಚಿಕ್ಕೋಡಿ-08338-272228, ರಾಯಭಾಗ: 08331-225482, ಅಥಣಿ: 08289-251146, ನಿಪ್ಪಾಣಿ: 08338-220395 ಸಹಾಯವಾಣಿ ಹಾಗೂ ನಿಯಂತ್ರಣ ಕೊಠಡಿಗಳಿಗೆ ನೆರವಿಗಾಗಿ ಸಂಪರ್ಕಿಸಬಹುದು.

ಮಲಪ್ರಭಾ ಜಲಾಶಯ ಭರ್ತಿ- 6 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸವದತ್ತಿಯಲ್ಲಿರುವ ಮಲಪ್ರಭಾ (ನವೀಲುತೀರ್ಥ)ಜಲಾಶಯ ಬಹುತೇಕ ಭರ್ತಿಯಾಗಿದ್ದು, ಇಂದು ಎಲ್ಲ ನಾಲ್ಕೂ ಗೇಟ್‌ಗಳ ಮೂಲಕ 6 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ ಎಂದು ನವೀಲುತೀರ್ಥ ಎಂ.ಎಲ್.ಬಿ.ಸಿ.ಸಿ ಅಧೀಕ್ಷಕ ಅಭಿಯಂತರ ಜಗದೀಶ್ ನಾಯಕ ತಿಳಿಸಿದ್ದಾರೆ.

ಮಲಪ್ರಭಾ ಜಲಾಶಯದ ಇಂದಿನ ಮಟ್ಟ 2075.00 ಅಡಿ ಇರುತ್ತದೆ. ಸದ್ಯಕ್ಕೆ 40 ಸಾವಿರ ಕ್ಯೂಸೆಕ್ ಒಳಹರಿವು ಇದ್ದು, ಜಲಾಶಯದ ಗರಿಷ್ಠ ಮಟ್ಟ 2079.50 ಆಗಿದೆ. ನದಿಯ ಒಳಹರಿವು ಹೆಚ್ಚಾದಂತೆ ಯಾವುದೇ ಕ್ಷಣದಲ್ಲೂ ನೀರು ಹೊರ ಬಿಡಲಾಗುವುದರಿಂದ ನದಿಪಾತ್ರದ ಜನರು ಮುಂಜಾಗ್ರತೆ ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.

ಧಾರಾಕಾರ ಮಳೆಯಾಗುತ್ತಿರುವುದರಿಂದ ಒಳಹರಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯ ಕೂಡ ಭರ್ತಿಯಾಗಿರುವುದರಿಂದ ಹೆಚ್ಚುವರಿ ನೀರನ್ನು ಬಿಡಲಾಗುತ್ತದೆ. ಆದುದರಿಂದ, ಜಲಾಶಯದ ಕೆಳಭಾಗದ ಜನರು ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಅವರು ಕೋರಿದ್ದಾರೆ.

ಕುಡಿಯುವ ನೀರು ಸರಬರಾಜು ಸ್ಥಗಿತ: ಬೆಳಗಾವಿ ನಗರದಲ್ಲಿ 3-4 ದಿನಗಳಿಂದ ಸುರಿದ ಭಾರಿ ಮಳೆಯಿಂದ ನೀರೆತ್ತುವ ಹಿಂಡಲಗಾ ಪಂಪಹೌಸ್ ನೀರಿನಿಂದ ಆವೃತವಾಗಿದ್ದು ಪಂಪ್ ಚಾಲನೆ ಸ್ಥಗಿತಗೊಳಿಸಲಾಗಿದೆ.

ಇದರಿಂದ ಹಿಂಡಲಗಾ ಮತ್ತು ರಕ್ಕಸಕೊಪ್ಪ ಪಂಪುಗಳು ಚಾಲನೆಯಲ್ಲಿಲ್ಲ. ಹಿಡಕಲ್ ಜಲಾಶಯದಲ್ಲಿ ನೀರಿನ ಪ್ರಮಾಣ ಅಪಾಯದ ಮಟ್ಟಕ್ಕೆ ಬಂದಿರುವುದರಿಂದ ಇಲ್ಲಿ ಕೂಡ ನೀರೆತ್ತುವ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ನೀರು ಸರಬರಾಜುವಿನಲ್ಲಿ ತುಂಬಾ ವ್ಯತ್ಯಯವಾಗಲಿದೆ.

ಪರಿಸ್ಥಿತಿಯು ಸಮಸ್ಥಿತಿಗೆ ಬಂದ ನಂತರ ಕುಡಿಯುವ ನೀರು ಸರಬರಾಜು ಮಾಡಲಾಗುವುದು. ಈ ಬಗ್ಗೆ ಸಾರ್ವಜನಿಕರು ಜಲಮಂಡಳಿಯೊಂದಿಗೆ ಸಹಕರಿಸಬೇಕು ಎಂದು ಬೆಳಗಾವಿಯ ಕುಡಿಯುವ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ನಿರ್ವಹಣಾ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X