ಬೈಕ್‌ಗೆ ಟ್ರ್ಯಾಕ್ಟರ್ ಢಿಕ್ಕಿ: ಬಿಎಸ್‌ಎನ್‌ಎಲ್ ಗುತ್ತಿಗೆ ನೌಕರ ಮೃತ್ಯು
ಬೆಂಗಳೂರು, ಆ.6: ಬೈಕ್‌ಗೆ ಟ್ರ್ಯಾಕ್ಟರ್ ಢಿಕ್ಕಿ ಹೊಡೆದ ಪರಿಣಾಮ, ಬಿಎಸ್‌ಎನ್‌ಎಲ್ ಗುತ್ತಿಗೆ ನೌಕರ ಮೃತಪಟ್ಟಿರುವ ಘಟನೆ ಇಲ್ಲಿನ ಹಲಸೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಮಮೂರ್ತಿನಗರದ ರಾಘವೇಂದ್ರ (33) ಮೃತಪಟ್ಟಿದ್ದು, ಘಟನೆಯಲ್ಲಿ ಗಾಯಗೊಂಡಿರುವ ಸುಬ್ರಮಣಿ ಅವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ರಾಘವೇಂದ್ರ ಅವರು ಸೋಮವಾರ ಮಧ್ಯಾಹ್ನ ವೇಳೆ ಸ್ನೇಹಿತ ಸುಬ್ರಮಣಿ ಅವರನ್ನು ಬೈಕ್‌ನಲ್ಲಿ ಹಿಂದೆ ಕೂರಿಸಿಕೊಂಡು ಸಿಎಂಎಚ್ ರಸ್ತೆಯಲ್ಲಿ ಹೋಗುತ್ತಿದ್ದಾಗ ಟ್ರ್ಯಾಕ್ಟರ್ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬಲಗಡೆ ಬಿದ್ದ ರಾಘವೇಂದ್ರ ಅವರ ಮೇಲೆ ಟ್ರ್ಯಾಕ್ಟರ್ ಹರಿದು ಸ್ಥಳದಲ್ಲೇ ಮೃತಪಟ್ಟರೆ, ಎಡಕ್ಕೆ ಬಿದ್ದ ಸುಬ್ರಮಣಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ.
ಪ್ರಕರಣ ದಾಖಲಿಸಿರುವ ಹಲಸೂರು ಸಂಚಾರ ಠಾಣಾ ಪೊಲೀಸರು, ಟ್ರ್ಯಾಕ್ಟರ್ ಚಾಲಕನನ್ನು ಬಂಧಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.
Next Story