ಧಾರವಾಡ : ಆ.10ರವರೆಗೆ ಶಾಲೆ, ಕಾಲೇಜುಗಳಿಗೆ ರಜೆ
![ಧಾರವಾಡ : ಆ.10ರವರೆಗೆ ಶಾಲೆ, ಕಾಲೇಜುಗಳಿಗೆ ರಜೆ ಧಾರವಾಡ : ಆ.10ರವರೆಗೆ ಶಾಲೆ, ಕಾಲೇಜುಗಳಿಗೆ ರಜೆ](https://www.varthabharati.in/sites/default/files/images/articles/2019/08/7/204207-1565174797.jpg)
ಧಾರವಾಡ : ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆ, ಕಾಲೇಜು, ವಿಶ್ವವಿದ್ಯಾಲಯ ಸೇರಿದಂತೆ ಮತ್ತಿತರ ಶಿಕ್ಷಣ ಸಂಸ್ಥೆಗಳಿಗೆ ಆ.10ರ ವರೆಗೆ ರಜಾ ಅವಧಿಯನ್ನು ವಿಸ್ತರಿಸಿ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.
ಮಕ್ಕಳು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
Next Story