Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಆ. 10-11ರಂದು ಬಿ.ವಿ....

ಮಂಗಳೂರು: ಆ. 10-11ರಂದು ಬಿ.ವಿ. ಕಕ್ಕಿಲ್ಲಾಯ ಶತಾಬ್ಧಿ ಕಾರ್ಯಕ್ರಮ

ಡಾ. ಕನ್ಹಯ್ಯ ಕುಮಾರ್ ಮಂಗಳೂರಿಗೆ

ವಾರ್ತಾಭಾರತಿವಾರ್ತಾಭಾರತಿ7 Aug 2019 6:23 PM IST
share
ಮಂಗಳೂರು: ಆ. 10-11ರಂದು  ಬಿ.ವಿ. ಕಕ್ಕಿಲ್ಲಾಯ ಶತಾಬ್ಧಿ ಕಾರ್ಯಕ್ರಮ

ಮಂಗಳೂರು, ಆ.7: ಹಿರಿಯ ಸ್ವಾತಂತ್ರ ಹೋರಾಟಗಾರ, ಕರ್ನಾಟಕ ಏಕೀಕರಣ ಚಳುವಳಿಯ ಧುರೀಣ, ರಾಜ್ಯಸಭೆ ಮತ್ತು ಕರ್ನಾಟಕ ವಿಧಾನ ಸಭೆಯ ಸದಸ್ಯರಾಗಿ ಗಮನ ಸೆಳೆದ, ಸಾಮಾಜಿಕ ಮತ್ತು ಜನಪರ ಹೋರಾಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡ, ಲೇಖಕರಾಗಿ ನಾಡು-ನುಡಿಗೆ ಸುದೀರ್ಘಕಾಲ ಸೇವೆ ಸಲ್ಲಿಸಿದ್ದ ಬಿ.ವಿ. ಕಕ್ಕಿಲ್ಲಾಯ (1919-2012) ಅವರ ಜನ್ಮ ಶತಾಬ್ಧಿಯ ಪ್ರಯುಕ್ತ ಆ.10 ಮತ್ತು 11ರಂದು ನಗರದ ಬಲ್ಮಠದ ಸಹೋದಯ ಸಭಾಂಗಣದ ಬಿಷಪ್ ಜತ್ತನ್ನ ಸಭಾಂಗಣದಲ್ಲಿ ವಿಚಾರಗೋಷ್ಠಿ, ಉಪನ್ಯಾಸ, ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿ.ವಿ. ಕಕ್ಕಿಲ್ಲಾಯರ ಪುತ್ರ ಡಾ. ಶ್ರೀನಿವಾಸ ಕಕ್ಕಿಲ್ಲಾಯ ತಿಳಿಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಅವರು, ಮಂಗಳೂರಿನ ಸಮದರ್ಶಿ ವೇದಿಕೆ, ಬೆಂಗಳೂರಿನ ಹೊಸತು ಪತ್ರಿಕೆ ಮತ್ತು ಎಂ.ಎಸ್. ಕೃಷ್ಣನ್ ಸ್ಮರಣ ಸಂಸ್ಥೆ ಹಾಗೂ ನವಕರ್ನಾಟಕ ಪಬ್ಲಿಕೇಶನ್ಸ್ ಪ್ರೈವೇಟ್ ಲಿ. ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಆ.10ರಂದು ಬೆಳಗ್ಗೆ 10 ಗಂಟೆಗೆ ಹಿರಿಯ ಕಾರ್ಮಿಕ ನಾಯಕಿ, ಎಐಟಿಯುಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಮರ್‌ಜೀತ್ ಕೌರ್ ಉದ್ಘಾಟಿಸಲಿದ್ದಾರೆ. ಬಳಿಕ ಅವರು ‘ಭಾರತದ ಸ್ವಾತಂತ್ರ ಸಂಗ್ರಾಮ ಹಾಗೂ ರಾಷ್ಟ್ರ ನಿರ್ಮಾಣಗಳಲ್ಲಿ ದುಡಿಯುವ ವರ್ಗದ ಚಳುವಳಿಯ ಪಾತ್ರ’ ಎಂಬ ವಿಷಯದಲ್ಲಿ ಮಾತನಾಡಲಿದ್ದಾರೆ ಎಂದರು.

ಪೂರ್ವಾಹ್ನ 11 ಗಂಟೆಗೆ ಡಾ. ಕನ್ಹಯ್ಯ ಕುಮಾರ್ ‘ಕವಲುದಾರಿಯಲ್ಲಿ ಭಾರತದ ಯುವಜನರು’ ಎಂಬ ವಿಷಯದಲ್ಲಿ ಮಾತನಾಡಲಿದ್ದು, ಡಾ. ಅಮರ್‌ಜೀತ್ ಕೌರ್ ಇದಕ್ಕೆ ಪ್ರತಿಕ್ರಿಯಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಕಳಲೆ ಪಾರ್ಥಸಾರಥಿ ‘ರಾಷ್ಟ್ರೀಯ ಪ್ರಜಾಸತ್ತಾತ್ಮಕ ಕ್ರಾಂತಿ’ ಎಂಬ ವಿಷಯದಲ್ಲಿ ಮಾತನಾಡಲಿದ್ದು, ದಿನೇಶ್ ಅಮೀನ್ ಮಟ್ಟು ಇದಕ್ಕೆ ಪ್ರತಿಕ್ರಿಯಿಸಲಿದ್ದಾರೆ. ಸಂಜೆ 4 ಗಂಟೆಗೆ ಪ್ರೊ. ಆನಂದ ತೇಲ್ದುಂಬೆ ‘ದಮನಿತರ ಹೋರಾಟಗಳು: ಸಿದ್ಧಾಂತ ಮತ್ತು ಕ್ರಿಯೆ’ ಎಂಬ ವಿಷಯದಲ್ಲಿ ಮಾತನಾಡಲಿದ್ದು, ಡಾ. ಕನ್ಹಯ್ಯ ಕುಮಾರ್ ಪ್ರತಿಕ್ರಿಯಿಸಲಿದ್ದಾರೆ. ಈ ಮೂರು ಚರ್ಚಾ ಗೋಷ್ಠಿಯಲ್ಲೂ ತಲಾ ಒಂದೊಂದು ಗಂಟೆ ಸಭಿಕರೊಂದಿಗೆ ಸಂವಾದವೂ ನಡೆಯಲಿದೆ ಎಂದು ಹೇಳಿದರು.

ಆ.11ರಂದು ಬೆಳಗ್ಗೆ 10 ಗಂಟೆಗೆ ಡಾ. ಸಿದ್ಧನಗೌಡ ಪಾಟೀಲ್ ‘ಬಿ.ವಿ.ಕಕ್ಕಿಲ್ಲಾಯ: ಮಲಬಾರಿನಿಂದ ಕರ್ನಾಟಕ ವಿಧಾನಸಭೆಯವರೆಗೆ’ ಎಂಬ ವಿಷಯದಲ್ಲಿ ಮಾತನಾಡಲಿದ್ದಾರೆ. ಬೆಳಗ್ಗೆ 10:30ಕ್ಕೆ ‘ಕರ್ನಾಟಕದಲ್ಲಿ ಭೂ ಸುಧಾರಣೆ: ಎಲ್ಲಿಂದ ಎಲ್ಲಿಗೆ ?’ ಎಂಬ ವಿಷಯದಲ್ಲಿ ನಡೆಯುವ ಗೋಷ್ಠಿಯಲ್ಲಿ ಪ್ರೊ.ಮುಜಾಫರ್ ಅಸಾದಿ ಮತ್ತು ಪಿ. ವಿ.ಲೋಕೇಶ್ ಮಾತನಾಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ‘ಕನ್ನಡದಲ್ಲಿ ತತ್ವಶಾಸ್ತ್ರ, ಇತಿಹಾಸ ಮತ್ತು ಅರ್ಥಶಾಸ್ತ್ರದ ಬರಹಗಳು’ ಎಂಬ ವಿಷಯದಲ್ಲಿ ಡಾ. ಟಿ.ಎಸ್. ವೇಣುಗೋಪಾಲ್, ಡಾ. ವಿಜಯ ಪೂಣಚ್ಚ ತಂಬಂಡ, ಕಳಲೆ ಪಾರ್ಥಸಾರಥಿ ಮಾತನಾಡಲಿದ್ದಾರೆ. ಡಾ.ಜಿ.ರಾಮಕೃಷ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 4 ಗಂಟೆಗೆ ‘ಕಲೆಯ ಮರು ನಿರೂಪಣೆ’ ಕುರಿತಯ ಟಿಎಂ ಕೃಷ್ಣ ‘ಜಾತಿಗಳಾಚೆ’ ಮತ್ತು ನೂರ್ ಜಹೀರ್ ‘ಲಿಂಗ ತಾರತಮ್ಯಗಳಾಚೆ’ ವಿಷಯದಲ್ಲಿ ಮಾತನಾಡಲಿದ್ದಾರೆ. ಬಳಿಕ ಸಭಿಕರೊಂದಿಗೆ ಸಂವಾದವಿದೆ. ಸಂಜೆ 6 ಗಂಟೆಗೆ ನಡೆಯುವ ಸಮಾರೋಪದಲ್ಲಿ ಬಿನೋಯ್ ವಿಶ್ವಂ, ಸಾತಿ ಸುಂದರೇಶ್, ವಿ.ಕುಕ್ಯಾನ್, ಬಿ.ಕೆ.ಕೃಷ್ಣಪ್ಪ ಪಾಲ್ಗೊಳ್ಳಲಿದ್ದಾರೆ ಎಂದರು.

ಎರಡೂ ದಿನ ಸಾಂಸ್ಕೃತಿಕ ಕಾರ್ಯಕ್ರಮವಿದೆ. ಅಲ್ಲದೆ ಮರುಮುದ್ರಣಗೊಂಡ ಬಿ.ವಿ.ಕಕ್ಕಿಲ್ಲಾಯ ಅವರ ಆತ್ಮಕಥೆ ‘ಬರೆಯದ ದಿನಚರಿಯ ಮರೆಯದ ಪುಟಗಳು’ ಮತ್ತು ‘ಕಾಲ್‌ಮಾರ್ಕ್ಸ್: ಬದುಕು ಬರಹ’ ಮತ್ತು ಫೆಡರಿಕ್ ಎಂಗೆಲ್ಸ್: ಜೀವನ-ಚಿಂತನ’ ಕೃತಿ ಬಿಡುಗಡೆಗೊಳ್ಳಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮದರ್ಶಿ ವೇದಿಕೆಯ ನಾಗೇಶ್ ಕಲ್ಲೂರು, ವಿ.ಕುಕ್ಯಾನ್, ಎಚ್.ವಿ.ರಾವ್, ಎಐಟಿಯುಸಿ ನಾಯಕ ಕರುಣಾಕರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X