Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರಾವಳಿ ಪ್ರವಾಸೋದ್ಯಮಕ್ಕೆ ಇನ್ನಷ್ಟು...

ಕರಾವಳಿ ಪ್ರವಾಸೋದ್ಯಮಕ್ಕೆ ಇನ್ನಷ್ಟು ಉತ್ತೇಜನ: ಡಿಸಿ

ಪ್ರವಾಸೋದ್ಯಮ ಬೆಳವಣಿಗೆ ‘ಕನೆಕ್ಟ್-2019’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ7 Aug 2019 8:17 PM IST
share
ಕರಾವಳಿ ಪ್ರವಾಸೋದ್ಯಮಕ್ಕೆ ಇನ್ನಷ್ಟು ಉತ್ತೇಜನ: ಡಿಸಿ

ಮಂಗಳೂರು, ಆ.7: ದ.ಕ. ಹಾಗೂ ಉಡುಪಿ ಜಿಲ್ಲೆಗಳು ನೈಸರ್ಗಿಕದತ್ತವಾದ ಪ್ರಾಕೃತಿಕ, ಪಾರಂಪರಿಕ ಸಾಂಸ್ಕೃತಿಕ ಚೆಲುವನ್ನು ಹೊಂದಿದೆ. ಪ್ರವಾಸೋದ್ಯಮಕ್ಕೆ ಇನ್ನೂ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ ಪ್ರಕಟಿಸಿದ್ದಾರೆ.

ಪ್ರವಾಸೋದ್ಯಮ ಇಲಾಖೆಯಿಂದ ಏರ್ಪಡಿಸಿದ್ದ ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಬೆಳವಣಿಗೆ ಕುರಿತು ‘ಕನೆಕ್ಟ್-2019’ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮಕ್ಕೆ ಬೇಕಾಗುವ ಮೂಲಭೂತ ಸಂಪನ್ಮೂಲಗಳು ಸಾಕಷ್ಟು ಪ್ರಮಾಣದಲ್ಲಿದ್ದರೂ ಪ್ರವಾಸೋದ್ಯಮ ಬೆಳೆಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ಬೇಸರದ ಸಂಗತಿ. ಎರಡು ಜಿಲ್ಲೆಗಳ ಉದ್ದಿಮೆದಾರರು ಮತ್ತು ಸಣ್ಣ ಪ್ರಮಾಣದ ಹೂಡಿಕೆದಾರರು ಈ ಪ್ರವಾಸೋದ್ಯಮಕ್ಕೆ ಸಹಾಯಕಾರಿಯಾದ ವಾತಾವರಣವನ್ನು ಉದ್ಯಮದ (ಹೊಟೇಲ್, ಟ್ರ್ಯಾವಲರ್ಸ್‌ ಮತ್ತು ಹೋಮ್ ಸ್ಟೇ) ಮೂಲಕ ಪ್ರವಾಸಿಗರನ್ನು ಆಕರ್ಷಿಸುವುದರ ಜೊತೆಗೆ ಪ್ರವಾಸೋದ್ಯಮಕ್ಕೆ ಸಹಕಾರ ನೀಡಬೇಕು ಎಂದರು.

ಬೆಂಗಳೂರಿನಲ್ಲಿ ಆ.25ರಿಂದ 27ರವರೆಗೆ ನಡೆಯುವ ಕರ್ನಾಟಕ ಇಂಟರ್‌ನ್ಯಾಷನಲ್ ಟ್ರ್ಯಾವಲ್ ಎಕ್ಸ್‌ಪೋ-2019 ಕಾರ್ಯಕ್ರಮದಲ್ಲಿ ಸಾಕಷ್ಟು ಮಾಹಿತಿ ಮತ್ತು ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಅನೇಕ ವಿಚಾರಗಳು ವಿನಿಮಯವಾಗಲಿದೆ. ಕರಾವಳಿಯನ್ನು ಪ್ರವಾಸೋದ್ಯ ಮದಲ್ಲಿ ಮತ್ತಷ್ಟು ಸುಂದರವಾಗಿಸುವುದಕ್ಕೆ ಸಹಕಾರಿಯಾಗಲಿದೆ. ಎಲ್ಲ ಹೂಡಿಕೆದಾರರು, ಸಣ್ಣ ಪ್ರಮಾಣದ ಮತ್ತು ದೊಡ್ಡ ಪ್ರಮಾಣದ ಉದ್ಯಮಿಗಳು ಭಾಗವಹಿಸಿ, ಆ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಮುಖ್ಯಅತಿಥಿಗಳಾಗಿ ಪ್ರವಾಸೋದ್ಯಮ ಇಲಾಖೆ ಜಂಟಿ ಆಯುಕ್ತ ಡಾ.ಎಸ್.ನವೀನ್ ಕುಮಾರ್ ರಾಜು ಮಾತನಾಡಿ, ಕರ್ನಾಟಕ ಇಂಟರ್‌ನ್ಯಾಷನಲ್ ಟ್ರ್ಯಾವಲ್ ಎಕ್ಸ್‌ಪೋ-2019 ಕಾರ್ಯಕ್ರಮವು ಸುಮಾರು ಎರಡು ವರ್ಷಗಳ ನಿರಂತರ ಪರಿಶ್ರಮದಿಂದ ತಯಾರಿ ನಡೆಯುತ್ತಿದ್ದು, ಪ್ರವಾಸೋದ್ಯಮಕ್ಕೆ ಹೊಸ ಆಯಾಮ ತಂದು ಕೊಡುವ ಕನಸಿನ ಕಾರ್ಯಕ್ರಮ ಇದಾಗಿದೆ ಎಂದರು.

ಕಾರ್ಯಕ್ರಮದ ಮೂಲ ಉದ್ದೇಶವೇ ಸಣ್ಣ ಪ್ರಮಾಣದ ಹೂಡಿಕೆದಾರರಿಗೆ ಮತ್ತು ಉದ್ದಿಮೆದಾರಿಗೆ ತಮ್ಮ ಉದ್ಯಮವನ್ನು ವಿವಿಧ ದೇಶ ಮತ್ತು ರಾಜ್ಯಗಳ ಪ್ರವಾಸಿಗಳಿಗೆ ಪರಿಚಯಿಸುವುದಕ್ಕೆ ಮತ್ತು ಪ್ರವಾಸೋದ್ಯಮವನ್ನು ಉತ್ತೇಜನ ಮಾಡುವುದಕ್ಕೆ ಒಳ್ಳೆಯ ವೇದಿಕೆಯಾಗಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕ ಡಾ.ಉದಯ ಶೆಟ್ಟಿ, ಉಡುಪಿಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ನಾಯ್ಕಿ, ಕರಾವಳಿ ಪ್ರವಾಸೋದ್ಯಮ ಸಂಘಟನೆಯ ಅಧ್ಯಕ್ಷ ಮನೋಹರ ರೈ, ಹೊಟೇಲ್ ಅಸೋಸಿಯಶನ್‌ನ ದ.ಕ. ಜಿಲ್ಲಾ ಅಧ್ಯಕ್ಷ ಕುಡಿಪಿ ಜಗದೀಶ್ ಶೆಣೈ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X