Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 73ನೇ ಸ್ವಾತಂತ್ರೋತ್ಸವಕ್ಕೆ ರಾಜಧಾನಿ...

73ನೇ ಸ್ವಾತಂತ್ರೋತ್ಸವಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ಸಿದ್ಧತೆ ಪೂರ್ಣ

12 ಸಾವಿರ ಆಸನಗಳ ಏರ್ಪಾಡು

ವಾರ್ತಾಭಾರತಿವಾರ್ತಾಭಾರತಿ7 Aug 2019 9:01 PM IST
share

ಬೆಂಗಳೂರು, ಆ.7: 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ಸಂಭ್ರಮದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಈ ಬಾರಿ 12 ಸಾವಿರ ಆಸನಗಳ ಏರ್ಪಾಡು ಮಾಡಿರುವುದು ವಿಶೇಷವಾಗಿದೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ, ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಆ.15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದರು.

ಈ ವೇಳೆ ಭಾರತೀಯ ವಾಯುಪಡೆ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ಮಾಡಲಾಗುತ್ತದೆ. ಸಾಂಸ್ಕೃತಿಕ ಕಾರ್ಯಕ್ರಮಗಳ ನಂತರ ಮುಖ್ಯಮಂತ್ರಿಗಳು ಸ್ವಾತಂತ್ರೋತ್ಸವದ ಸಂದೇಶ ನೀಡುತ್ತಾರೆ.

ಪಥ ಸಂಚಲನ: ಪಥಸಂಚಲನದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್, ಎನ್‌ಸಿಸಿ, ಸೇವಾದಳ ಹಾಗೂ ವಿವಿಧ ಶಾಲೆಗಳ ಮಕ್ಕಳು ಸೇರಿದಂತೆ ಕವಾಯತು ಮತ್ತು ಬ್ಯಾಂಡ್‌ನ ಒಟ್ಟು 34 ತುಕಡಿಗಗಳು ಭಾಗವಹಿಸಲಿವೆ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸುಮಾರು 1,200 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ವೀಕ್ಷಣಾ ಗ್ಯಾಲರಿಯನ್ನು ಇನ್ನಷ್ಟು ವಿಸ್ತರಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಕಾರ್ಯಕ್ರಮ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಯಾವುದೇ ರೀತಿಯ ಆಕಸ್ಮಿಕ ವಿಪತ್ತು ಸಂಭವಿಸಿದಲ್ಲಿ ತಕ್ಷಣ ಪ್ರತಿಕ್ರಿಯಿಸಲು ಅಗತ್ಯವಿರುವಷ್ಟು ಆ್ಯಂಬುಲೆನ್ಸ್‌ಗಳನ್ನು ವೈದ್ಯಕೀಯ ಹಾಗೂ ವೈದ್ಯಕೀಯೇತರ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ ಎಂದು ಶ್ರೀನಿವಾಸ ಹೇಳಿದರು.

ಆಸನ ವ್ಯವಸ್ಥೆ

* 1,200 -ಅತಿಗಣ್ಯರಿಗೆ

* 750 -ಗಣ್ಯರು, ಸ್ವಾತಂತ್ರ್ಯ ಹೋರಾಟಗಾರರು, ರಕ್ಷಣಾ ಇಲಾಖೆಯ ಅಧಿಕಾರಿ ಹಾಗೂ ಮಾಧ್ಯಮದವರಿಗೆ

* 2,500 -ವಿವಿಧ ಇಲಾಖೆಯ ಅಧಿಕಾರಿ, ನಿವೃತ್ತ ಸೇನಾಧಿಕಾರಿ ಹಾಗೂ ಬಿಎಸ್‌ಎಫ್ ಅಧಿಕಾರಿಗಳಿಗೆ

* 7,000 -ಸಾರ್ವಜನಿಕರಿಗೆ

ಎಲ್ಲೆಲ್ಲಿ ಪ್ರವೇಶ ?

ಗೇಟ್-1: ಗಣ್ಯರು, ಸ್ವಾತಂತ್ರ್ಯ ಹೋರಾಟಗಾರರು, ರಕ್ಷಣಾ ಇಲಾಖೆ ಅಧಿಕಾರಿ, ಪತ್ರಿಕಾ ಪ್ರತಿನಿಧಿಗಳಿಗೆ

ಗೇಟ್-2: ಅತಿ ಗಣ್ಯರಿಗೆ

ಗೇಟ್-3: ಇಲಾಖೆ ಅಧಿಕಾರಿ, ನಿವೃತ್ತ ಸೇನಾಧಿಕಾರಿ, ಬಿಎಸ್‌ಎಫ್ ಅಧಿಕಾರಿಗಳಿಗೆ

ಗೇಟ್-4: ಸಾರ್ವಜನಿಕರಿಗೆ

ಧ್ವಜಾರೋಹಣದ ಸಮಯ: ಬೆಳಗ್ಗೆ 9 ಗಂಟೆಗೆ ನಡೆಯಲಿದ್ದು, ಪಾಸ್ ಉಳ್ಳವರಿಗೆ ಅವಕಾಶ ಕಲ್ಪಿಸಲಾಗಿದೆ. ಹಾಗಾಗಿ, ಆಸಕ್ತರು, ಕೆಜಿ ರಸ್ತೆಯ ಕಂದಾಯ ಭವನದಲ್ಲಿರುವ ದಕ್ಷಿಣ ಉಪವಿಭಾಗಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಅಗತ್ಯ ದಾಖಲೆ ಸಲ್ಲಿಸಿ, ಪಾಸ್‌ಗಳನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X