Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಲವು ವಿಘ್ನಗಳ ನಡುವೆ ಮಂಗಳೂರು ತಲುಪಿದ...

ಹಲವು ವಿಘ್ನಗಳ ನಡುವೆ ಮಂಗಳೂರು ತಲುಪಿದ ಕುವೈತ್‌ನ ಉದ್ಯೋಗ ವಂಚಿತರು

ವಾರ್ತಾಭಾರತಿವಾರ್ತಾಭಾರತಿ7 Aug 2019 9:30 PM IST
share

ಮಂಗಳೂರು, ಆ.7: ಕುವೈತ್‌ನಲ್ಲಿ ಉದ್ಯೋಗ ವಂಚಿತರಾಗಿ ಕಳೆದ ಏಳೆಂಟು ತಿಂಗಳುಗಳಿಂದ ಅತಂತ್ರ ಸ್ಥಿತಿಯಲ್ಲಿದ್ದ ಕರಾವಳಿಯ 34 ಸಂತ್ರಸ್ತರು ಹಲವು ಏಳು-ಬೀಳುಗಳ ನಡುವೆಯೂ ಮಂಗಳೂರನ್ನು ತಲುಪುವಲ್ಲಿ ಯಶಸ್ವಿಯಾಗಿದ್ದಾರೆ.

ಸಂತ್ರಸ್ತರ ಪೈಕಿ ಕೊನೆಯ ಹಂತದ ಎಂಟು ಮಂದಿಯ ತಂಡವು ಬುಧವಾರ ನಸುಕಿನ ಜಾವ 1:30ಕ್ಕೆ ಮಂಗಳೂರಿನ ಮಿಲಾಗ್ರಿಸ್ ಸಮೀಪ ಬಂದಿಳಿಯಿತು. ಬಸ್‌ನಿಂದ ಕೆಳಗಿಳಿದ ತಕ್ಷಣವೇ ನೂರಾರು ನೋವುಗಳ ಮಧ್ಯೆ ಸಂತ್ರಸ್ತರು ತಮ್ಮನ್ನು ಕರೆದೊಯ್ಯಲು ಬಂದಿದ್ದ ಬಂಧು-ಹಿತೈಷಿಗಳನ್ನು ಬಿಗಿದಪ್ಪಿ ಕಣ್ಣೀರಾದರು.

‘ಮುಂಬೈನಿಂದ ಮಂಗಳೂರಿಗೆ ಮಂಗಳವಾರ ಬರುತ್ತಿದ್ದ ಬಸ್ ಬೆಳಗ್ಗೆ 9 ಗಂಟೆ ಸುಮಾರು ಶಿರಸಿ ಘಾಟ್‌ನ ಕೊನೆಯ ತಿರುವಿನ ಬಳಿ ವಿಪರೀತ ಮಳೆಯಿಂದಾಗಿ ಮುಂದಡಿ ಇಡದಂತೆ ಸ್ತಬ್ಧಗೊಂಡಿತು. ಕುಮಟಾದಿಂದ ಕೇವಲ 10 ಕಿ.ಮೀ. ದೂರದಲ್ಲಿ ಸಿಕ್ಕಿಹಾಕಿಕೊಂಡಿದ್ದೇವು. ಹಗಲಿಡೀ ಹಸಿವಿನಿಂದ ಬಳಲಿದೆವು. ಸಂಜೆ ಸ್ನೇಹಿತನೋರ್ವ ತಂದ ಆಹಾರದಿಂದ ಹಸಿವು ನೀಗಿಸಿಕೊಂಡೆವು. ಅಲ್ಲಿಂದ ರಾತ್ರಿ 9:30ರ ಸುಮಾರು ಬಸ್ ತೆರಳಲು ಮಾರ್ಗ ಅನುಕೂಲಕರವಾಯಿತು. ಅಲ್ಲಿಂದ ಹೊರಟು ಮಂಗಳೂರು ತಲುಪಿದ ತಕ್ಷಣ ದೊಡ್ಡ ಗಂಡಾತರದಿಂದ ಬಿಡುಗಡೆ ಪಡೆದಂತಾಯಿತು’ ಎಂದು ಕುವೈತ್‌ನಲ್ಲಿ ಸಂಕಷ್ಟಕ್ಕೀಡಾದ ಸಂತ್ರಸ್ತ ಅಝೀಝ್ ಅಬ್ದುಲ್ ಬೋಳಾಯಿ ನಿಟ್ಟುಸಿರು ಬಿಟ್ಟರು.

‘ಮಾರ್ಗ ಮಧ್ಯದಲ್ಲೇ ಸಿಲುಕಿದ್ದ ಸಂತ್ರಸ್ತರನ್ನು ಬಚಾವು ಮಾಡಲು ಖಾಸಗಿ ಬಸ್‌ನವರು ಯಾವುದೇ ರೀತಿಯಲ್ಲೂ ಪ್ರತಿಕ್ರಿಯಿಸಲಿಲ್ಲ. ಘಾಟ್ ಪ್ರದೇಶವು ಜನಸಂಪರ್ಕವಿಲ್ಲದ ಸ್ಥಳ. ಪ್ರಕೃತಿಯ ರೌದ್ರತೆ ಮಧ್ಯೆ ವಿಲವಿಲನೆ ಒದ್ದಾಡುತ್ತಿದ್ದ ಸಂತ್ರಸ್ತರ ಕಷ್ಟವನ್ನು ಪ್ರಕೃತಿಯೇ ಅರಿತುಕೊಂಡು ಮಳೆನೀರು ನಿಯಂತ್ರಣಕ್ಕೆ ಬಂತು. ಇದರಿಂದ ಬಸ್ ತೆರಳಲು ಅನುಕೂಲವಾಯಿತು’ ಎನ್ನುತ್ತಾರೆ ಅಝೀಝ್ ಅಬ್ದುಲ್ ಬೋಳಾಯಿ ಅವರು.

ಶಾಸಕರಿಗೆ ಮನವಿ: ‘ಕುವೈತ್‌ಗೆ ಉದ್ಯೋಗಕ್ಕೆಂದು ತೆರಳಿ ನರಕಯಾತನೆ ಅನುಭವಿಸಿದೆವು. ಉದ್ಯೋಗ ನೀಡುವುದಾಗಿ ಕರೆದೊಯ್ದಿದ್ದ ಏಜೆನ್ಸಿಯು ನಮಗೆ ಅನ್ಯಾಯ ಮಾಡಿದೆ. ಏಜೆನ್ಸಿಗೆ ಪ್ರತಿ ಸಂತ್ರಸ್ತರು ಸುಮಾರು 60 ಸಾವಿರ ರೂ. ಕೊಟ್ಟಿದ್ದೇವೆ. ಈ ಪೈಕಿ ಹಲವರು ಸಾಲ ಮಾಡಿ ಹಣ ಪಾವತಿಸಿದ್ದರು. ಕಳೆದ ಏಳು ತಿಂಗಳಿಂದ ಒಂದು ರೂಪಾಯಿ ಕೂಡ ದುಡಿಮೆಯಾಗಿಲ್ಲ. ನಾವು ಪಾವತಿಸಿದ ಹಣವನ್ನು ಏಜೆನ್ಸಿಯಿಂದ ವಾಪಸ್ ಕೊಡಿಸಲು ಶಾಸಕ ವೇದವ್ಯಾಸ್ ಕಾಮತ್ ಅವರಲ್ಲಿ ಮನವಿ ಮಾಡುತ್ತೇವೆ’ ಎಂದು ಸಂತ್ರಸ್ತ ಅಝೀಝ್ ಅಬ್ದುಲ್ ಬೋಳಾಯಿ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X