Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎರಡು ಬಾರಿ ಉಡುಪಿ ಜಿಲ್ಲೆಗೆ ಬಂದಿದ್ದ...

ಎರಡು ಬಾರಿ ಉಡುಪಿ ಜಿಲ್ಲೆಗೆ ಬಂದಿದ್ದ ಸುಷ್ಮಾ ಸ್ವರಾಜ್

ವಾರ್ತಾಭಾರತಿವಾರ್ತಾಭಾರತಿ7 Aug 2019 9:56 PM IST
share
ಎರಡು ಬಾರಿ ಉಡುಪಿ ಜಿಲ್ಲೆಗೆ ಬಂದಿದ್ದ ಸುಷ್ಮಾ ಸ್ವರಾಜ್

ಉಡುಪಿ, ಆ.7: ಮಂಗಳವಾರ ರಾತ್ರಿ ಹೊಸದಿಲ್ಲಿಯಲ್ಲಿ ನಿಧನರಾದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು 1999 ಹಾಗೂ 2009 ರಲ್ಲಿ ಎರಡು ಬಾರಿ ಉಡುಪಿ ಜಿಲ್ಲೆಗೆ ಆಗಮಿಸಿದ್ದರು.

1999ರಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಭಾಷಣಕ್ಕಾಗಿ ಅವರು ಉಡುಪಿ ಹಾಗೂ ಕುಂದಾಪುರಗಳಿಗೆ ಭೇಟಿ ನೀಡಿದ್ದರು. 2009ರ ಸೆ.11ರಂದು ಅವರು ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರ ಪರ್ಯಾಯ ಸಂದರ್ಭದಲ್ಲಿ ಅವರ ವಿಶೇಷ ಅಹ್ವಾನದ ಮೇರೆಗೆ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅವರನ್ನು ಅಂದು ಮಠದ ವತಿಯಿಂದ ಸನ್ಮಾನಿಸಲಾಗಿತ್ತು. ಅವರೊಂದಿಗೆ ದಿ.ಅನಂತಕುಮಾರ್ ಸಹ ಆಗಮಿಸಿದ್ದರು.

ಪೇಜಾವರಶ್ರೀ ಸಂತಾಪ: ಸುಷ್ಮಾ ಸ್ವರಾಜ್‌ರ ನಿಧನದ ಸುದ್ದಿ ಕೇಳಿ ದುಃಖವಾಗಿದೆ. ಅವರ ರಾಷ್ಟ್ರ ಸೇವೆ ಅಮೋಘವಾದದ್ದು.ವಿದೇಶ ಸಚಿವೆ ಯಾಗಿ ಉತ್ತಮ ಕಾರ್ಯ ಮಾಡಿದ್ದರು. ನಮ್ಮ ಜೊತೆ ಹಲವು ವರ್ಷಗಳಿಂದ ಸಂಪರ್ಕ ದಲ್ಲಿದ್ದರು. ಅವರ ನಿಧನದಿಂದ ರಾಷ್ಟ್ರಕ್ಕೆ ದೊಡ್ಡ ನಷ್ಟ. ಕಾಶ್ಮೀರ ಗೊಂದಲ ಪರಿಹಾರ ಅವರ ಕೊನೆ ಆಸೆಯಾಗಿತ್ತು. ಅವರ ಟ್ವೀಟ್ನಿಂದ ರಾಷ್ಟ್ರಾಭಿಮಾನ ಬಹಿರಂಗವಾಗಿದೆ. ಅವರ ಚೇತನಕ್ಕೆ ಭಗವಂತನ ಅನುಗ್ರಹವಾಗಲಿ ಎಂದು ಮೈಸೂರಿನಲ್ಲಿ ಚಾತುರ್ಮಾಸ್ಯ ವೃತದಲ್ಲಿರುವ ಪೇಜಾವರ ಮಠದ ಶ್ರೀವಿಶ್ವೇಶ ತೀರ್ಥ ಶ್ರೀಪಾದರು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಪಲಿಮಾರುಶ್ರೀ:  ಮಾಜಿ ಸಚಿವೆ ಸುಷ್ಮಾ ಸ್ವರಾಜ್ ನಿಧನಕ್ಕೆ ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ. ತನ್ನ ಸಣ್ಣ ವಯಸ್ಸಿನಿಂದಲೆ ದೇಶಭಕ್ತಿಯನ್ನು ಮೈಗೂಡಿಸಿಕೊಂಡು ಬಂದು, ದೇಶ ಸೇವೆಗಾಗಿ ತನ್ನನ್ನು ಮುಡುಪಾಗಿಸಿಕೊಂಡಿದ್ದ, ವಿವಿಧ ಹುದ್ದೆಗಳನ್ನು ಅಲಂಕರಿಸಿ ವಿದೇಶಾಂಗ ಸಚಿವೆಯಾಗಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿದ ಧೀಮಂತ ನಾಯಕಿಯ ನಿಧನ ನಮಗೆ ದುಃಖ ತಂದಿದೆ. ಅವರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ಶ್ರೀಕೃಷ್ಣ ಮುಖ್ಯಪ್ರಾಣರಲ್ಲಿ ಪ್ರಾರ್ಥಿಸುತ್ತೇವೆ ಎಂದು ಹೇಳಿದ್ದಾರೆ.

ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥರು ಸಹ ಸುಷ್ಮಾ ಸ್ವರಾಜ್ ನಿಧನಕ್ಕೆ ತಮ್ಮ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. ಅದೇ ರೀತಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಅಲ್ಲದೇ ಜಿಲ್ಲಾ ಬಿಜೆಪಿ ಪಕ್ಷದ ವತಿಯಿಂದ ಇಂದು ಕಡಿಯಾಳಿಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶೃದ್ದಾಂಜಲಿ ಸಭೆ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X