ಕ್ರೀಡಾಪಟುಗಳಿಗೆ ಮನೆಪಾಠ ಹೇಳಲು ಗೌರವ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಉಡುಪಿ, ಆ.7: 2019-20ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ವತಿಯಿಂದ ನಡೆಸಲಾಗುತ್ತಿರುವ ಕ್ರೀಡಾ ವಸತಿ ನಿಲಯದ 8ನೇ ತರಗತಿಯಿಂದ 10ನೇ ತರಗತಿಯವರೆಗಿನ ಕ್ರೀಡಾಪಟುಗಳಿಗೆ ಗೌರವಧನದ ಆಧಾರದ ಮೇಲೆ ಮನೆಪಾಠ ಹೇಳಿ ಕೊಡಲು ಬಿ.ಎ. ಬಿಎಡ್/ಬಿ.ಎಸ್ಸಿ.ಬಿಎಡ್ ಪದವಿ ಹೊಂದಿರುವ ಶಿಕ್ಷಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಶಿಕ್ಷಕರು ತಮ್ಮ ಪ್ರಸ್ತಾವನೆಯನ್ನು ದೃಢೀಕೃತ ದಾಖಲೆಗಳೊಂದಿಗೆ ಆ.14ರೊಳಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡು, ಉಡುಪಿ ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗೆ ಸಹಾಯಕ ನಿರ್ದೇಶಕರ ಕಚೇರಿಯನ್ನು (ದೂರವಾಣಿ ಸಂಖ್ಯೆ: 0820-2521324) ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





