Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿಲ್ಲದ ಮಳೆಯ ಆರ್ಭಟ: ಕಾಫಿ ನಾಡು ತತ್ತರ,...

ನಿಲ್ಲದ ಮಳೆಯ ಆರ್ಭಟ: ಕಾಫಿ ನಾಡು ತತ್ತರ, ಹೊಲ ಗದ್ದೆಗಳು ಜಲಾವೃತ

►ಗ್ರಾಮೀಣ ಭಾಗಗಳಲ್ಲಿ ಪವರ್ ಕಟ್ ► ವಿದ್ಯುತ್ ತಂತಿ ತುಳಿದು ವ್ಯಕ್ತಿ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ7 Aug 2019 10:46 PM IST
share
ನಿಲ್ಲದ ಮಳೆಯ ಆರ್ಭಟ: ಕಾಫಿ ನಾಡು ತತ್ತರ, ಹೊಲ ಗದ್ದೆಗಳು ಜಲಾವೃತ

ಚಿಕ್ಕಮಗಳೂರು, ಆ.7: ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಾಫಿ ನಾಡಿನ ಜನತೆ ರೋಸಿ ಹೋಗಿದ್ದಾರೆ. ಕಳೆದ ಆರು ದಿನಗಳಿಂದ ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಗಾಳಿಯಿಂದಿಗೆ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕಾಫಿನಾಡಿನ ಜನಜೀವನ ಅಕ್ಷರಶಃ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ಪ್ರಮುಖ ನದಿಗಳಾದ ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಮಲೆನಾಡು ಭಾಗದ ಹಲವು ಗ್ರಾಮಗಳಲ್ಲಿ ರಸ್ತೆಗಳು, ಹೊಲ, ಗದ್ದೆಗಳು ಜಲಾವೃತಗೊಂಡಿವೆ. ಪ್ರಮುಖ ಹೆದ್ದಾರಿಗಳಲ್ಲಿ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಜಿಲ್ಲೆಯ ಮಲೆನಾಡು ಭಾಗದ ತಾಲೂಕುಗಳಾದ ಮೂಡಿಗೆರೆ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಹೋಬಳಿಗಳ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಬಯಲುಸೀಮೆ ತಾಲೂಕುಗಳಾದ ತರೀಕೆರೆಯಲ್ಲೂ ಎಡಬಿಡದೆ ಮಳೆಯಾಗುತ್ತಿದ್ದು, ಕಡೂರು ತಾಲೂಕು ವ್ಯಾಪ್ತಿಯಲ್ಲೂ ಆಗಾಗ್ಗೆ ಸಾಧಾರಣ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಈ ಪೈಕಿ ಮಲೆನಾಡು ಭಾಗದ ತಾಲೂಕುಗಳಲ್ಲಿ ಕಳೆದ ಆರು ದಿನಗಳಿಂದ ಹಗಲು, ರಾತ್ರಿ ನಿರಂತರ ಮಳೆಯಾಗುತ್ತಿದ್ದು, ಮಲೆನಾಡಿನ ಪ್ರಮುಖ ನದಿಗಳಾದ ತುಂಗಾ, ಭದ್ರಾ ಹಾಗೂ ಹೇಮಾವತಿ ಸೇರಿದಂತೆ ಸಣ್ಣಪುಟ್ಟ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಾ ಅಕ್ಕಪಕ್ಕದ ತೋಟ, ಹೊಲ ಗದ್ದೆಗಳಿಗೆ ನದಿಗಳ ನೀರು ಹರಿಯುತ್ತಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದ್ದು, ಹೇಮಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಪರಿಣಾಮ ನದಿ ತೀರದ ಗ್ರಾಮಗಳ ಜನರು ಗ್ರಾಮಗಳನ್ನು ತೊರೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಗೋಣಿಬೀಡು ಗ್ರಾಮದಲ್ಲಿ ಹರಿಯುವ ಹೇಮಾವತಿ ನದಿ ನೀರು ಅಕ್ಕಪಕ್ಕದಲ್ಲಿ ನಾಟಿ ಮಾಡಿದ್ದ ಭತ್ತದ ಗದ್ದೆ ಹಾಗೂ ಕಾಫಿ, ಅಡಿಕೆ ತೋಟಗಳಿಗೆ ನುಗ್ಗಿ ಅಪಾರ ನಷ್ಟವನ್ನುಂಟು ಮಾಡಿದೆ. ತಾಲೂಕಿನ ಬಣಕಲ್, ಕೊಟ್ಟಿಗೆಹಾರದಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿರುವ ಪರಿಣಾಮ ಅಕ್ಕಪಕ್ಕದ ಭತ್ತದ ಗದ್ದೆಗಳು ಜಲಾವೃತಗೊಂಡಿವೆ. ತಾಲೂಕಿನ ಕೊಟ್ಟಿಗೆಹಾರದಿಂದ ಗಬ್ಗಲ್ ಮಾರ್ಗವಾಗಿ ಮಾಗುಂಡಿ, ಬಾಳೆಹೊನ್ನೂರು ಸಂಪರ್ಕ ರಸ್ತೆಯ ಮೇಲೆ ಬುಧವಾರ ಬೆಳಗ್ಗೆ ಭಾರೀ ಪ್ರಮಾಣದಲ್ಲಿ ಹಳ್ಳದ ನೀರು ನೀರು ಹರಿಯುತ್ತಿದ್ದ ಪರಿಣಾಮ ಕೆಲಹೊತ್ತು ವಾಹನ ಸಂಚಾರ ಬಂದ್ ಆಗಿತ್ತು.

ಮೂಡಿಗೆರೆ-ಬೆಳ್ತಂಗಡಿ ಸಂಪರ್ಕದ ಚಾರ್ಮಾಡಿ ಘಾಟ್ ಹೆದ್ದಾರಿ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಘಾಟ್‍ನ ಉದ್ದಕ್ಕೂ ಧರೆ ಕುಸಿತ, ಮರಗಳು ರಸ್ತೆ ಮೇಲೆ ಉರುಳುತ್ತಿರುವ ಘಟನೆಗಳು ನಿರಂತರವಾಗಿದ್ದು, ಮಂಗಳವಾರ ರಾತ್ರಿ ಹಾಗೂ ಬುಧವಾರ ಬೆಳಗ್ಗೆ ಚಾರ್ಮಾಡಿ ಘಾಟ್‍ನ ಅಲ್ಲಲ್ಲಿ ಮತ್ತೆ ಮರಗಳು ರಸ್ತೆಗೆ ಉರುಳಿವೆ. ಬುಧವಾರ ಬೆಳಗ್ಗೆ ಕೊಟ್ಟಿಗೆಹಾರ ಸಮೀಪದ ಮಲಯ ಮಾರುತ ವಿಹಾರ ಧಾಮದ ಬಳಿ ಗುಡ್ಡ ಕುಸಿದ ಪರಿಣಾಮ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಆಗಿತ್ತು. ಇದರಿಂದಾಗಿ ಗಂಟೆಗೂ ಹೆಚ್ಚು ಕಾಲ ವಾಹನ ಟ್ರಾಫಿಕ್ ಜಾಮ್ ಸಂಭವಿಸಿತ್ತು. 

ಅಲ್ಲದೇ ಬುಧವಾರ ಘಾಟ್‍ನ ಕೆಲವೆಡೆ ರಸ್ತೆಯ ಮೇಲೆ ಮಣ್ಣು ಕುಸಿದು ಬಿದ್ದಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಹಾಗೂ ಪ್ರಾಕೃತಿಕ ವಿಕೋಪಗಳ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಭಾರೀ ತೊಂದರೆಯಾಗುತ್ತಿರುವುದರಿಂದ ಪ್ರಯಾಣಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿ ಬುಧವಾರ ಬೆಳಗ್ಗೆಯಿಂದಲೇ ಮೂಡಿಗೆರೆ ತಾಲೂಕು ವ್ಯಾಪ್ತಿಯ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಎಲ್ಲ ರೀತಿಯ ವಾಹನ ಸಂಚಾರವನ್ನು ನಿಷೇದಿಸಿತ್ತು. ಗುರುವಾರವೂ ಈ ಹೆದ್ದಾರಿಯಲ್ಲಿ ವಾಹನಗಳ ಸಂಚಾರವನ್ನು ನಿಷೇದಿಸಿದ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಸದ್ಯ ಸ್ಥಳೀಯರು ಹಾಗೂ ಪೊಲೀಸ್, ಅರಣ್ಯ, ಕಂದಾಯಾಧಿಕಾರಿಗಳು ಸ್ಥಳದಲ್ಲಿ ಮೊಕ್ಕಂ ಹೂಡಿ ರಸ್ತೆಯಲ್ಲಿದ್ದ ಮರ, ಮಣ್ಣು ತೆರವಿಗೆ ಶ್ರಮಿಸುತ್ತಿದ್ದಾರೆ. 
ಇನ್ನು ಮೂಡಿಗೆರೆ ತಾಲೂಕಿನ ಕಳಸ, ಕುದುರೆಮುಖ ಭಾಗದಲ್ಲಿ ಸತತ ಧಾರಾಕಾರ ಮಳೆಯಾಗುತ್ತಿದ್ದು, ಭದ್ರಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ನದಿ ಪಾತ್ರದ ಗ್ರಾಮಗಳ ಜನರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲಾಗಿದ್ದು, ಮಂಗಳವಾರ ಮುಳುಗಡೆಯಾಗಿದ್ದ ಕಳಸ-ಹೊರನಾಡು ಸಂಪರ್ಕದ ಹೆಬ್ಬಾಳೆ ಸೇತುವೆ ಬುಧವಾರವೂ ಭದ್ರಾ ನದಿ ನೀರು ಹರಿದು ಮತ್ತೆ ಮುಳುಗಡೆಯಾಗಿತ್ತು. ಕಳಸ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರ ವಾಹನಗಳನ್ನು ಪರ್ಯಾಯ ರಸ್ತೆಯ ಮೂಲಕ ಹೊರನಾಡು ದೇವಾಲಯಕ್ಕೆ ಕಳಿಸುತ್ತಿದ್ದಾರೆಂದು ತಿಳಿದು ಬಂದಿದೆ. ಹೊರನಾಡಿಗೆ ಸಂಪರ್ಕ ಕಲ್ಪಿಸುವ ಹಳುವಳ್ಳಿ-ಹೊರನಾಡು ರಸ್ತೆಯಲ್ಲಿಯೂ ಬುಧವಾರ ಮಣ್ಣು ಕುಸಿದು ಸಂಚಾರಕ್ಕೆ ಬಂದ್ ಆಗಿದ್ದರಿಂದ ಪ್ರವಸಿಗರ ವಾಹನಗಳು ಹಳ್ಳುವಳ್ಳಿಯಲ್ಲಿ ಬೀಡು ಬಿಡುವಂತಾಗಿತ್ತು.

ಶೃಂಗೇರಿ ತಾಲೂಕಿನ ಕೆರೆಕಟ್ಟೆ, ನೆಮ್ಮಾರ್, ಕಿಗ್ಗಾ, ಎಸ್‍ಕೆ ಬಾರ್ಡರ್ ಭಾಗದಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಪರಿಣಾಮ ಈ ಭಾಗದಲ್ಲಿರುವ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ತುಂಗಾ ನದಿಯಲ್ಲಿ ಭಾರೀ ನೀರಿನ ಹರಿವು ಬರುತ್ತಿರುವ ಪರಿಣಾಮ ಶೃಂಗೇರಿ ಪಟ್ಟಣದ ವಾಹನ ನಿಲುಗಡೆ ಸ್ಥಳವಾದ ಗಾಂಧಿ ಮೈದಾನ ಜಲಾವೃತಗೊಂಡಿದೆ. ಇನ್ನು ಮಂಗಳವಾರ ಮುಳುಗಿದ್ದ ಮಠದ ಕಪ್ಪೆ ಶಂಕರ ಮಠದ ಮೆಟ್ಟಿಲು ಹಾಗೂ ಸಂಧ್ಯಾವಂದನ ಮಂಟಪ ಬುಧವಾರವೂ ಮುಳುಗಡೆಯಾಗಿತ್ತು. 

ಕೊಪ್ಪ ತಾಲೂಕಿನಲ್ಲೂ ನಿರಂತರವಾಗಿ ಮಳೆಯಾಗುತ್ತಿದ್ದು, ತಾಲೂಕಿನಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದೆ. ಬುಧವಾರ ತಾಲೂಕಿನಾದ್ಯಂತ ಗಾಳಿ ಸಹಿತ ಮಳೆ ಬಿರುಸುಗೊಂಡಿದ್ದು, ತಾಲೂಕಿನ ಶಿವಪುರ ಸಮೀಪ ಹಳ್ಳದ ನೀರು ರಸ್ತೆಯ ಮೇಲೆ ಹರಿಯಲಾರಂಭಿಸಿದೆ. ಮಂಗಳವಾರ ಮುಳುಗಡೆಯಾಗಿದ್ದ ಕೊಗ್ರೆಯ ಹುಲ್ಲಿನಗದ್ದೆ ಸೇತುವೆ ಬುಧವಾರವೂ ಸಂಪೂರ್ಣ ಜಲಾವೃತವಾಗಿದೆ. ತಾಲೂಕಿನ ಕುದುರೆಗುಂಡಿ ಬಳಿ ಕಪೀಲ ನದಿ ತುಂಬಿ ರಸ್ತೆ ಮೇಲೆ ನೀರು ನಿಂತಿದ್ದು, ಕೊಪ್ಪದಿಂದ ಕೆರೆಮನೆ ರಸ್ತೆ ಸಂಪರ್ಕ ಮಧ್ಯಾಹ್ನದ ನಂತರ ಕಡಿತಗೊಂಡಿದೆ. ಹಾಲ್ಮುತ್ತೂರಿನ ಬಳಿ ಬಾಗಿ ಹಳ್ಳದ ನೀರು ರಸ್ತೆಗೆ ಬಂದಿದ್ದು, ರಸ್ತೆ ಸಂಚಾರ ಕೆಲ ಕಾಲ ಸ್ಥಗಿತಗೊಂಡಿತ್ತು. ಕೊಪ್ಪ ಪಟ್ಟಣದ ನೇತಾಜಿನಗರದ ಸಮೀಪ ಅಬ್ದುಲ್ ಖಾದರ್ ಎಂಬವರ ಮನೆಯಲ್ಲಿರುವ ಬಾವಿ ಕುಸಿದ ಘಟನೆ ಮಂಗಳವಾರ ನಡೆದಿದ್ದು, ನರಸೀಪುರ ಗ್ರಾಪಂ ವ್ಯಾಪ್ತಿಯಲ್ಲಿ ಅನಿಲ್ ಎಂಬುವವರ ಅಡಿಕೆ ತೋಟಕ್ಕೆ ತುಂಗಾ ನದಿಯ ಪ್ರವಾಹ ಬಂದಿದ್ದು, ತೋಟ ಪೂರ್ಣ ಜಲಾವೃತವಾಗಿದೆ. ಆರ್ಡಿಕೊಪ್ಪದ ಸಮೀಪ ತುಂಗನದಿಯ ನೀರು ಭತ್ತದ ಗದ್ದೆಗೆ ಹರಿದು ಜಲಾವೃತಗೊಂಡಿದೆ. ತಾಲೂಕಿನ ಮುತ್ತಿನಕೊಪ್ಪ, ನಾರ್ವೆ ಗ್ರಾಮದಲ್ಲಿ ಬುಧವಾರ ತುಂಗಾ ನದಿಯಲ್ಲಿ ಪ್ರವಾಹ ಉಂಟಾಗಿ ಅಕ್ಕಪಕ್ಕದ ಸುಮಾರು 30 ಎಕರೆ ಅಡಿಕೆ ತೋಟ ಜಲಾವೃತವಾಗಿದೆ ಎಂದು ತಿಳಿದು ಬಂದಿದೆ.

ಇನ್ನು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದ್ದು, ಬಾಳೆಹೊನ್ನೂರು ಪಟ್ಟಣದ ಸಮೀಪದಲ್ಲಿ ಹರಿಯುವ ಭದ್ರಾ ನದಿ ಪಾತ್ರದ ಹೊಲ ಗದ್ದೆಗಳಿಗೆ ನೀರು ನುಗ್ಗಿ ಅಪಾರ ನಷ್ಟ ಸಂಭವಿಸಿದೆ. ಎನ್.ಆರ್.ಪುರ ಇಟ್ಟಿನಹಳ್ಳಿ ಹಾಗೂ ಕುಳಗೂರು ಗ್ರಾಮಗಳಿಂದ ಶೃಂಗೇರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿದ್ದ ಕಿರುಸೇತುವೆ ಮುಳುಗಡೆಯಾದ ಪರಿಣಾಮ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಭದ್ರಾ ನದಿಯು ಉಕ್ಕಿ ಹರಿಯುತ್ತಿದ್ದರಿಂದಾಗಿ ನೀರು ರಸ್ತೆಯ ಮೇಲೆ ಬಂದು ಬಾಳೆಹೊನ್ನೂರು-ಮಾಗುಂಡಿ ರಸ್ತೆಯಲ್ಲಿ ಸಂಚಾರ ವ್ಯವಸ್ಥೆ ಸ್ಥಗಿತಗೊಂಡಿತ್ತು.

ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನ ಗಿರಿ, ಬಾಬಾಬುಡನ್‍ಗಿರಿ ಶ್ರೇಣಿಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಗಿರಿಶ್ರೇಣಿಯ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ತಾಲೂಕಿನ ಖಾಂಡ್ಯ ದೇವಾಲಯದ ರಾಮಮೂರ್ತಿ ಭಟ್ ಅವರ ಮನೆಯ ಮೇಲೆ ಬೃಹತ್ ಮರವೊಂದು ಬಿದ್ದಿದ್ದು ಮನೆಯ ಅರ್ಧ ಭಾಗ ಹಾನಿಯಾಗಿರುವುದಲ್ಲದೆ ಮನೆಯವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ವಸ್ತಾರೆ ಹೋಬಳಿಯ ಕೋಡುವಳ್ಳಿ ಗ್ರಾಮದ ತಿಮ್ಮೇಗೌಡ ಅವರ ಕೊಟ್ಟಿಗೆಯ ಗೋಡೆ ಬಿದ್ದು 2 ಹಸು ಹಾಗೂ 2 ಕರುವಿಗೆ ತೀವ್ರ ಗಾಯವಾಗಿದೆ. ಜಾಗರ ಹೋಬಳಿ ಅತ್ತಿಗಿರಿ ಗ್ರಾಮದ ಕೃಷ್ಣ ಎಂಬುವವರ ಕಚ್ಚಾಮನೆಯ ಗೋಡೆ ಬಿರುಕು ಬಿಟ್ಟಿದೆ. ಆವತಿ ಹೋಬಳಿಯ ಮೂಗೋಡಿ ಗ್ರಾಮದ ಪುಷ್ಪ ಎಂಬುವವರ ಮನೆ ಅರ್ಧದಷ್ಟು ಬಿದ್ದು ಹೋಗಿವೆ. ತಾಲೂಕಿನ ಅಂಬಳೆ ಹೋಬಳಿಯ ಗೌಡನಹಳ್ಳಿ ಗ್ರಾಮದ ಶಂಕರಯ್ಯ ಎಂಬುವವರ ವಾಸದ ಮನೆ ಬಿದ್ದು ಹೋಗಿದೆ.

ತರೀಕೆರೆ ತಾಲೂಕಿನಲ್ಲೂ ಮಳೆಯ ಆರ್ಭಟ ಮುಂದುವರೆದಿದ್ದು, ತಾಲೂಕಿನ ಬರಗೇನಹಳ್ಳಿ ಗ್ರಾಮದಲ್ಲಿ ವಿದ್ಯುತ್ ಟ್ರಾನ್ಸ್‍ಫಾರ್ಮರ್ ಹಾಗೂ ಹಲವು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು ವಿಧ್ಯುತ್ ಕಡಿತಗೊಂಡಿದೆ. ತಾಲೂಕು ಕಚೇರಿ ಹಿಂಭಾಗ ಮರವೊಂದು ಕಾರಿನ ಮೇಲೆ ಬಿದ್ದು ಕಾರು ಸಂಪೂರ್ಣ ಜಜ್ಜಿ ಹೋಗಿದೆ. ಯಾವುದೇ ಅವಘಡ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಕಡೂರು ತಾಲೂಕಿನಲ್ಲಿ ಮಂಗಳವಾರ ಹಾಗೂ ಬುಧವಾರ ಸಾಮಾನ್ಯ ಮಳೆಯಾಗಿದೆ.

ಎನ್.ಆರ್.ಪುರ ತಾಲೂಕಿನಲ್ಲಿ ಗಾಳಿಗೆ ತುಂಡಾಗಿ ಬಿದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿಯೋರ್ವರು ಸಾವನ್ನಪ್ಪಿದ್ದಾರೆ. ತಾಲೂಕಿನ ಮಾಳೂರು ದಿಣ್ಣೆ ಗ್ರಾಮದಲ್ಲಿ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಕುಮಾರ್ ಎಂಬವರು ಬುಧವಾರ ಬೆಳಗ್ಗೆ ಗಾಳಿಗೆ ತುಂಡಾಗಿ ಬಿದಿದ್ದ ವಿದ್ಯುತ್ ತಂತಿ ತುಳಿದು ಸಾವನಪ್ಪಿದ್ದಾರೆಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಕಂದಾಯಾಧಿಕಾರಿಗಳು ಭೇಟಿ ನೀಡಿದ ಪರಿಶೀಲಿಸಿದ್ದಾರೆ.

ಮೂಡಿಗೆರೆ ತಾಲೂಕಿನ ಹಂತೂರು ಗ್ರಾಮದಲ್ಲಿ ಹೇಮಾವತಿ ನದಿಯ ನೆರೆಗೆ ಸಿಲುಕಿದ್ದ 9 ಜನರನ್ನು ಪೊಲೀಸರ ನೆರವಿನೊಂದಿಗೆ ಬಿಳಗುಳ ಫೀಸ್ ಅಂಡ್ ಅವೇರ್ನೆಸ್ ಟ್ರಸ್ಟ್‍ನ ಅಧ್ಯಕ್ಷ ಅಲ್ತಾಫ್ ಹಾಗೂ ಇತರ ಸದಸ್ಯರು ರಕ್ಷಣೆ ಮಾಡಿದ್ದಾರೆ. ಹಂತೂರು ಗ್ರಾಮದಲ್ಲಿ ಹೇಮಾವತಿ ನದಿ ತೀರದಲ್ಲಿರುವು ಇಸ್ಕಾನ್ ಸಂಸ್ಥೆಯ ಆಶ್ರಮವೊಂದರಲ್ಲಿ  4 ಜನ ಪುರುಷರು, 3 ಮಹಿಳೆಯರು 2 ಮಕ್ಕಳು ಸಿಲುಕಿರುವುದನ್ನು ಖಚಿತ ಪಡಿಸಿಕೊಂಡ ಪೊಲೀಸರು ಹಾಗೂ ಟ್ರಸ್ಟ್‍ನ ಸದಸ್ಯರು ಹಗ್ಗದ ನೆರವಿನಿಂದ ಇಬ್ಬರು ಮಕ್ಕಳು ಸೇರಿದಂತೆ 9 ಮಂದಿ ಹಾಗೂ 3 ಹಸುಗಳನ್ನು ರಕ್ಷಣೆ ಮಾಡಲಾಗಿದೆ. ಸಂತ್ರಸ್ಥರಿಗೆ ಹಂತೂರು ಸರಕಾರಿ ಶಾಲೆಯಲ್ಲಿ ಆಶ್ರಯ ನೀಡಲಾಗಿದೆ. 3 ಹಸುಗಳನ್ನು ಸಹ ರಕ್ಷಿಸಲಾಗಿದೆ.

ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ, ಶೃಂಗೇರಿ ತಾಲೂಕುಗಳ ವ್ಯಾಪ್ತಿಯ ಎಲ್ಲ ಶಾಲಾ ಕಾಲೇಜಿಗಳಿಗೆ ಜಿಲ್ಲಾಡಳಿತ ಗುರುವಾರವೂ ರಜೆ ಘೋಷಣೆ ಮಾಡಿದ್ದು, ಈ ಸಂಬಂಧ ಅಪರ ಜಿಲ್ಲಾಧಿಕಾರಿ ಕುಮಾರ್ ಐದು ತಾಲೂಕುಗಳ ತಹಶೀಲ್ದಾರ್, ಬಿಇಒಗಳಿಗೆ ಆದೇಶ ನೀಡಿದ್ದಾರೆ. ಇದರಿಂದಾಗಿ ಮಲೆನಾಡು ಭಾಗದ ತಾಲೂಕುಗಳ ಶಾಲಾ ಕಾಲೇಜುಗಳಿಗೆ ಸತತ ಮೂರು ದಿನಗಳ ಕಾಲ ಶಾಲಾ ಕಾಲೇಜುಗಳಿಗೆ ರಜೆ ನೀಡಿದಂತಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X