Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೀಡಿಯಾ ವಿಡಿಯೋಗಳ ನಿಯಂತ್ರಣ ಕೋರಿ ಅರ್ಜಿ...

ಮೀಡಿಯಾ ವಿಡಿಯೋಗಳ ನಿಯಂತ್ರಣ ಕೋರಿ ಅರ್ಜಿ ಸಲ್ಲಿಕೆ: ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲು ಹೈಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ7 Aug 2019 11:35 PM IST
share
ಮೀಡಿಯಾ ವಿಡಿಯೋಗಳ ನಿಯಂತ್ರಣ ಕೋರಿ ಅರ್ಜಿ ಸಲ್ಲಿಕೆ: ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲು ಹೈಕೋರ್ಟ್ ಆದೇಶ

ಬೆಂಗಳೂರು, ಆ.7: ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುವ ಮಲ್ಟಿ ಮೀಡಿಯಾ ವಿಡಿಯೋಗಳ ನಿಯಂತ್ರಣಕ್ಕೆ ಸೂಕ್ತ ನೀತಿ ರೂಪಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೆ, ಅರ್ಜಿದಾರರು ಕೇಂದ್ರ ಸರಕಾರಕ್ಕೆ ಈ ಕುರಿತು ಮನವಿ ಸಲ್ಲಿಸಬಹುದೆಂದು ಹೇಳಿದೆ.

ನಗರದ ಪದ್ಮನಾಭ ಶಂಕರ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಮುಹಮ್ಮದ್ ನವಾಝ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಅರ್ಜಿದಾರರ ಪರ ವಾದಿಸಿದ ವಕೀಲರು, ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮ ಅತ್ಯಂತ ಪರಿಣಾಮಕಾರಿ ಹಾಗೂ ಪ್ರಬಲವಾಗಿ ಬೆಳೆಯುತ್ತಿದೆ. ಆದರೆ, ಇಲ್ಲಿ ಪ್ರಸಾರವಾಗುವ ಅಥವಾ ಪ್ರದರ್ಶನಗೊಳ್ಳುವ ವಿಡಿಯೋಗಳನ್ನು ನಿಯಂತ್ರಿಸಲು ಸದ್ಯ ಯಾವುದೇ ನಿಯಮಗಳಿಲ್ಲ. ಇದರಿಂದ, ಸೆನ್ಸಾರ್ ಆಗದ ವಿಡಿಯೋಗಳು ಯಾವ ನಿರ್ಬಂಧವಿಲ್ಲದೆ ಪ್ರದರ್ಶನಗೊಳ್ಳುತ್ತಿವೆ ಎಂದು ಪೀಠಕ್ಕೆ ತಿಳಿಸಿದರು.

ಸೆನ್ಸಾರ್ ಆಗದ ವಿಡಿಯೋಗಳಲ್ಲಿರುವ ಅಂಶಗಳು ಸಮಾಜಕ್ಕೆ ತಪ್ಪುಸಂದೇಶವನ್ನು ಸಾರುವ ಸಾಧ್ಯತೆ ಇರುತ್ತದೆ. ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳುವ ಚಿತ್ರಗಳಲ್ಲಿನ ದೃಶ್ಯ ಹಾಗೂ ಸಂಭಾಷಣೆಗಳನ್ನು ನಿಯಂತ್ರಿಸಲು ಸೆನ್ಸಾರ್ ಮಂಡಳಿಯನ್ನು ರಚಿಸಲಾಗಿದೆ. ಇದೇ ರೀತಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುವ ಚಲನಚಿತ್ರ, ಧಾರಾವಾಹಿ, ಕಿರುಚಿತ್ರಗಳು, ವಿಡಿಯೋ ತುಣುಕುಗಳು ಮತ್ತಿತರ ಮಲ್ಟಿ ಮೀಡಿಯಾ ವಿಡಿಯೋಗಳನ್ನೂ ನಿಯಂತ್ರಿಸುವ ವ್ಯವಸ್ಥೆ ತರುವ ತುರ್ತು ಅಗತ್ಯವಿದೆ. ಈ ನಿಟ್ಟಿನಲ್ಲಿ ಸೂಕ್ತ ಕಾನೂನು ರೂಪಿಸಲು ಕೇಂದ್ರ ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಅರ್ಜಿಯನ್ನು ವಜಾಗೊಳಿಸಿ, ಅರ್ಜಿದಾರರು ಕೇಂದ್ರ ಸರಕಾರಕ್ಕೆ ಈ ಕುರಿತು ಮನವಿ ಸಲ್ಲಿಸಬಹುದೆಂದು ಹೇಳಿದೆ.

ಅರ್ಜಿದಾರರ ಮನವಿ ಏನು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ದಶ್ಯಾವಳಿಗಳನ್ನು ಸಿನಿಮಾಟೋಗ್ರಪಿ ಕಾಯ್ದೆ 1952ರ ಸೆಕ್ಷನ್ 2(ಸಿ) ಅಡಿಗೆ ತರಬೇಕು, ಅಥವಾ ಅವುಗಳ ನಿಯಂತ್ರಣಕ್ಕಾಗಿ ಪ್ರತ್ಯೇಕ ಶಾಸನ ರೂಪಿಸಬೇಕು. ಇಲ್ಲವೇ ನಾಲ್ಕು ಗೋಡೆಗಳ ಮಧ್ಯೆ ಅಥವಾ ಕಚೇರಿಗಳಲ್ಲಿ ಇಂಥ ವಿಡಿಯೋ ಪ್ರದರ್ಶನವಾದರೆ ಅದನ್ನು ಸಿನಿಮಾಟೋಗ್ರಫಿ ಕಾಯ್ದೆ ಅನ್ವಯ ಸಾರ್ವಜನಿಕ ಪ್ರದರ್ಶನ ಎಂದು ಪರಿಗಣಿಸುವಂತಾಗಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಕೇಂದ್ರ ಸರಕಾರ ಸೂಕ್ತ ನಿಯಮ ರೂಪಿಸುವವರಗೆ ಸೋಷಿಯಲ್ ಮೀಡಿಯಾಗಳಲ್ಲಿ ಪ್ರದರ್ಶನಗೊಳ್ಳುವ ಚಲನಚಿತ್ರ, ಧಾರಾವಾಹಿ, ಕಿರುಚಿತ್ರಗಳಿಗೆ ಪ್ರಮಾಣಪತ್ರ ನೀಡುವಂತೆ ಕೇಂದ್ರ ಸೆನ್ಸಾರ್ ಮಂಡಳಿಗೆ ಸೂಚಿಸಬೇಕು. ಸೆನ್ಸಾರ್ ಮಂಡಳಿಯ ಪ್ರಮಾಣಪತ್ರ ಪಡೆದ ಬಳಿಕವೇ ಮಲ್ಟಿಮೀಡಿಯಾ ವಿಡಿಯೋಗಳನ್ನು ಪ್ರದರ್ಶಿಸುವಂತೆ ಅಮೇಜಾನ್, ನೆಟ್‌ಫ್ಲಿಕ್ಸ್, ಯೂಟ್ಯೂಬ್ ಮತ್ತಿತರ ಪ್ರತಿವಾದಿಗಳಿಗೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X