Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಾಸನದಲ್ಲಿ ಮಳೆಯ ಪ್ರಮಾಣ ಹೆಚ್ಚಳ:...

ಹಾಸನದಲ್ಲಿ ಮಳೆಯ ಪ್ರಮಾಣ ಹೆಚ್ಚಳ: ಮುಂಜಾಗ್ರತಾ ಕ್ರಮ ವಹಿಸಲು ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ7 Aug 2019 11:44 PM IST
share
ಹಾಸನದಲ್ಲಿ ಮಳೆಯ ಪ್ರಮಾಣ ಹೆಚ್ಚಳ: ಮುಂಜಾಗ್ರತಾ ಕ್ರಮ ವಹಿಸಲು ಜಿಲ್ಲಾಧಿಕಾರಿ ಸೂಚನೆ

ಹಾಸನ,ಆ.07: ಜಿಲ್ಲೆಯಾದ್ಯಂತ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ತಾಲ್ಲೂಕುಗಳಲ್ಲಿ ಪ್ರಕೃತಿ ವಿಕೋಪದ ನಿರ್ವಹಣೆಗೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಪ್ರಕೃತಿ ವಿಕೋಪ ನಿರ್ವಹಣೆ ಕುರಿತು ನಡೆದ  ಸಭೆಯಲ್ಲಿ ಮಾತನಾಡಿದ ಅವರು, ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಎಲ್ಲಾ ಅಪಾಯಗಳನ್ನು ಎದುರಿಸಲು ಪ್ರತಿ ತಾಲೂಕಿನಲ್ಲಿ ವಿಶೇಷ ತಂಡ ರಚನೆಯಾಗಬೇಕು. ತುರ್ತು ನಿರ್ವಹಣೆಗೆ ಸಹಾಯವಾಣಿಗಳಲ್ಲಿ ದಿನದ 24 ಗಂಟೆಗಳೂ ಜಾಗೃತರಾಗಿದ್ದು ಸೇವೆ ಒದಗಿಸಬೇಕೆಂದು ಎಂದು ತಿಳಿಸಿದರು.

ಸಕಲೇಶಪುರ, ಆಲೂರು, ಬೇಲೂರು ತಾಲೂಕುಗಳಲ್ಲಿ ಹೆಚ್ಚು ಮಳೆಯಾಗುತ್ತಿದ್ದು ಅಗ್ನಿಶಾಮಕದಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಲೋಕೋಪಯೋಗಿ, ರಾಷ್ಟ್ರೀಯ ಹೆದ್ದಾರಿ ಇಲಾಖೆಗಳು ಹೆಚ್ಚಿನ ಗಮನಹರಿಸಬೇಕಿದ್ದು, ಪ್ರಕೃತಿ ವಿಕೋಪ ಸಂಭವಿಸಬಹುದಾದ ಸ್ಥಳಗಳನ್ನು ಪತ್ತೆ ಹಚ್ಚಿ ಪ್ರದೇಶಗಳಲ್ಲಿ ಹೆಚ್ಚಿನ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಸ್ಥಳೀಯರಿಂದ ಪ್ರಕೃತಿ ವಿಕೋಪದ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ಅಲ್ಲಿನ ಜನ ಜೀವನದ ವ್ಯವಸ್ಥೆಯನ್ನು ಗಮನಿಸಲು ಸ್ಥಾಪಿತವಾಗಿರುವ ಸಹಾಯವಾಣಿ ಕೇಂದ್ರಗಳು ಚಾಲ್ತಿಯಲ್ಲಿರುವಂತೆ ಗಮನಹರಿಸಬೇಕು. ಸಾರ್ವಜನಿಕರಿಂದ ಹಾಗೂ ಸಹಾಯವಾಣಿ ಕೇಂದ್ರಗಳಿಂದ ಪ್ರತಿ ಮಾಹಿತಿ ಸಂಗ್ರಹಿಸಲು ನೆಟ್‍ವರ್ಕ್ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲೆಯ ಅರಸೀಕೆರೆ, ಚನ್ನರಾಯಪಟ್ಟಣ ತಾಲೂಕುಗಳನ್ನು ಹೊರತುಪಡಿಸಿ ಉಳಿದ ತಾಲ್ಲೂಕುಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು ತಾಲೂಕು ಮಟ್ಟದ ಅಧಿಕಾರಿಗಳು ಸೂಕ್ತ ಮುಂಜಾಗೃತಾ ಕ್ರಮಗಳನ್ನು ವಹಿಸಬೇಕು ಎಂದು ತಿಳಿಸಿದರು.

ಸಕಲೇಶಪುರ, ಆಲೂರು, ಬೇಲೂರು ತಾಲ್ಲೂಕುಗಳಿಗೆ ರಬ್ಬರ್ ಬೋಟ್, ಲೈಟಿಂಗ್, ಪವರ್ ಗರಗಸ ಒದಗಿಸಿ ನಿರಾಶ್ರಿತ ಕೇಂದ್ರಗಳ ವ್ಯವಸ್ಥೆಗೆ ಸೂಕ್ತ ಪರ್ಯಾಯಗಳನ್ನು ಆಯ್ಕೆ ಮಾಡಿಟ್ಟುಕೊಳ್ಳಬೇಕು ಎಂದರು.

ಬಿಸಿಲೆ ಮಾರ್ಗದಲ್ಲಿ ಸಂಭವನಿಯ ಅಪಾಯಗಳ ತಡೆಗೆ ಸಂಜೆ 6 ರಿಂದ ಬೆಳಗ್ಗೆ 6 ಗಂಟೆವರೆಗೆ ವಾಹನ ನಿಷೇಧಿಸಬೇಕು. ಶಿರಾಡಿ ಘಾಟ್‍ಗಳಲ್ಲಿ ಹೆಚ್ಚಿನ ಭೂಕುಸಿತಗಳು ಸಂಬಂವಿಸುವುದರಿಂದ ಹೆಚ್ಚುವರಿ ತಂಡಗಳು ಸನ್ನದ್ಧವಾಗಿರಬೇಕು. ಅಲ್ಲದೆ, ಹೇಮಾವತಿ ಜಲಾಶಯಕ್ಕೆ ಆಗಮಿಸುವ ಸಾರ್ವಜನಿಕರ ಪ್ರವೇಶವನ್ನು ಸುರಕ್ಷತೆಯ ದೃಷ್ಠಿಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಅಗ್ನಿ ಶಾಮಕ ಇಲಾಖೆಗೆ ಅಗತ್ಯವಿರುವ ರಕ್ಷಣ ಸಾಧನಗಳನ್ನು ಒದಗಿಸಲಾಗುವುದು. ಆರೋಗ್ಯ ಇಲಾಖೆ ಎಲ್ಲಾ ತುರ್ತು ಚಿಕಿತ್ಸಾ ವ್ಯವಸ್ಥೆಗೆ ಔಷದೋಪಚಾರಗಳೊಂದಿಗೆ ಸಿದ್ದರಾಗಿರಬೇಕು ಎಂದು ಅಕ್ರಂ ಪಾಷ ಹೇಳಿದರು.

ಸಭೆಯಲ್ಲಿ ಜಿಲ್ಲಾ ಪ್ರಭಾರ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದು ಈಗಾಗಲೇ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರಿಗೆ ಮಾಹಿತಿ ಒದಗಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X