Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದ್ರಾವಿಡ್‌ಗೆ ಬಿಸಿಸಿಐ ನೋಟಿಸ್:...

ದ್ರಾವಿಡ್‌ಗೆ ಬಿಸಿಸಿಐ ನೋಟಿಸ್: ಕ್ರಿಕೆಟ್ ನ್ನು ದೇವರೇ ಕಾಪಾಡಬೇಕೆಂದ ಸೌರವ್ ಗಂಗುಲಿ

ವಾರ್ತಾಭಾರತಿವಾರ್ತಾಭಾರತಿ7 Aug 2019 11:55 PM IST
share
ದ್ರಾವಿಡ್‌ಗೆ ಬಿಸಿಸಿಐ ನೋಟಿಸ್: ಕ್ರಿಕೆಟ್ ನ್ನು  ದೇವರೇ ಕಾಪಾಡಬೇಕೆಂದ ಸೌರವ್ ಗಂಗುಲಿ

ಹೊಸದಿಲ್ಲಿ, ಆ.7: ರಾಹುಲ್ ದ್ರಾವಿಡ್‌ಗೆ ನೋಟಿಸ್ ಕಳುಹಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ(ಬಿಸಿಸಿಐ)ವಿರುದ್ಧ ಬುಧವಾರ ಮಾಜಿ ನಾಯಕ ಸೌರವ್ ಗಂಗುಲಿ ವಾಗ್ದಾಳಿ ನಡೆಸಿದರು.

 ಟ್ವಿಟರ್‌ನ ಮೂಲಕ ಬಿಸಿಸಿಐನ ಈ ಕ್ರಮದ ಬಗ್ಗೆ ಗಂಗುಲಿ ಅಸಮಾಧಾನ ವ್ಯಕ್ತಪಡಿಸಿದರು. ‘‘ಹಿತಾಸಕ್ತಿ ಸಂಘರ್ಷ ಎನ್ನುವುದು ಭಾರತೀಯ ಕ್ರಿಕೆಟ್‌ನ ಹೊಸ ಫ್ಯಾಶನ್ ಆಗಿದೆ... ಇದು ಸುದ್ದಿಯಲ್ಲಿರಲು ಉತ್ತಮ ಹಾದಿ..ದೇವರೇ ಭಾರತೀಯ ಕ್ರಿಕೆಟನ್ನು ಕಾಪಾಡಬೇಕಾಗಿದೆ...ಬಿಸಿಸಿಐ ಎಥಿಕ್ಸ್ ಅಧಿಕಾರಿಯಿಂದ ದ್ರಾವಿಡ್ ಹಿತಾಸಕ್ತಿ ಸಂಘರ್ಷಕ್ಕೆ ಸಂಬಂಧಿಸಿ ನೋಟಿಸ್ ಪಡೆದಿದ್ದಾರೆ’’ ಎಂದು ಗಂಗುಲಿ ಟ್ವೀಟ್ ಮಾಡಿದ್ದಾರೆ.

 ಲೆಜೆಂಡರಿ ಕ್ರಿಕೆಟಿಗರನ್ನು ಬಿಸಿಸಿಐ ನಡೆಸಿಕೊಳ್ಳುತ್ತಿರುವ ರೀತಿಗೆ ಬೇಸರ ವ್ಯಕ್ತಪಡಿಸಿದ ಖ್ಯಾತ ಸ್ಪಿನ್ ಬೌಲರ್ ಹರ್ಭಜನ್ ಸಿಂಗ್ ಅವರು ಗಂಗುಲಿಯ ಟ್ವೀಟ್‌ಗೆ ಪ್ರತಿಕ್ರಿಯಿಸಿದ್ದಾರೆ.

ಇದು ನಿಜವೇ? ಇದು ಎಲ್ಲಿ ತನಕ ತಲುಪಲಿದೆ ಎಂದು ಗೊತ್ತಿಲ್ಲ. ಭಾರತೀಯ ಕ್ರಿಕೆಟ್‌ಗೆ ದ್ರಾವಿಡ್‌ರಂತಹ ಉತ್ತಮ ವ್ಯಕ್ತಿ ಸಿಗಲಾರರು. ಇಂತಹ ಲೆಜೆಂಡ್‌ಗಳಿಗೆ ನೋಟಿಸ್ ಕಳುಹಿಸುವುದು ಅವರಿಗೆ ಅವಮಾನಿಸಿದಂತೆ...ಕ್ರಿಕೆಟ್ ಬೆಳವಣಿಗೆಗೆ ಇವರ ಸಲಹೆ ಅಗತ್ಯವಿದೆ. ಹೌದು, ಇದೀಗ ದೇವರೇ ಭಾರತೀಯ ಕ್ರಿಕೆಟನ್ನು ಕಾಪಾಡಬೇಕಾಗಿದೆ ಎಂದು ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದಾರೆ.

   ಭಾರತದ ಮಾಜಿ ನಾಯಕ ದ್ರಾವಿಡ್, ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡಮಿಯ ಕ್ರಿಕೆಟ್ ಚಟುವಟಿಕೆಗಳ ಮುಖ್ಯಸ್ಥರಾಗಿದ್ದು, ಬಿಸಿಸಿಐ ಎಥಿಕ್ಸ್ ಅಧಿಕಾರಿ ಜಸ್ಟಿಸ್(ನಿವೃತ್ತ)ಡಿ.ಕೆ. ಜೈನ್‌ರಿಂದ ಹಿತಾಸಕ್ತಿ ಸಂಘರ್ಷಕ್ಕೆ ನೊಟೀಸ್ ಪಡೆದಿರುವ ಪ್ರಮುಖ ಆಟಗಾರನಾಗಿದ್ದಾರೆ. ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯ ಆಜೀವ ಸದಸ್ಯ ಸಂಜೀವ್ ಗುಪ್ತಾ ನೀಡಿರುವ ದೂರಿನ ಮೇರೆಗೆ ನೋಟಿಸ್ ನೀಡಲಾಗಿದೆ.

ಗುಪ್ತಾ ಪ್ರಕಾರ, ದ್ರಾವಿಡ್ ಹಲವು ಲಾಭದಾಯಕ ಹುದ್ದೆಯಲ್ಲಿರುವ ಮೂಲಕ ಹಿತಾಸಕ್ತಿ ಸಂಘರ್ಷ ಎದುರಿಸುತ್ತಿದ್ದಾರೆ. ಎನ್‌ಸಿಎ ನಿರ್ದೇಶಕ ರಾಗಿರುವ ಅವರು ಇಂಡಿಯನ್ ಸಿಮೆಂಟ್ ಸಮೂಹದ ಉಪಾಧ್ಯಕ್ಷರಾಗಿದ್ದಾರೆ. ಈ ಸಮೂಹ ಐಪಿಎಲ್ ಫ್ರಾಂಚೈಸಿ ಚೆನ್ನೈ ಸೂಪರ್ ಕಿಂಗ್ಸ್ ನ ಮಾಲಕತ್ವ ಹೊಂದಿದೆ.

ಕ್ರಿಕೆಟ್ ಸಲಹಾ ಮಂಡಳಿ ಸದಸ್ಯತ್ವ ಹಾಗೂ ಐಪಿಎಲ್ ಫ್ರಾಂಚೈಸಿಗಳಲ್ಲಿ ಸಲಹೆಗಾರ ಹಾಗೂ ಐಕಾನ್‌ಗಳಾಗಿರುವ ಸಚಿನ್ ತೆಂಡುಲ್ಕರ್ ಹಾಗೂ ವಿವಿಎಸ್ ಲಕ್ಷ್ಮಣ್ ವಿರುದ್ಧವೂ ಹಿತಾಸಕ್ತಿ ಸಂಘರ್ಷದ ದೂರನ್ನು ಗುಪ್ತಾ ದಾಖಲಿಸಿದ್ದರು. ಈ ಇಬ್ಬರು ಮಾಜಿ ಆಟಗಾರರು ಗುಪ್ತಾ ಆರೋಪವನ್ನು ನಿರಾಕರಿಸಿದ್ದಾರೆ. ಮುಂಬೈ ಇಂಡಿಯನ್ಸ್ ಗೆ ತಾನು ನೀಡುತ್ತಿರುವ ಸೇವೆಗೆ ಒಂದು ಪೈಸೆಯನ್ನೂ ಪಡೆಯುತ್ತಿಲ್ಲ ಎಂದು ತೆಂಡುಲ್ಕರ್ ಅಫಿಡವಿಟ್‌ನ್ನು ಸಲ್ಲಿಸಿದ್ದಾರೆ.

 ಸಲಹೆಗಾರ ಹಾಗೂ ಸಿಎಸಿ ಸದಸ್ಯರಾಗಿರುವುದು ಹಿತಾಸಕ್ತಿ ಸಂಘರ್ಷವಾದರೆ, ಹುದ್ದೆಯನ್ನು ತ್ಯಜಿಸಲು ಸಿದ್ಧ ಎಂದು ಲಕ್ಷ್ಮಣ್ ಪ್ರತಿಕ್ರಿಯಿಸಿದ್ದರು. ಬಂಗಾಳ ಕ್ರಿಕೆಟ್ ಮಂಡಳಿ ಅಧ್ಯಕ್ಷ ಸ್ಥಾನ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ನಲ್ಲಿ ಮೆಂಟರ್ ಆಗಿರುವ ಸೌರವ್ ಗಂಗುಲಿಯ ವಿರುದ್ಧವೂ ಭಸ್ವತಿ ಸಂಟುವಾ ಎಂಬುವವರು ದೂರು ಸಲ್ಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X