Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಮೇಕೆದಾಟು ಯೋಜನೆ’ ಮರುಪರಿಶೀಲನೆಗೆ...

‘ಮೇಕೆದಾಟು ಯೋಜನೆ’ ಮರುಪರಿಶೀಲನೆಗೆ ಕೇಂದ್ರದ ಸೂಚನೆ ರಾಜಕೀಯ ದುರುದ್ದೇಶ: ಡಿಕೆಶಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ8 Aug 2019 6:57 PM IST
share
‘ಮೇಕೆದಾಟು ಯೋಜನೆ’ ಮರುಪರಿಶೀಲನೆಗೆ ಕೇಂದ್ರದ ಸೂಚನೆ ರಾಜಕೀಯ ದುರುದ್ದೇಶ: ಡಿಕೆಶಿ ಆಕ್ರೋಶ

ಬೆಂಗಳೂರು, ಆ. 8: ಮೇಕೆದಾಟು ಯೋಜನೆ ಬಗ್ಗೆ ಮರುಪರಿಶೀಲನೆ ನಡೆಸುವಂತೆ ಕೇಂದ್ರವು ರಾಜ್ಯಕ್ಕೆ ಸೂಚನೆ ನೀಡಿರುವುದರ ಹಿಂದೆ ರಾಜಕೀಯ ದುರುದ್ದೇಶ ಅಡಗಿದೆ. ಇದರ ವಿರುದ್ಧ ಹೋರಾಟ ರೂಪಿಸಲಾಗುವುದು ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಯೋಜನೆಗೆ ಈಗಾಗಲೇ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಅಲ್ಲದೆ, ವಿಸ್ತೃತ ಯೋಜನೆ ವರದಿ (ಡಿಪಿಆರ್) ಸಲ್ಲಿಸುವಂತೆ ಸೂಚಿಸಿದೆ. ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ಈಗಾಗಲೇ ಡಿಪಿಆರ್ ಸಲ್ಲಿಸಲಾಗಿದೆ. ಯೋಜನೆ ಅನುಷ್ಠಾನ ಅಂತಿಮ ಹಂತದಲ್ಲಿರುವಾಗ ಮರುಪರಿಶೀಲನೆ ಮಾಡುವಂತೆ ಕೇಂದ್ರವು ಸೂಚಿಸಿರುವುದರ ಹಿಂದೆ ರಾಜಕೀಯ ಹುನ್ನಾರವಿದೆ ಎಂದು ಅವರು ಆಪಾದಿಸಿದ್ದಾರೆ.

ಮೇಕೆದಾಟು ಯೋಜನೆ ಸಮತೋಲನ ಅಣೆಕಟ್ಟೆ ಯೋಜನೆ ಇವತ್ತು-ನಿನ್ನೆ ರೂಪಿತವಾದುದಲ್ಲ. 40 ವರ್ಷಗಳ ಹಿಂದೆಯೇ ರಾಜ್ಯ ಸರಕಾರ ಈ ಬಗ್ಗೆ ತೀರ್ಮಾನ ತೆಗೆದುಕೊಂಡಿದೆ. ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳಿಗೂ ಅನುಕೂಲವಾಗುವ ಯೋಜನೆಗೆ ಈಗಾಗಲೇ ಸ್ಥಳ ಗುರುತಿಸಲಾಗಿದೆ. ವಿನಾಕಾರಣ ಸಮುದ್ರದ ಪಾಲಾಗಲಿರುವ ನೀರನ್ನು ಯೋಜಿತ ಅಣೆಕಟ್ಟೆಯಲ್ಲಿ ಸಂಗ್ರಹಿಸಿಟ್ಟುಕೊಂಡು ವಿದ್ಯುತ್ ಉತ್ಪಾದನೆ, ಸ್ವಲ್ಪ ಪ್ರಮಾಣದಲ್ಲಿ ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಉದ್ದೇಶವನ್ನು ಹೊಂದಲಾಗಿದೆ.

ಕಾವೇರಿ ನ್ಯಾಯಾಧೀಕರಣ ತೀರ್ಪಿನಲ್ಲಿ ಕರ್ನಾಟಕಕ್ಕೆ ಹಂಚಿಕೆಯಾಗಿರುವ ನೀರಿನ ಪರಿಮಿತಿಯಲ್ಲೇ ಯೋಜನೆ ರೂಪಿಸಲಾಗಿದೆ. ಹೀಗಿರುವಾಗ ಏಕಾಏಕಿ ಯೋಜನೆ ಮರುಪರಿಶೀಲನೆಗೆ ಸೂಚನೆ ನೀಡಿರುವುದು ಸರಿಯಲ್ಲ ಎಂದು ಡಿ.ಕೆ.ಶಿವಕುಮಾರ್ ಆಕ್ಷೇಪಿಸಿದ್ದಾರೆ.

ಯಾವುದೇ ಕಾರಣಕ್ಕೂ ಈ ಯೋಜನೆ ರದ್ದುಪಡಿಸಲಾಗಲಿ, ಸ್ಥಳಾಂತರ ಮಾಡಲಾಗಲಿ ಅವಕಾಶ ನೀಡುವುದಿಲ್ಲ. ಪಕ್ಷಭೇದ ಮರೆತು ಎಲ್ಲ ಸಂಸದರು ಹಾಗೂ ಶಾಸಕರು ಹೋರಾಟಕ್ಕೆ ಅಣಿಯಾಗಬೇಕಿದೆ. ಕೇಂದ್ರವನ್ನು ಪ್ರತಿನಿಧಿಸುತ್ತಿರುವ ರಾಜ್ಯದ ಮಂತ್ರಿಗಳು ಈ ಬಗ್ಗೆ ಗಮನ ಹರಿಸಬೇಕು. ಈ ಮೊದಲು ನಿರ್ಣಯ ಆಗಿರುವಂತೆ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರಕಾರದ ಮೇಲೆ ಒತ್ತಡ ತರಬೇಕು ಎಂದು ಶಿವಕುಮಾರ್ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X