ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ನೇತ್ರಾವತಿ: ನದಿ ತೀರದ ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ತೆರಳಲು ಡಿಸಿ ಸೂಚನೆ

ಮಂಗಳೂರು, ಆ.9: ನೇತ್ರಾವತಿ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ನದಿ ನೀರು ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ನದಿ ತೀರದಲ್ಲಿ ವಾಸಿಸುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚಿಸಿದ್ದಾರೆ.
ಈಗಾಗಲೇ ನದಿ ತೀರದ ಪ್ರಮುಖ ಸಂಭಾವ್ಯ ಅಪಾಯ ಸ್ಥಳಗಳಲ್ಲಿ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ಯಾವುದೇ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ.
ಉಪ್ಪಿನಂಗಡಿಯಿಂದ ಮಂಗಳೂರುವರೆಗೆ ನೇತ್ರಾವತಿ ನದಿ ತೀರದ ಎರಡೂ ಬದಿಗಳ ಸಮೀಪದ ಪ್ರದೇಶಗಳಲ್ಲಿ ವಾಸಿಸುವ ನಾಗರಿಕರು ತಕ್ಷಣದಿಂದಲೇ ತಮ್ಮ ಕುಟುಂಬದೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರುಲುವಂತೆ ಜಿಲ್ಲಾಧಿಕಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
Next Story





