Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ...

ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ9 Aug 2019 6:45 PM IST
share
ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ಮಂಗಳೂರು, ಆ.9: ಮಹಿಳೆಯ ಜತೆ ಅನೈತಿಕ ಸಂಬಂಧ ಬೆಳೆಸಿ ಅತ್ಯಾಚಾರ ಮಾಡಿ ಕೊಲೆಗೈದ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಮತ್ತು ಎರಡು ಲಕ್ಷ ರೂ. ದಂಡ ವಿಧಿಸಿ 6ನೇ ಹೆಚ್ಚುವರಿ ಜಿಲ್ಲಾ ಮತ್ತ ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ನಿವಾಸಿ ಲಕ್ಷ್ಮಣ ಆಚಾರ್ಯ (31) ಶಿಕ್ಷೆಗೊಳಗಾದ ಅರೋಪಿ.

ಪ್ರಕರಣ ವಿವರ: ಮರೋಡಿ ಗ್ರಾಮದ ಮಹಿಳೆಯೊಬ್ಬರು ಮದುವೆಯಾಗಿ ಪತಿಯನ್ನು ತ್ಯಜಿಸಿದ್ದರು. ಅವರಿಗೆ ಒಂಬತ್ತು ವರ್ಷದ ಮಗನಿದ್ದು, 3ನೇ ತರಗತಿಯಲ್ಲಿ ಓದುತ್ತಿದ್ದ. ಅದೇ ಗ್ರಾಮದ ಲಕ್ಷ್ಮಣ ಆಚಾರ್ಯ ಮಹಿಳೆಯ ಜತೆ ಅನೈತಿಕ ಸಂಬಂಧ ಹೊಂದಿದ್ದು, ಪದೇ ಪದೇ ಭೇಟಿಯಾಗುತ್ತಿದ್ದ.

ಮಹಿಳೆ ಆತನೊಂದಿಗೆ ಮದುವೆಯಾಗಲು ಒತ್ತಾಯಿಸುತ್ತಾರೆ. ಇದರಿಂದ ಅಸಮಾಧಾನಗೊಂಡ ಆತ ಆಕೆಯನ್ನು ಪುಸಲಾಯಿಸಿ 2012ರ ಆ.16ರಂದು  ಮರೋಡಿ ಗ್ರಾಮದ ದೇರಾಜೆಗುಡ್ಡಕ್ಕೆ ಕರೆದೊಯ್ಯುತ್ತಾನೆ. ಅಲ್ಲಿ ಮಹಿಳೆಯನ್ನು ಅತ್ಯಾಚಾರ ಮಾಡಿ ಕೊಲೆಗೈದು ಪರಾರಿಯಾಗುತ್ತಾನೆ.

ಸಂಜೆ ಶಾಲೆಯಿಂದ ಬಂದ ಆಕೆಯ ಪುತ್ರ, ತನ್ನ ತಾಯಿಯು ಮನೆಯಲ್ಲಿ ಕಾಣದಿದ್ದಾಗ ಮಾವನ ಬಳಿ ವಿಷಯ ತಿಳಿಸುತ್ತಾನೆ. ಕೂಡಲೇ ಸಂಬಂಧಿಕರು, ಊರವರು ಮಹಿಳೆಗಾಗಿ ಹುಡುಕಾಟ ನಡೆಸುತ್ತಾರೆ. ಆ.18ರಂದು ವೇಣೂರು ಠಾಣೆಯಲ್ಲಿ ಮಹಿಳೆ ನಾಪತ್ತೆಯಾದ ಬಗ್ಗೆ ದೂರು ನೀಡಿ, ಅನುಮಾನದ ಮೇಲೆ ಲಕ್ಷ್ಮಣ ಆಚಾರ್ಯನ ಬಗ್ಗೆ ಸಂಶಯ ವ್ಯಕ್ತಪಡಿಸುತ್ತಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿ ಲಕ್ಷ್ಮಣ ಆಚಾರ್ಯನನ್ನು ಆ.19ರಂದು ಬಂಧಿಸುತ್ತಾರೆ. ತೀವ್ರ ವಿಚಾರಣೆ ನಡೆಸಿದಾಗ ಮಹಿಳೆಯನ್ನು ಕೊಲೆ ಮಾಡಿರುವುದಾಗಿ ಯುವಕ ಒಪ್ಪಿದ್ದಲ್ಲದೆ, ಸ್ಥಳ ಮಹಜರು ನಡೆಸಿದಾಗ ಕೊಲೆಗೈದ ಸ್ಥಳದಲ್ಲಿ ಮಹಿಳೆಯ ಕೊಳೆತ ಮೃತದೇಹ ಪತ್ತೆಯಾಗಿತ್ತು. ಕೊಲೆಗೈದ ಬಳಿಕ ಆರೋಪಿ ಮಹಿಳೆಯ ಕರಿಮಣಿ ಸರ ಹಾಗೂ ಕಿವಿಯೋಲೆ ಕದ್ದೊಯ್ದಿದ್ದು, ಒಂದನ್ನು ಮಾರಾಟ ಮಾಡಿ ಇನ್ನೊಂದನ್ನು ಫೈನಾನ್ಸ್‌ನಲ್ಲಿ ಅಡವಿಟ್ಟಿರುವುದಾಗಿ ವಿಚಾರಣೆಯಲ್ಲಿ ತಿಳಿಸಿರುತ್ತಾನೆ.

ಶಿಕ್ಷೆ ವಿವರ

ಕೊಲೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸೈಯಿದುನ್ನೀಸಾ ಅವರು 302 (ಕೊಲೆ) ಪ್ರಕರಣದ ಆರೋಪದಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ಎರಡು ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ವಿಧಿಸಲು ತಪ್ಪಿದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಸಾದಾ ಶಿಕ್ಷೆ ಅನುಭವಿಸಬೇಕು. ದಂಡದ ಮೊತ್ತದಲ್ಲಿ ಆಕೆಯ ಪುತ್ರನಿಗೆ 1.5 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಕರಣದಲ್ಲಿ 23 ಜನ ಸಾಕ್ಷಿದಾರರು ವಿಚಾರಿಸಲಾಗಿದ್ದು, 20 ದಾಖಲಾತಿ ಸಂಗ್ರಹಿಸಲಾಗಿದೆ. ವೇಣೂರು ಇನ್‌ಸ್ಪೆಕ್ಟರ್ ಆಗಿದ್ದ ಭಾಸ್ಕರ್ ಶೆಟ್ಟಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರಕಾರದ ಪರವಾಗಿ ಜುಡಿತ್ ಒ.ಎಂ.ಕ್ರಾಸ್ತ ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X