Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯ ಮಳೆಹಾನಿಯ ಮೌಲ್ಯಮಾಪನ...

ಉಡುಪಿ ಜಿಲ್ಲೆಯ ಮಳೆಹಾನಿಯ ಮೌಲ್ಯಮಾಪನ ವರದಿ ಸಲ್ಲಿಕೆ: ಇಲಾಖಾಧಿಕಾರಿಗಳಿಗೆ ಸಂಸದೆ ಶೋಭಾ ಸೂಚನೆ

ವಾರ್ತಾಭಾರತಿವಾರ್ತಾಭಾರತಿ9 Aug 2019 9:57 PM IST
share
ಉಡುಪಿ ಜಿಲ್ಲೆಯ ಮಳೆಹಾನಿಯ ಮೌಲ್ಯಮಾಪನ ವರದಿ ಸಲ್ಲಿಕೆ: ಇಲಾಖಾಧಿಕಾರಿಗಳಿಗೆ ಸಂಸದೆ ಶೋಭಾ ಸೂಚನೆ

ಉಡುಪಿ, ಆ.9: ಜಿಲ್ಲೆಯಲ್ಲಿ ಮಳೆಯಿಂದ ಜೀವ ಹಾನಿ ಮತ್ತು ಆಸ್ತಿಪಾಸ್ತಿ ನಷ್ಟಕ್ಕೊಳಗಾದವರ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ, ಅಗತ್ಯ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಬೇಕು. ಮುಂದಿನ ಒಂದು ವಾರದವರೆಗೆ ಉಂಟಾಗುವ ಹಾನಿಗಳ ವೌಲ್ಯಮಾಪನ ವರದಿಯನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗೆ ಸಲ್ಲಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಎಲ್ಲ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು.

ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ನೆರೆ ಹಾವಳಿ ಮತ್ತು ಪ್ರಾಕೃತಿಕ ವಿಕೋಪ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು. ಮಳೆಹಾನಿಯನ್ನು ಸಮರ್ಥವಾಗಿ ನಿಬಾಯಿ ಸಲು ಎಲ್ಲಾ ಅಧಿಕಾರಿಗಳೂ ದಿನದ 24ಗಂಟೆಯೂ ಸಾರ್ವಜನಿಕರ ಜೊತೆ ಸಂಪರ್ಕದಲ್ಲಿರಬೇಕು ಮತ್ತು ತುರ್ತು ಸಂದರ್ಭದಲ್ಲಿ ಜನರ ನೆರವಿಗೆ ಧಾವಿ ಸಲು ಜಿಲ್ಲಾಧಿಕಾರಿ ಸಹಿತ ಎಲ್ಲಾ ಇಲಾಖೆಗಳೂ ಸರ್ವ ಸನ್ನ್ಧರಾಗಿರಬೇಕು ಎಂದರು.

ರಕ್ಷಣಾ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಎಸ್ಪಿ ನಿಶಾ ಜೇಮ್ಸ್, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವು ಜಿಲ್ಲೆಯ ಪೊಲೀಸ್ ಸಿಬ್ಬಂದಿಗಳಿಗೆ ರಕ್ಷಣಾ ಕಾರ್ಯದ ಬಗ್ಗೆ ತರಬೇತಿ ನೀಡಿದ್ದು, ಇಲಾಖೆಯು ಎರಡು ತಂಡ ಗಳನ್ನು ನೇಮಿಸಿ ಅಗತ್ಯ ಬಿದ್ದಲ್ಲಿ ಈ ತಂಡಗಳನ್ನು ಕಳುಹಿಸಿಕೊಡಲು ಸನ್ನದ್ದವಾಗಿದೆ ಎಂದರು.

ಸಿಡಿಲಿನಿಂದ ಜೀವ ಹಾನಿಗೊಳಗಾದ ಜಾನುವಾರುಗಳಿಗೆ ಪರಿಹಾರ ಮೊತ್ತ ವನ್ನು ಬಿಡುಗಡೆ ಮಾಡಲಾಗಿದೆ ಎಂದು ಪಶು ಸಂಗೋಪನಾಧಿಕಾರಿ ಗಳು ತಿಳಿಸಿದರು. ಆ.5ರಿಂದ 8ರವರೆಗೆ ಬಿದ್ದ ಮಳೆಯಿಂದ ಜಿಲ್ಲೆಯಲ್ಲಿ 1166.80 ಹೆಕ್ಟೇರ್ ಕೃಷಿಭೂಮಿ ಮತ್ತು 5.038 ಹೆಕ್ಟೇರ್ ತೋಟಗಾರಿಕಾ ಭೂಮಿ ಜಲಾ ವೃತಗೊಂಡಿದ್ದು, ಕೋಟ್ಯಂತರ ರೂಪಾಯಿಯ ಬೆಳೆ ನಷ್ಟವಾಗಿದೆ ಎಂದು ಕೃಷಿ ಇಲಾಖಾಧಿಕಾರಿ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ರಸ್ತೆಗಳು, ಕಟ್ಟಡಗಳು, ಸಮುದ್ರ ಕೊರೆತ, ಮೆಸ್ಕಾಂ ಇಲಾಖೆ ವ್ಯಾಪ್ತಿಯಲ್ಲಿ ಒಟ್ಟು 6318.64 ಲಕ್ಷ ರೂ. ಹಾನಿಯಾಗಿದೆ ಎಂದು ಅಧಿಕಾರಿ ಗಳು ಸಭೆಗೆ ತಿಳಿಸಿದರು. ಹಾನಿಗೊಳಗಾದ ರಾಷ್ಟ್ರೀಯ ಹೆದ್ದಾರಿಗಳಿಗೆ ಮೊದಲ ಹಂತದಲ್ಲಿ ಅನುದಾನ ಬಿಡುಗಡೆ ಮಾಡುವ ಭರವನೆಯ್ನು ಶೋಭಾ ಕರಂದ್ಲಾಜೆ ನೀಡಿದರು.

ಗಾಳಿ ಮಳೆಗೆ ಬಿದ್ದ ಮರಗಳನ್ನು ಮತ್ತು ಅಪಾಯಕಾರಿ ಮರಗಳನ್ನು ತೆರವು ಗೊಳಿಸುವ ಹಾಗೂ ವಿದ್ಯುತ್ ತಂತಿಗೆ ಅಪಾಯ ಒಡ್ಡುವ ಮರಗಳನ್ನು ಕಡಿ ಯಲು ಅರಣ್ಯ ಇಲಾಖೆಯು 8 ಕ್ಷಿಪ್ರ ಕಾರ್ಯಪಡೆ ತಂಡಗಳನ್ನು ರಚಿಸಿದೆ. ಎಂದು ಅರಣ್ಯಾಧಿಕಾರಿ ಮಾಹಿತಿ ನೀಡಿದರು. ಜಿಲ್ಲೆಯ ವಿದ್ಯುತ್ ಸಮಸ್ಯೆ ಗಳನ್ನು ಆಲಿಸಲು ದಿನದ 24ಗಂಟೆ ಕಾರ್ಯನಿರತವಾಗಿರುವ ತಂಡವನ್ನು ನೇಮಿಸಲಾಗಿದೆ. ತುರ್ತು ಸಹಾಯಕ್ಕೆ 1912 ಸಹಾಯವಾಣಿಗೆ ಕರೆ ನೀಡ ಬಹುದು ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದರು.

ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಬಾಕಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮತ್ತು ಉಡುಪಿ ಕಂದಾಯ ಉಪ ವಿಭಾಗ ಆರಂಭಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಸಂಸದರು ಹೇಳಿದರು.

ಸಭೆಯಲ್ಲಿ ಜಿಪಂ ಅಧ್ಯಕ್ಷ ದಿನಕರ ಬಾಬು, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು, ಪುತ್ತೂರು ಶಾಸಕ ಸಂಜೀವ ಮಠಂದೂರು, ವಿಧಾನ ಪರಿಷತ್ ಸದಸ್ಯ ಕೋಟ ಶ್ರೆನಿವಾಸ ಪೂಜಾರಿ, ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ರಘುಪತಿ ಭಟ್, ಬಿ.ಎಂ.ಸುಕುಮಾರ್ ಶೆಟ್ಟಿ, ಲಾಲಾಜಿ. ಆರ್.ಮೆಂಡನ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧೂ ಬಿ.ರೂಪೇಶ್, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಕುಂದಾಪುರ ಉಪ ವಿಭಾಗಾಧಿಕಾರಿ ಮಧು ಕೇಶ್ವರ್ ಮೊದಲಾದವರು ಹಾಜರಿದ್ದರು.

303 ಮನೆಗಳಿಗೆ ಪರಿಹಾರ ಬಿಡುಗಡೆ

ಜಿಲ್ಲೆಯಲ್ಲಿ 568 ಮನೆಗಳು ಹಾನಿಗೊಳಗಾಗಿದ್ದು, ಅದರಲ್ಲಿ 303 ಮನೆ ಗಳಿಗೆ ಈಗಾಗಲೇ 32.65 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಲಾಗಿದೆ. ಉಳಿದ ಮನೆಗಳಿಗೆ ಶೀಘ್ರವೇ ಹಣ ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಮಳೆಯಿಂದಾಗಿ ಭಾಗಶಃ ಹಾನಿಗೊಳಗಾದ ಮನೆಗಳಿಗೆ 6 ಸಾವಿರ ರೂ. ಮತ್ತು ಸಂಪೂರ್ಣವಾಗಿ ಹಾನಿಗೊಳಗಾಗಿರುವ ಮನೆಗಳಿಗೆ 95,100 ರೂ.ಗಳನ್ನು ಪರಿಹಾರವಾಗಿ ನೀಡಲಾಗುತ್ತಿದೆ. ಪ್ರಾಕೃತಿಕ ವಿಕೋಪ ಪಿ.ಡಿ ಖಾತೆ ಯಲ್ಲಿ 28.35 ಕೋಟಿ ರೂ. ಅನುದಾನವಿದ್ದು, ಅದರಲ್ಲಿ ಪ್ರತಿ ತಹಶೀಲ್ದಾರರ ಖಾತೆಗೆ 10 ಲಕ್ಷ ರೂ. ಮುಂಗಡವಾಗಿ ಬಿಡುಗಡೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X