ಆ. 11ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಿಎಂ ಯಡಿಯೂರಪ್ಪ ಪ್ರವಾಸ

ಬೆಂಗಳೂರು, ಆ. 10: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆ. 11 ರಂದು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಆ.12 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಪ್ರವಾಹ ಮತ್ತು ಭೂಕುಸಿತ ಉಂಟಾಗಿರುವ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.
ಈ ಮುಂಚಿನ ಕಾರ್ಯಕ್ರಮದಂತೆ ಮುಖ್ಯಮಂತ್ರಿಗಳು ಇಂದೇ ಮಂಗಳೂರಿಗೆ ಭೇಟಿ ನೀಡಬೇಕಾಗಿತ್ತು. ಪ್ರಸ್ತುತ ಹವಾಮಾನದಲ್ಲಿ ವೈಮಾನಿಕ ಸಮೀಕ್ಷೆ ಸಾಧ್ಯವಿಲ್ಲದ ಕಾರಣ ರಸ್ತೆ ಮೂಲಕವೇ ಪ್ರವಾಹ ಪೀಡಿತ ಸ್ಥಳಗಳಿಗೆ ಅವರು ಭೇಟಿ ನೀಡುವರು ಎಂದು ಪ್ರಕಟನೆ ತಿಳಿಸಿದೆ.
Next Story





