Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರವಾಹದಿಂದ ರಾಜ್ಯದಲ್ಲಿ ಹತ್ತು ಸಾವಿರ...

ಪ್ರವಾಹದಿಂದ ರಾಜ್ಯದಲ್ಲಿ ಹತ್ತು ಸಾವಿರ ಕೋಟಿ ರೂ. ಹಾನಿ: ಸಿಎಂ ಯಡಿಯೂರಪ್ಪ

ಅಮಿತ್ ಶಾ ಜೊತೆ ಮುಖ್ಯಮಂತ್ರಿ ವೈಮಾನಿಕ ಸಮೀಕ್ಷೆ

ವಾರ್ತಾಭಾರತಿವಾರ್ತಾಭಾರತಿ11 Aug 2019 6:42 PM IST
share
ಪ್ರವಾಹದಿಂದ ರಾಜ್ಯದಲ್ಲಿ ಹತ್ತು ಸಾವಿರ ಕೋಟಿ ರೂ. ಹಾನಿ: ಸಿಎಂ ಯಡಿಯೂರಪ್ಪ

ಬೆಳಗಾವಿ, ಆ.11: ಪ್ರಾಥಮಿಕ ಅಂದಾಜಿನ ಪ್ರಕಾರ ಬೆಳಗಾವಿ ಸೇರಿಂದತೆ ರಾಜ್ಯದಲ್ಲಿ ಪ್ರವಾಹ ಹಾಗೂ ಧಾರಾಕಾರ ಮಳೆಯಿಂದ ಹತ್ತು ಸಾವಿರ ಕೋಟಿ ರೂಪಾಯಿ ಹಾನಿಯಾಗಿದೆ. ಆದ್ದರಿಂದ ತಕ್ಷಣವೇ 3 ಸಾವಿರ ಕೋಟಿ ರೂಪಾಯಿ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಯಲ್ಲಿ ಪ್ರವಾಹ ಬಾಧಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ಹಾಗೂ ಹಿರಿಯ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಹತ್ತು ಸಾವಿರ ಕೋಟಿ ಹಾನಿಯು ಪ್ರಾಥಮಿಕ ಅಂದಾಜು ಮಾತ್ರವಾಗಿದೆ. ಪ್ರವಾಹ ಸ್ಥಿತಿಯನ್ನು ನೋಡಿದರೆ ಅಂದಾಜು 30 ರಿಂದ 40 ಸಾವಿರ ಕೋಟಿ ರೂಪಾಯಿ ಹಾನಿಯಾಗಿದೆ ಎಂಬುದು ನನ್ನ ಅಭಿಪ್ರಾಯ. ಸಮಗ್ರ ಸಮೀಕ್ಷೆ ಬಳಿಕ ಇದು ಗೊತ್ತಾಗಲಿದೆ. ಜನ-ಜಾನುವಾರುಗಳ ರಕ್ಷಣೆ ಹಾಗೂ ಪುನರ್ವಸತಿ ಕಲ್ಪಿಸುವುದು ಮತ್ತು ಜನರಿಗೆ ಪರಿಹಾರ ತಲುಪಿಸುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ. ಇದರಲ್ಲಿ ಯಾವುದೇ ರಾಜಿಯಿಲ್ಲ ಎಂದರು.

ಬೆಳೆಹಾನಿಯಿಂದ ತತ್ತರಿಸಿರುವ ರೈತರು, ಮನೆಗಳನ್ನು ಕಳೆದುಕೊಂಡಿರುವ ಜನರು ಆತಂಕ ಪಡಬೇಕಿಲ್ಲ. ಸರ್ಕಾರ ಅವರ ಜತೆಗಿದೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದರು. ರಾಷ್ಟ್ರೀಯ ವಿಪತ್ತು ಘೋಷಣೆ ಬಗ್ಗೆ ಕೇಂದ್ರ ಸರ್ಕಾರ ನಿರ್ಧರಿಸಲಿದೆ. ಪರಿಹಾರ ಒದಗಿಸುವುದು ರಾಜ್ಯ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದರು.

ವೈಮಾನಿಕ ಸಮೀಕ್ಷೆ:
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಾಯುಸೇನೆಯ ಹೆಲಿಕಾಪ್ಟರ್ ನಲ್ಲಿ ಎರಡು ಗಂಟೆ ಹತ್ತು ನಿಮಿಷಗಳ ಕಾಲ ಪ್ರವಾಹ ಬಾಧಿತ ಕರ್ನಾಟಕ ಹಾಗೂ ಮಹಾರಾಷ್ಟ್ರದ ಕೆಲ ಜಿಲ್ಲೆಗಳ ವೈಮಾನಿಕ ಸಮೀಕ್ಷೆ ನಡೆಸಿದರು.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ವೈಮಾನಿಕ ಸಮೀಕ್ಷೆ ಆರಂಭಿಸಿದ ಅವರು, ವಿಜಯಪುರದ ಆಲಮಟ್ಟಿ ಜಲಾಶಯದಿಂದ ಮಹಾರಾಷ್ಟ್ರದ ಕೊಯ್ನಾ ಜಲಾಶಯ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಹರಿಯುವ ನದಿಗಳನ್ನು ವೀಕ್ಷಿಸಿದರು.

ನೆರವಿಗೆ ಮನವಿ
ನೆರೆ ಸಂತ್ರಸ್ತರ ಪುನರ್ವಸತಿಗಾಗಿ ಸರ್ಕಾರಿ ನೌಕರರ ಸಂಘದಿಂದ 200 ಕೋಟಿ ರೂಪಾಯಿ ನೆರವು ನೀಡುವುದಾಗಿ ತಿಳಿಸಿದ್ದಾರೆ. ಅದೇ ರೀತಿ ರಾಜ್ಯದ ಕೈಗಾರಿಕೋದ್ಯಮಿಗಳು ನೆರವು ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿಕೊಂಡರು.

2005 ರಲ್ಲಿ ಇದೇ ರೀತಿ ಪರಿಸ್ಥಿತಿ ಎದುರಾದಾಗ ನೆರವಿನ ಮಹಾಪೂರ ಹರಿದುಬಂದಿತ್ತು. ಈಗಲೂ ಕೈಗಾರಿಕೋದ್ಯಮಿಗಳು ಕೈಜೋಡಿಸಿದರೆ ಸಂತ್ರಸ್ತರ ಪುನರ್ವಸತಿ ಸುಲಭವಾಗಲಿದೆ ಎಂದರು.

ನಾಳೆಯಿಂದ ಮತ್ತೇ ಪ್ರವಾಸ:
ಪ್ರವಾಹ ಬಾಧಿತ ಐದಾರು ಜಿಲ್ಲೆಗಳಲ್ಲಿ ನಾಳೆಯಿಂದ ಮತ್ತೇ ಪ್ರವಾಸ ಕೈಗೊಂಡು ಸಂತ್ರಸ್ತರ ಅಹವಾಲು ಆಲಿಸುತ್ತೇನೆ ಎಂದು ತಿಳಿಸಿದರು.
ಸಮಗ್ರ ಸಮೀಕ್ಷೆಯ ವರದಿ ಬಂದ ಬಳಿಕ ಹೆಚ್ಚಿನ ಅನುದಾನ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು.

ಆಗಸ್ಟ್ 15 ರ ಬಳಿಕ ಸಂಪುಟ ವಿಸ್ತರಣೆ:
ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿರುವುದರಿಂದ ಮೊದಲು ಪರಿಹಾರ ಹಾಗೂ ಸಂತ್ರಸ್ತರ ಪುನರ್ವಸತಿಗೆ ಆದ್ಯತೆ ನೀಡಬೇಕು‌. ಆಗಸ್ಟ್ 15 ರ ಬಳಿಕ ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಿರ್ಧರಿಸೋಣ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಆ ಪ್ರಕಾರ ಆಗಸ್ಟ್ 15 ರವರೆಗೆ ರಾಜ್ಯದಲ್ಲಿ ಪ್ರವಾಸ ಕೈಗೊಂಡು ಆ.16 ರಂದು ನವದೆಹಲಿಗೆ ತೆರಳಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಸುರೇಶ್ ಅಂಗಡಿ, ಶಾಸಕರಾದ ಉಮೇಶ್ ಕತ್ತಿ, ಅಭಯ್ ಪಾಟೀಲ, ಶಶಿಕಲಾ ಜೊಲ್ಲೆ, ದುರ್ಯೋಧನ ಐಹೊಳೆ, ಮಹಾದೇಪ್ಪ ಯಾದವಾಡ, ರಾಜ್ಯಸಭಾ ಸದಸ್ ಡಾ.ಪ್ರಭಾಕರ್ ಕೋರೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X