Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎರಡು ದಿನಗಳಲ್ಲಿ ಪ್ರವಾಹ ಪರಿಸ್ಥಿತಿ...

ಎರಡು ದಿನಗಳಲ್ಲಿ ಪ್ರವಾಹ ಪರಿಸ್ಥಿತಿ ಸಾಮಾನ್ಯ: ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್

ವಾರ್ತಾಭಾರತಿವಾರ್ತಾಭಾರತಿ11 Aug 2019 7:36 PM IST
share
ಎರಡು ದಿನಗಳಲ್ಲಿ ಪ್ರವಾಹ ಪರಿಸ್ಥಿತಿ ಸಾಮಾನ್ಯ: ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್

ಬೆಳಗಾವಿ, ಆ.11: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಂದ ಮಾಹಿತಿ ಪಡೆದುಕೊಂಡರು.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದ ಸಭಾಂಗಣದಲ್ಲಿ ರವಿವಾರ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ರಾಜ್ಯದಲ್ಲಿ ಮಳೆಯ ವಿವರ ಹಾಗೂ ಜಲಾಶಯಗಳಲ್ಲಿನ ನೀರಿನ ಮಟ್ಟದ ಕುರಿತು ಮಾಹಿತಿ ಒದಗಿಸಿದರು.

ರಾಜ್ಯದಲ್ಲಿ ಇವತ್ತು ಆರೇಂಜ್ ಅಲರ್ಟ್ ಘೋಷಿಸಲಾಗಿದ್ದು, ನಾಳೆ ಯೆಲ್ಲೋ (ಹಳದಿ) ಅಲರ್ಟ್ ಇರುತ್ತದೆ. ಇಂದು ಸ್ಥಿತಿ ಸಾಮಾನ್ಯವಾಗಿದ್ದು, ನಾಳೆ ಇಡೀ ರಾಜ್ಯದಲ್ಲಿ ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಬರಲಿದೆ ಎಂದು ಮುಖ್ಯಕಾರ್ಯದರ್ಶಿ ತಿಳಿಸಿದರು.

ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ವಾಯುಸೇನೆ, ಪೊಲೀಸ್ ಸೇರಿದಂತೆ ವಿವಿಧ ರಕ್ಷಣಾ ತಂಡಗಳ ಬಗ್ಗೆ ಅವರು ಮಾಹಿತಿ ನೀಡಿದರು.

ಪ್ರಾಥಮಿಕ ಮಾಹಿತಿ ಪ್ರಕಾರ ರಾಜ್ಯದಲ್ಲಿ ಇದುವರೆಗೆ 34 ಜನರು ಮೃತಪಟ್ಟಿದ್ದು, ಪ್ರವಾಹ ಹಾಗೂ ಮಳೆಯಿಂದಾಗಿ ಮರಣ ಹೊಂದಿದವರ ಕುಟುಂಬದವರಿಗೆ 48 ಗಂಟೆಗಳಲ್ಲಿ ಐದು ಲಕ್ಷ ರೂ.ಪರಿಹಾರದ ಚೆಕ್ ನೀಡಲಾಗುತ್ತಿದೆ ಎಂದು ವಿಜಯಭಾಸ್ಕರ್ ಹೇಳಿದರು.

ಪರಿಹಾರ ಕೇಂದ್ರಗಳನ್ನು ಆರಂಭಿಸಿ ಸಂತ್ರಸ್ತ ಜನರಿಗೆ ಊಟ, ವಸತಿ ಮತ್ತು ಬಟ್ಟೆಗಳನ್ನು ಒದಗಿಸಲಾಗುತ್ತಿದೆ. ವೈದ್ಯಕೀಯ ಸೌಲಭ್ಯ ಕೂಡ ನೀಡಲಾಗುತ್ತಿದ್ದು, ಇದಲ್ಲದೇ ಜಾನುವಾರುಗಳಿಗೂ ಆಶ್ರಯ ಒದಗಿಸಿದ್ದು, ಮೇವು ವಿತರಣೆ ಮಾಡಲಾಗುತ್ತಿದೆ. ಈವರೆಗೆ 3 ಲಕ್ಷಕ್ಕೂ ಅಧಿಕ ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಅವರು ತಿಳಿಸಿದರು.

ಪ್ರವಾಹದಿಂದ ತತ್ತರಿಸಿರುವ ಜಿಲ್ಲೆಗಳಲ್ಲಿ ತಕ್ಷಣವೇ ಪರಿಹಾರ ಮತ್ತು ಪುನರ್ವಸತಿ ಕಾರ್ಯ ಕೈಗೊಳ್ಳಲು ಈಗಾಗಲೇ 100 ಕೋಟಿ ರೂ.ಬಿಡುಗಡೆ ಮಾಡಲಾಗಿದೆ. ಪ್ರಾಥಮಿಕ ಸಮೀಕ್ಷೆ ಪ್ರಕಾರ ಪ್ರವಾಹ ಪೀಡಿತ ವಿವಿಧ ಜಿಲ್ಲೆಗಳಲ್ಲಿ 4.15 ಲಕ್ಷ ಹೆಕ್ಟೇರ್ ಕೃಷಿ ಮತ್ತು ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ ಎಂದು ವಿಜಯಭಾಸ್ಕರ್ ಹೇಳಿದರು.

136 ಪ್ರಮುಖ ರಸ್ತೆಗಳ ಸಂಪರ್ಕ ಕಡಿತಗೊಂಡಿತ್ತು. ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ರಸ್ತೆಗಳು ಪ್ರವಾಹ ಮತ್ತು ಭೂ ಕುಸಿತದಿಂದ ಹಾನಿಗೊಳಗಾಗಿವೆ. ರಸ್ತೆ, ಸೇತುವೆ, ಶಾಲೆಗಳು, ಪೈಪ್‌ಲೈನ್ ವಿದ್ಯುತ್ ಕಂಬಗಳು ಸೇರಿದಂತೆ ಮೂಲಭೂತ ಸೌಕರ್ಯಗಳ ಹಾನಿಯ ಸಮೀಕ್ಷೆ ಪ್ರಗತಿಯಲ್ಲಿದೆ ಎಂದು ಅವರು ವಿವರಿಸಿದರು.

ಈ ವೇಳೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಯ ಕಾರ್ಯದರ್ಶಿ ಶಿವಯೋಗಿ ಕಳಸದ, ಲಕ್ಷ್ಮಿನಾರಾಯಣ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್ ಕುಮಾರ್, ಐಜಿಪಿ ಎಚ್.ಜಿ.ರಾಘವೇಂದ್ರ ಸುಹಾಸ್, ಜಿಲ್ಲಾ ಪಂಚಾಯತ್ ಸಿಇಓ ಡಾ.ರಾಜೇಂದ್ರ ಕೆ.ವಿ. ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X