Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗಿನಲ್ಲಿ ಮಳೆ ಕೊಂಚ ಕ್ಷೀಣ:...

ಕೊಡಗಿನಲ್ಲಿ ಮಳೆ ಕೊಂಚ ಕ್ಷೀಣ: ಮುಂದುವರಿದ ಪ್ರವಾಹ ಆತಂಕ

ವಾರ್ತಾಭಾರತಿವಾರ್ತಾಭಾರತಿ11 Aug 2019 11:33 PM IST
share
ಕೊಡಗಿನಲ್ಲಿ ಮಳೆ ಕೊಂಚ ಕ್ಷೀಣ: ಮುಂದುವರಿದ ಪ್ರವಾಹ ಆತಂಕ

ಮಡಿಕೇರಿ, ಆ.11: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ವಾರದ ಕಾಲ ಸಾಕಷ್ಟು ಉತ್ಪಾತಗಳನ್ನು ಸೃಷ್ಟಿಸಿದ ಮಹಾಮಳೆ, ಭಾನುವಾರದಂದು ಕೊಂಚ ಕ್ಷೀಣವಾಗುವ ಮೂಲಕ ಜೀವನದಿ ಕಾವೇರಿ, ಲಕ್ಷ್ಮಣತೀರ್ಥ ನದಿಗಳ ನೀರಿನ ಮಟ್ಟ  ಇಳಿಮುಖಗೊಳ್ಳುತ್ತಾ ಸಾಗಿದೆಯಾದರು, ಆತಂಕದ ವಾತಾವರಣ ಮುಂದುವರಿದಿದೆ.

ಜೀವನದಿ ಕಾವೇರಿಯ ಉಗಮ ಸ್ಥಾನವಾದ ತಲಕಾವೇರಿ ಮತ್ತು ಭಾಗಮಂಡಲ ವ್ಯಾಪ್ತಿಯಲ್ಲಿ ಕಳೆದ ಇಪ್ಪತ್ತನಾಲ್ಕು ಗಂಟೆಗಳ ಅವಧಿಯಲ್ಲಿ ಮಳೆಯ ಪ್ರಮಾಣ ಸಾಕಷ್ಟು ಕುಸಿದಿದ್ದು, ಸರಾಸರಿ 4 ಇಂಚು ಮಳೆ ದಾಖಲಾಗಿದೆ. ಇದರಿಂದ ಪ್ರವಾಹದ ಮಟ್ಟ ಇಳಿಮುಖವಾಗಿದ್ದು, ನದಿ ಪಾತ್ರದ ನಾಪೋಕ್ಲು, ಸಿದ್ದಾಪುರ ಭಾಗಗಳಲ್ಲಿನ ನೆರೆ ಕೊಂಚ ಇಳಿಮುಖವಾಗಿದೆ. ಕುಶಾಲನಗರ ವ್ಯಾಪ್ತಿಯಲ್ಲಿ ಪ್ರವಾಹದ ಮಟ್ಟ ಇಳಿದಿದೆಯಾದರು ಇನ್ನೂ ಸಂಚಾರ ಸುಗಮವಾಗಿಲ್ಲ, ಹಲ ಬಡಾವಣೆಗಳು ನೀರಿನಿಂದ ಆವೃತ್ತವಾಗಿದೆ. 

ಈ ಬಾರಿ ಮುಂಗಾರಿನ ಮಳೆಯ ಆರ್ಭಟಕ್ಕೆ ದಕ್ಷಿಣ ಕೊಡಗಿನ ವೀರಾಜಪೇಟೆ ತಾಲೂಕಿನ ಹಲವು ಗ್ರಾಮಗಳು ನಲುಗಿ ಹೋಗಿದ್ದು, ಸಹಸ್ರಾರು ಏಕರೆ ಕೃಷಿ ಭೂಮಿ ಮುಳುಗಡೆಯಾಗಿ ನೂರಾರು ಮನೆಗಳು ಮುಳುಗಡೆಗೊಂದು ಕಂಡು ಕೇಳರಿಯದ ಅನಾಹುತಗಳು ಸೃಷ್ಟಿಯಾಗಿದೆ. ವಾರದ ನಂತರ ಹವಾಮಾನ ಇಲಾಖೆಯ ‘ರೆಡ್ ಅಲರ್ಟ್’ ಮನ್ಸೂಚನೆಗೆ ತದ್ವಿರುದ್ಧವಾಗಿ ಮಳೆಯ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಇಳಿಮುಖಗೊಂಡು ಒಂದಷ್ಟು ನೆಮ್ಮದಿಯನ್ನು ಮೂಡಿಸಿದೆ.

ಬರೆ ಕುಸಿತದ ಆತಂಕ-ಮಳೆಯ ಪ್ರಮಾಣ ಇಳಿಮುಖಗೊಳ್ಳುತ್ತಿರುವ ಹಂತದಲ್ಲೆ ಮಡಿಕೇರಿಯಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯ ಅಲ್ಲಲ್ಲಿ ಬರೆ ಕುಸಿತವಾಗಿದ್ದು, ಮಳೆಯ ಪ್ರಮಾಣ ಹೆಚ್ಚಾದಲ್ಲಿ ಸಂಪರ್ಕ ಕಡಿತಗೊಳ್ಳುವ ಅಪಾಯ ಎದುರಾಗಿದೆ.

ಮಡಿಕೇರಿ ಸಮೀಪದ ಗಾಳಿಬೀಡಿಗೆ ತೆರಳುವ ಹಾದಿಯಲ್ಲಿ ಬರೆ ಕುಸಿತ ಸಂಭವಿಸಿದ್ದು, ಇದನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸುವ ಕಾರ್ಯ ನಡೆದಿದೆ. ತಲಕಾವೇರಿಯ ಕಾರು ಪಾರ್ಕಿಂಗ್ ಬಳಿ ಭೂ ಕುಸಿತ ಸಂಭವಿಸಿರುವ ಬಗ್ಗೆ ವರದಿಯಾಗಿದೆ.

ಕೊಡಗಿನ ಹೆಬ್ಬಾಗಿಲು ಕುಶಾಲನಗರದ ಹಲ ಬಡಾವಣೆಗಳು ಕಳೆದ ಒಂದು ವಾರದ ಭಾರೀ ಮಳೆಗೆ ಸಿಲುಕಿ ನಲುಗಿದ್ದು, ನೂರಾರು ಮನೆಗಳು ಜಲಾವೃತವಾಗಿ, ಸಾವಿರಾರು ಮಂದಿ ಗಂಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ಕಳೆದ ಒಂದು ದಿನದ ಅವಧಿಯಲ್ಲಿ ಮಳೆಯ ಪ್ರಮಾಣ ಇಳಿದಿರುವುದರಿಂದ ಕೆಲ ಅಡಿಗಳಷ್ಟು ಪ್ರವಾಹದ ನೀರು ಇಳಿದಿದ್ದರೂ ಬಡಾವಣೆಗಳಿಗೆ ಬೋಟ್‍ಗಳಲ್ಲೆ ತೆರಳುವ ಪರಿಸ್ಥಿತಿ ಇದೆ.

ಮಡಿಕೇರಿಯಿಂದ ಮೂರ್ನಾಡು ಮಾರ್ಗವಾಗಿ ವೀರಾಜಪೇಟೆಯನ್ನು ಸಂಪರ್ಕಿಸುವ ರಸ್ತೆಯ ಕೊಂಡಂಗೇರಿಯಲ್ಲಿ ಹಿಂದೆಂದೂ ಕಾಣದ ಪ್ರವಾಹವೇರ್ಪಟ್ಟು ಹಲಮನೆಗಳು ಜಲಾವೃತವಾಗಿ ನೂರಾರು ಮಂದಿ ಪರಿಹಾರ ಕೇಂದ್ರಗಳಲ್ಲಿ ನೆಲೆ ನಿಂತಿದ್ದಾರೆ. ಇಲ್ಲಿಯೂ ಮಳೆಯ ಪ್ರಮಾಣ ಕ್ಷೀಣಿಸಿದ್ದರು, ಪ್ರವಾಹ ಅತ್ಯಂತ ನಿಧಾನವಾಗಿ ಇಳಿಮುಖವಾಗುತಿದೆಯಷ್ಟೆ. ಇನ್ನೊಂದು ದಿನ ಮಳೆ ಬಿಡುವು ನೀಡಿದಲ್ಲಿ ರಸ್ತೆಯ ಮೇಲೆ ಹರಿಯುತ್ತಿರುವ ನೀರು ಕೆಳಕ್ಕಿಳಿದು ಸಂಚಾರ ಸುಗಮಗೊಳ್ಳಬಹುದು. 

ದಕ್ಷಿಣ ಕೊಡಗಿನ ಶ್ರೀಮಂಗಲ, ಹುದಿಕೇರಿ, ಪೊನ್ನಂಪೇಟೆ, ಅಮ್ಮತ್ತಿ , ಬಾಳೆಲೆ ವಿಭಾಗಗಳಲ್ಲು ಮಳೆಯ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಇಳಿಮುಖವಾಗಿದೆಯಾದರು, ಪ್ರವಾಹವಿನ್ನೂ ಇಳಿಯಬೇಕಿದೆ. ಹಲವೆಡೆಗಳಲ್ಲಿ ರಸ್ತೆಯ ಮೇಲೆ ಹರಿಯುತ್ತಿದ್ದ ಪ್ರವಾಹದ ನೀರು ಇಳಿದು ಸಂಚಾರ ಸುಗಮವಾಗಿದೆ.

ನೆಮ್ಮದಿಯ ಭಾವ ಮೂಡಿಸಿದ ರವಿಕಿರಣ- ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಜಿಲ್ಲೆಯ ಬಹಳಷ್ಟು ಭಾಗಗಳಲ್ಲಿ ಕಳೆದ ಒಂದು ವಾರದ ಬಳಿಕ ಬೆಳಗ್ಗಿನ ಅವಧಿಯಲ್ಲಿ ಬಿಸಿಲು ಮೂಡಿ ನೆಮ್ಮದಿಯ ಭಾವವನ್ನು ಮೂಡಿಸಿತು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X