Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಳೆ ಸಾಧ್ಯತೆ: ಕೊಡಗಿನ...

ಮಳೆ ಸಾಧ್ಯತೆ: ಕೊಡಗಿನ ಶಾಲೆ-ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ12 Aug 2019 8:33 PM IST
share
ಮಳೆ ಸಾಧ್ಯತೆ: ಕೊಡಗಿನ ಶಾಲೆ-ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ

ಮಡಿಕೇರಿ ಆ.12 : ಕೊಡಗು ಜಿಲ್ಲೆಯಲ್ಲಿ ಮಳೆ ಶಾಂತವಾಗಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನೀರಿನ ಹರಿವು ತಗ್ಗಿದೆ. ಮುಂದಿನ 5 ದಿನಗಳವರೆಗೆ ಜಿಲ್ಲೆಯಾದ್ಯಂತ ಸಾಮಾನ್ಯ ಮಳೆಯಾಗಲಿದೆ ಮತ್ತು ಒಳನಾಡು ಪ್ರದೇಶಗಳ ಅಲ್ಲಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಜಿಲ್ಲೆಯಲ್ಲಿ ಈಗಾಗಲೇ ಉಂಟಾಗಿದ್ದ ಪ್ರವಾಹ ಪರಿಸ್ಥಿತಿಯಿಂದ ಮತ್ತು ಕೆಲವು ಪ್ರದೇಶಗಳಲ್ಲಿ ಆದ ಭೂಕುಸಿತದಿಂದ ರಸ್ತೆ ಸಂಪರ್ಕಗಳು ಕಡಿತಗೊಂಡಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರು ಎಚ್ಚರದಿಂದಿರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ಮತ್ತೊಂದೆಡೆ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿರುವುದರಿಂದ ಮತ್ತು ಕೆಲವು ಶಾಲೆಗಳಲ್ಲಿ ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಪರಿಹಾರ ಕೇಂದ್ರಗಳನ್ನು ತೆರೆದಿರುವುದರಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ಆ.13 ಮತ್ತು 14ರಂದು  ರಜೆ ಘೋಷಿಸಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ.

ರಸ್ತೆಗಳು ಬಂದ್
ಜಿಲ್ಲೆಯಲ್ಲಿ ಉಂಟಾದ ಪ್ರವಾಹ- ಭೂಕುಸಿತದಿಂದಾಗಿ ಬಂದ್ ಆಗಿದ್ದ ಕೆಲವು ರಸ್ತೆಗಳು ಸೋಮವಾರದಿಂದ ಸಂಚಾರಕ್ಕೆ ಮುಕ್ತವಾಗಿವೆಯಾದರೂ ಮತ್ತೆ ಕೆಲವು ರಸ್ತೆಗಳು ಇನ್ನೂ ಬಂದ್ ಆಗಿವೆ.

ಮಡಿಕೇರಿ-ವೀರಾಜಪೇಟೆ ರಾಜ್ಯ ಹೆದ್ದಾರಿಯ ಬೇತ್ರಿ ಸೇತುವೆಗೆ ಪ್ರವಾಹದ ಸಂದರ್ಭ ಮರ ಬಡಿದ ಪರಿಣಾಮ ಸಣ್ಣ ಪ್ರಮಾಣದ ಬಿರುಕು ಕಾಣಿಸಿಕೊಂಡಿರುವುದಾಗಿ ಹೇಳಲಾಗಿದ್ದು, ಈ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಲಘು ವಾಹನಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಬಸ್ ಸೇರಿದಂತೆ ಇತರ ವಾಹನಗಳು ಮಡಿಕೇರಿ-ಹಾಕತ್ತೂರು-ಮೂರ್ನಾಡು-ಕೊಂಡಂಗೇರಿ-ಹಾಲುಗುಂದ ಮಾರ್ಗವಾಗಿ ವೀರಾಜಪೇಟೆಗೆ ಸಂಚರಿಸಬಹುದಾಗಿದೆ.
ಸಿದ್ದಾಪುರ-ಕರಡಿಗೋಡು ರಸ್ತೆಯೂ ಸಂಚಾರಕ್ಕೆ ಮುಕ್ತವಾಗಿಲ್ಲ. ಸಿದ್ದಾಪುರದಿಂದ ಕರಡಿಗೋಡುವಿಗೆ ತೆರಳುವವರು ಮೈಸೂರು ರಸ್ತೆ, ಆರೆಂಜ್ ಕೌಂಟಿ ಮಾರ್ಗವಾಗಿ ಕರಡಿಗೋಡುವಿಗೆ ತೆರಳಬಹುದಾಗಿದೆ.

ಮೂರ್ನಾಡುವಿನಿಂದ ನಾಪೋಕ್ಲುವಿಗೆ ತೆರಳುವವರು ಹೊದ್ದೂರು, ಬಲಮುರಿ, ಪಾರಾಣೆ ಮೂಲಕ ನಾಪೋಕ್ಲುವಿಗೆ ಸಂಚರಿಸಬಹುದಾಗಿದ್ದು, ಸಿದ್ದಾಪರ-ಕೊಂಡಂಗೇರಿ ಮಾರ್ಗವಾಗಿ ತೆರಳಬೇಕಾದವರು ಒಂಟಿಯಂಗಡಿ, ದೇವಣಗೇರಿ ಹಾಲುಗುಂದ ಮಾರ್ಗವಾಗಿ ಕೊಂಡಂಗೇರಿಗೆ ಸಂಚರಿಸಬಹುದಾಗಿದೆ. ಗಾಳಿಬೀಡು-ಪಾಟಿ-ಕಾಲೂರು ಮಾರ್ಗವೂ ಬಂದ್  ಆಗಿರುವುದರಿಂದ ಕಾಲೂರಿಗೆ ತೆರಳುವವರು ಕೆ.ನಿಡುಗಣೆ, ಹೆಬ್ಬೆಟ್ಟಗೇರಿ-ದೇವಸ್ತೂರು ಮಾರ್ಗವಾಗಿ ಕಾಲೂರಿಗೆ ಸಂಚರಿಸಬಹುದಾಗಿದೆ.

ಮಡಿಕೇರಿ-ವೀರಾಜಪೇಟೆ-ಮಾಕುಟ್ಟಕ್ಕೆ ತೆರಳುವವರು ಮಡಿಕೇರಿ-ಹಾಕತ್ತೂರು- ಮೂರ್ನಾಡು- ಕೊಂಡಂಗೇರಿ-ಹಾಲುಗುಂದ-ವೀರಾಜಪೇಟೆ-ಗೋಣಿಕೊಪ್ಪ, ಪೊನ್ನಂಪೇಟೆ ಕುಟ್ಟ ಮಾರ್ಗವಾಗಿ ಕೇರಳದ ಮೂಲಕ ಮಾಕುಟ್ಟ ತಲುಪಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಶವ ಪತ್ತೆ
ವಿರಾಜಪೇಟೆ ತಾಲೂಕಿನ ತೋರಾ ಗ್ರಾಮದಲ್ಲಿ ಆ.9 ರಂದು ಮಣಿಪಾರೆ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಪ್ರಾಣ ಕಳೆದುಕೊಂಡ ಎಂಟು ಮಂದಿಯಲ್ಲಿ ಓರ್ವ ಮಹಿಳೆಯ ಮೃತ ದೇಹ ಪತ್ತೆಯಾಗಿದೆ. ಪ್ರಭು ಎಂಬುವವರ ಪತ್ನಿ ಅನುಸೂಯ(45) ಅವರ ಮೃತದೇಹವನ್ನು ಮಣ್ಣಿನಡಿಯಿಂದ ಹೊರ ತೆಗೆಯಲಾಗಿದೆ.   

ಸೋಮವಾರ ಬೆಳಗಿನಿಂದಲೇ 4 ಹಿಟಾಚಿ ಯಂತ್ರಗಳನ್ನು ಬಳಸಿಕೊಂಡು ನಾಪತ್ತೆಯಾದವರಿಗಾಗಿ ಸ್ಥಳದಲ್ಲಿ ಹುಡುಕಾಟ ನಡೆಸಲಾಯಿತು. ಮಧ್ಯಾಹ್ನದ ವೇಳೆಗೆ ಅನುಸೂಯ ಅವರ ಮೃತದೇಹ ಪತ್ತೆಯಾಗಿದ್ದು, ತಕ್ಷಣವೇ ವಿರಾಜಪೇಟೆ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಿ, ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಇನ್ನು ನಾಪತ್ತೆಯಾಗಿರುವ ಇತರ 7 ಮಂದಿಯ ಪತ್ತೆಗಾಗಿ ಎನ್‍ಡಿಆರ್‍ಎಫ್, ಪೊಲೀಸ್ ಹಾಗೂ ಸೇನಾ ಸಿಬ್ಬಂದಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ. ಈ ಪೈಕಿ ಪ್ರಭು ಅವರ ತಾಯಿ ದೇವಕ್ಕಿ(65), ಮಕ್ಕಳಾದ ಅಮೃತಾ(13) ಮತ್ತು ಆದಿತ್ಯ(10) ಹಾಗೂ ಹರೀಶ್ ಎಂಬವರ ಕುಟುಂಬ ಸದಸ್ಯರಾದ ಶಂಕರ, ಅಪ್ಪು(55) ಮತ್ತು ಲೀಲಾ(45) ಹಾಗೂ ಗೃಹಣಿ ವೀಣಾ ಎಂಬವರು ಪತ್ತೆಕಾರ್ಯ ನಡೆಯುತ್ತಿದೆ. 

ಮನೆಯೊಳಗೆ ಶವ
ಮಡಿಕೇರಿ ಸಮೀಪ ಕಟ್ಟೆಮಾಡು ಗ್ರಾಮದ ಪರಂಬು ಪೈಸಾರಿಯಲ್ಲಿ ಮನೆಯೊಂದರಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಪ್ರವಾಹದ ಸಂದರ್ಭ ಈ ಮನೆ ಮುಳುಗಡೆಯಾಗಿದ್ದು, ಇದೀಗ ನೀರಿನ ಹರಿವು ಕಡಿಮೆಯಾಗಿರುವುದರಿಂದ ಮನೆಯೊಳಗೆ ಮೃತ ದೇಹವಿರುವುದು ಕಂಡು ಬಂದಿದೆ. ಮೃತರನ್ನು ಕುಜ್ಞಣ್ಣ ಎಂದು ಗುರುತಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X