Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜ್ಯದಲ್ಲಿ ಸಂಭವಿಸಿದ ಜಲಪ್ರಳಯಕ್ಕೆ 48...

ರಾಜ್ಯದಲ್ಲಿ ಸಂಭವಿಸಿದ ಜಲಪ್ರಳಯಕ್ಕೆ 48 ಬಲಿ, 4 ಲಕ್ಷಕ್ಕೂ ಅಧಿಕ ಹೆಕ್ಟೇರ್ ಕೃಷಿ ಭೂಮಿ ನಾಶ

ವಾರ್ತಾಭಾರತಿವಾರ್ತಾಭಾರತಿ13 Aug 2019 6:29 PM IST
share
ರಾಜ್ಯದಲ್ಲಿ ಸಂಭವಿಸಿದ ಜಲಪ್ರಳಯಕ್ಕೆ 48 ಬಲಿ, 4 ಲಕ್ಷಕ್ಕೂ ಅಧಿಕ ಹೆಕ್ಟೇರ್ ಕೃಷಿ ಭೂಮಿ ನಾಶ

ಬೆಂಗಳೂರು, ಆ.13: ರಾಜ್ಯದ ಉತ್ತರ ಕರ್ನಾಟಕ, ಕರಾವಳಿ ತೀರಾಪ್ರದೇಶ, ಮಲೆನಾಡು ಹಾಗೂ ಮಧ್ಯಕರ್ನಾಟಕ ಸೇರಿದಂತೆ 16 ಜಿಲ್ಲೆಗಳಲ್ಲಿ ಸಂಭವಿಸಿದ ಜಲಪ್ರಳಯಕ್ಕೆ ಇಲ್ಲಿಯವರೆಗೂ 48 ಮಂದಿ ಸಾವನ್ನಪ್ಪಿ, 4 ಲಕ್ಷಕ್ಕೂ ಅಧಿಕ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬೆಳೆ ನಷ್ಟವಾಗಿದೆ.

ಬೆಳಗಾವಿಯಲ್ಲಿ 13 ಮಂದಿ, ಬಾಗಲಕೋಟೆ 3, ಉತ್ತರಕನ್ನಡ 4, ದಕ್ಷಿಣ ಕನ್ನಡ 2, ಶಿವಮೊಗ್ಗ 3, ಉಡುಪಿ 2, ಕೊಡಗು 8, ಚಿಕ್ಕಮಗಳೂರು 7, ಮೈಸೂರು 2 ಹಾಗೂ ಧಾರವಾಡದಲ್ಲಿ ಮೂವರು ಸೇರಿದಂತೆ 48 ಮಂದಿ ಪ್ರವಾಹಕ್ಕೆ ಸಿಲುಕಿ ಸಾವನ್ನಪ್ಪಿದ್ದು, 16 ಮಂದಿ ಕಣ್ಮರೆಯಾಗಿದ್ದಾರೆ ಎಂದು ರಾಜ್ಯ ಸರಕಾರ ಪ್ರಕಟನೆಯಲ್ಲಿ ತಿಳಿಸಿದೆ.

ಪ್ರವಾಹದಿಂದಾಗಿ ಈ ಬಾರಿ 837 ಪ್ರಾಣಿಗಳು ಸಾವನ್ನಪ್ಪಿವೆ. ಬೆಳಗಾವಿಯಲ್ಲಿ 273, ಬಾಗಲಕೋಟೆ 66, ಧಾರವಾಡದಲ್ಲಿ 187, ಹಾವೇರಿಯಲ್ಲಿ 109, ಉತ್ತರಕನ್ನಡದಲ್ಲಿ 77, ಶಿವಮೊಗ್ಗದಲ್ಲಿ 87, ಗದಗ 25, ಉಡುಪಿ 5 ಸೇರಿದಂತೆ 837 ಜಾನುವಾರುಗಳು ಸಾವನ್ನಪ್ಪಿವೆ.

ರಾಜ್ಯದ ಒಟ್ಟು 86 ತಾಲೂಕುಗಳನ್ನು ಪ್ರವಾಹಪೀಡಿತ ತಾಲೂಕುಗಳೆಂದು ಸರಕಾರ ಘೋಷಣೆ ಮಾಡಿದೆ. ಬೆಳಗಾವಿಯ 10, ಬಾಗಲಕೋಟೆ 6, ಬಿಜಾಪುರ 4, ರಾಯಚೂರು 3, ಯಾದಗಿರಿ 3, ಉತ್ತರ ಕನ್ನಡ 11, ದಕ್ಷಿಣ ಕನ್ನಡ 5, ಶಿವಮೊಗ್ಗ 7, ಉಡುಪಿ 3, ಕೊಡಗು 3, ಚಿಕ್ಕಮಗಳೂರು 4, ಹಾಸನ 8, ಗದಗ 3, ಮೈಸೂರು 3, ಧಾರವಾಡ 5, ಹಾವೇರಿ 6 ಹಾಗೂ ಕಲಬುರ್ಗಿಯ 2 ತಾಲೂಕುಗಳನ್ನು ಪ್ರವಾಹ ಪೀಡಿತ ಎಂದು ಘೋಷಿಸಲಾಗಿದೆ.

ಪ್ರವಾಹದಿಂದಾಗಿ 2,217 ಗ್ರಾಮಗಳು ಹಾನಿಗೊಳಗಾಗಿವೆ. ಇದರಲ್ಲಿ ಬೆಳಗಾವಿ 371, ಬಾಗಲಕೋಟೆ 193, ವಿಜಾಪುರ 73, ರಾಯಚೂರು 47, ಯಾದಗಿರಿ 80, ಉತ್ತರ ಕನ್ನಡ 216, ದ.ಕನ್ನಡ 50, ಶಿವಮೊಗ್ಗ 556, ಹಾಸನ 132, ಗದಗ 175, ಮೈಸೂರು 51, ಧಾರವಾಡ 21, ಹಾವೇರಿ 138, ಕಲಬುರ್ಗಿಯಲ್ಲಿ 50 ಗ್ರಾಮಗಳು ಅತಿವೃಷ್ಟಿಯಿಂದ ಹಾನಿಗೊಳಗಾಗಿವೆ.

17 ಜಿಲ್ಲೆಗಳಲ್ಲಿ ಈವರೆಗೂ 6,77,382 ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಬೆಳಗಾವಿ 4,08,945, ಬಾಗಲಕೋಟೆ 1,25,030 ವಿಜಯಪುರ 8650, ರಾಯಚೂರು 5,800, ಉ.ಕನ್ನಡ 3088, ದ.ಕನ್ನಡ 3516, ಶಿವಮೊಗ್ಗ 6200, ಕೊಡಗು 4600, ಚಿಕ್ಕಮಗಳೂರು 1900, ಹಾಸನ 3200, ಗದಗ 51,171, ಧಾರವಾಡ 35,680, ಹಾವೇರಿ 14,350 ಸೇರಿದಂತೆ ಸಂತ್ರಸ್ತರನ್ನು ಜಿಲ್ಲಾಡಳಿತ ಸುರಕ್ಷಿತ ಸ್ಥಳಗಳಿಗೆ ತೆರವು ಮಾಡಿದೆ.

17 ಜಿಲ್ಲೆಗಳಲ್ಲಿ ವಿವಿಧ ಕಡೆ 1,224 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ಬೆಳಗಾವಿ 460, ಬಾಗಲಕೋಟೆ 236, ವಿಜಯಪುರ 7, ರಾಯಚೂರು 22, ಯಾದಗಿರಿ 15, ಉತ್ತರ ಕನ್ನಡ 74, ದ.ಕನ್ನಡ 12, ಶಿವಮೊಗ್ಗ 24, ಕೊಡಗು 44, ಚಿಕ್ಕಮಗಳೂರು 25, ಹಾಸನ 11, ಗದಗ 44, ಮೈಸೂರು 32, ಧಾರವಾಡ 81, ಹಾವೇರಿ 137 ಸೇರಿದಂತೆ ಮತ್ತಿತರ ಕಡೆ ಪರಿಹಾರ ಕೇಂದ್ರಗಳನ್ನು ಆರಂಭಿಸಲಾಗಿದೆ.

51,015 ಪರಿಹಾರ ಕೇಂದ್ರದಲ್ಲಿ ಸಂತ್ರಸ್ತರಿಗೆ ನೆರವು ನೀಡಲಾಗುತ್ತಿದೆ. 50,595 ಪ್ರಾಣಿಗಳನ್ನು ರಕ್ಷಣೆ ಮಾಡಲಾಗಿದ್ದು, 32,305 ಪ್ರಾಣಿಗಳಿಗೆ ಪರಿಹಾರ ಕೇಂದ್ರದಲ್ಲಿ ಅಗತ್ಯ ನೆರವು ನೀಡಲಾಗುತ್ತದೆ. 4,21,514 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಇದರಲ್ಲಿ ಬೆಳಗಾವಿ 1,57,301 ಹೆಕ್ಟೇರ್, ಬಾಗಲಕೋಟೆ 36,700, ವಿಜಯಪುರ 16,642, ರಾಯಚೂರು 2821, ಯಾದಗಿರಿ 2360, ಉ.ಕನ್ನಡ 12,533, ಶಿವಮೊಗ್ಗ 18,319, ಧಾರವಾಡ 1,07,077, ಹಾವೇರಿ 59,773 ಹೆಕ್ಟೇರ್, ಕಲ್ಬುರ್ಗಿ 5,830 ಸೇರಿದಂತೆ ಒಟ್ಟು 4,30,953 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ.

ಪ್ರವಾಹದಿಂದಾಗಿ ಈವರೆಗೂ 48,915 ಮನೆಗಳು ಹಾನಿಗೊಳಗಾಗಿವೆ. ಬೆಳಗಾವಿ 1,3789, ಬಾಗಲಕೋಟೆ 48, ಉ.ಕನ್ನಡ 2,755, ದ.ಕನ್ನಡ 509, ಶಿವಮೊಗ್ಗ 1,105, ಗದಗ 5,927, ಧಾರವಾಡ 7931, ಹಾವೇರಿ 6566 ಮನೆಗಳು ಹಾನಿಗೀಡಾಗಿವೆ ಎಂದು ಎಂದು ಮುಖ್ಯಮಂತ್ರಿಗಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X