Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಾಮಳೆಗೆ ಕೊಡಗಿನಲ್ಲಿ 9 ಮಂದಿ ಮೃತ್ಯು:...

ಮಹಾಮಳೆಗೆ ಕೊಡಗಿನಲ್ಲಿ 9 ಮಂದಿ ಮೃತ್ಯು: 90 ಮನೆಗಳು ಸಂಪೂರ್ಣ ಹಾನಿ

ವಾರ್ತಾಭಾರತಿವಾರ್ತಾಭಾರತಿ13 Aug 2019 11:17 PM IST
share
ಮಹಾಮಳೆಗೆ ಕೊಡಗಿನಲ್ಲಿ 9 ಮಂದಿ ಮೃತ್ಯು: 90 ಮನೆಗಳು ಸಂಪೂರ್ಣ ಹಾನಿ

ಮಡಿಕೇರಿ,ಆ.13:ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಸುರಿದ ಮಹಾಮಳೆಗೆ ಇದುವರೆಗೆ 9 ಮಂದಿ ಸಾವಿಗೀಡಾಗಿದ್ದು, 147 ಮನೆಗಳು ಭಾಗಶಃ ಹಾಗೂ 90 ಮನೆಗಳು ಸಂಪೂರ್ಣವಾಗಿ ಹಾನಿಯಾಗಿರುವುದಾಗಿ ಜಿಲ್ಲಾಧಿಕಾರಿಗಳು ಅಧಿಕೃತವಾಗಿ ಘೋಷಿಸಿದ್ದಾರೆ.

ಆದರೆ ಜಿಲ್ಲೆಯ ನದಿ ತೊರೆಗಳಲ್ಲಿ ಈಗಷ್ಟೇ ಪ್ರವಾಹ ಇಳಿಮುಖವಾಗುತ್ತಿರುವುದರಿಂದ ಮನೆ ಹಾನಿಯ ಪ್ರಮಾಣ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದೆ. ಅಲ್ಲದೆ ತೋರ ಗ್ರಾಮದಲ್ಲಿ ಭೂಕುಸಿತದ ಸಂದರ್ಭ ನಾಪತ್ತೆಯಾದ 7 ಮಂದಿಯ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದ್ದು, ಸಾವಿನ ಪ್ರಮಾಣವೂ ಏರಿಕೆಯಾಗಲಿದೆ.

ಕೊಡಗು ಜಿಲ್ಲೆಯಲ್ಲಿ ಒಟ್ಟು 45 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 2270 ಕುಟುಂಬಗಳ 7873  ಜನರು ಆಶ್ರಯ ಪಡೆದಿದ್ದಾರೆ. ಒಟ್ಟು 79 ಪ್ರದೇಶಗಳು ಪ್ರವಾಹದಿಂದ ಪೀಡಿತವಾಗಿವೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 1507 ಜನರು ಮತ್ತು 19 ಜಾನುವಾರುಗಳನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

ವೀರಾಜಪೇಟೆ ತಾಲೂಕಿನಲ್ಲಿ ಭೂಕುಸಿತವಾದ ತೋರ  ಪ್ರದೇಶದಲ್ಲಿ ಕಾಣೆಯಾದ ಒಟ್ಟು 8 ಮಂದಿ ಪೈಕಿ ಸೋಮವಾರ  ಒಬ್ಬರ ಮೃತದೇಹ ಪತ್ತೆಯಾಗಿದ್ದು,  ಉಳಿದ 7 ಮೃತದೇಹಗಳಿಗಾಗಿ ಶೋಧ ಕಾರ್ಯವನ್ನು ಮುಂದುವರೆಸಲಾಗಿದೆ. ಸೋಮವಾರದವರೆಗೆ ಎರಡು ಹಿಟಾಚಿಗಳನ್ನು ಬಳಸಲಾಗಿದ್ದರೆ, ಮಂಗಳವಾರದಿಂದ ಆರು ಹಿಟಾಚಿ ಯಂತ್ರಗಳನ್ನು ಬಳಸುವ ಮೂಲಕ ಶೋಧ ಕಾರ್ಯವನ್ನು ಚುರುಕುಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ  ಎನ್.ಡಿ.ಆರ್.ಎಫ್.ನ 34, ಭಾರತೀಯ ಸೇನೆಯ 17, ಪೊಲೀಸ್ ಇಲಾಖೆಯ 30 ಮತ್ತು ಗರುಡ ಫೋರ್ಸ್‍ನ 17 ಸೇರಿದಂತೆ ಒಟ್ಟು 98 ಅಧಿಕಾರಿ ಮತ್ತು ಬ್ಬಂದಿಗಳು ತೊಡಗಿಸಿಕೊಂಡಿದ್ದಾರೆ, ಜಿಲ್ಲೆಯ ಪ್ರದೇಶಗಳಲ್ಲೂ ಸಾರ್ವಜನಿಕರು ಹಾಗೂ ಸಾಕು ಪ್ರಾಣಿಗಳ ರಕ್ಷಣೆಗಾಗಿ ಎನ್.ಡಿ.ಆರ್.ಎಫ್., ಭಾರತೀಯ ಸೇನಾ ತುಕಡಿ, ಪೊಲೀಸ್ ಇಲಾಖೆಯ ಗರುಡ ಫೋರ್ಸ್, ಗೃಹ ರಕ್ಷಕ ದಳ, ಅಗ್ನಿಶಾಮಕ ದಳಗಳು ಕಾರ್ಯಾಚರಣೆ ನಡೆಸುವುದರೊಂದಿಗೆ ಹೆಚ್ಚಿನ ಪ್ರಾಣ ಹಾನಿಯಾಗುವುದನ್ನು ತಪ್ಪಿಸಿವೆ ಎಂದು ಅವರು ಹೇಳಿದ್ದಾರೆ.

ಸಾಮಾಗ್ರಿ ದಾಸ್ತಾನು ಸಾಕಷ್ಟಿದೆ: ಕೊಡಗು ಜಿಲ್ಲೆಯಲ್ಲಿ ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಿಂದ ಆದ ಅನಾಹುತಗಳನ್ನು ಗಮನದಲ್ಲಿಟ್ಟುಕೊಂಡು ಈ ವರ್ಷ ಜಿಲ್ಲಾಡಳಿತವು ಪ್ರಕೃತಿ ವಿಕೋಪವನ್ನು ಎದುರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಾಗ ಪರಿಹಾರ ಕೇಂದ್ರಗಳ ನಿರ್ವಹಣೆಗೆ ಬೇಕಾಗುವ ಎಲ್ಲಾ ಅಗತ್ಯ ದಿನಬಳಕೆಯ ವಸ್ತುಗಳನ್ನೂ ಸಹ ಖರೀದಿಸಿ ದಾಸ್ತಾನಿಟ್ಟುಕೊಂಡಿದೆ. ಅಲ್ಲದೆ, ನೆರೆ ಜಿಲ್ಲೆಗಳಾದ ಉಡುಪಿ ಮತ್ತು ಮೈಸೂರು ಜಿಲ್ಲೆಗಳಿಂದಲೂ ದಿನಬಳಕೆಯ ವಸ್ತುಗಳನ್ನು ಖರೀದಿಸಿ ಈ ಜಿಲ್ಲೆಗೆ ಕಳುಹಿಸಿದ್ದು, ಪ್ರಸ್ತುತ ಪರಿಹಾರ ಕೇಂದ್ರ ನಡೆಸಲು ಬೇಕಾಗುವಷ್ಟು ದಿನಬಳಕೆಯ ಸಾಮಾಗ್ರಿಗಳು ಜಿಲ್ಲಾಡಳಿತದ ಬಳಿ ದಾಸ್ತಾನಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ವರ್ಷ ಕೊಡಗು ಜಿಲ್ಲೆಯಷ್ಟೇ ಅಲ್ಲದೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಜನರು ಸಂಕಷ್ಟದಲ್ಲಿರುವುದರಿಂದ ಹಾಗೂ ಈಗಾಗಲೇ ಜಿಲ್ಲಾಡಳಿತದ ಬಳಿ  ಜಿಲ್ಲೆಯ ಪರಿಹಾರ ಕೇಂದ್ರಗಳನ್ನು ಸುಗಮವಾಗಿ ನಡೆಸುವಷ್ಟು ದಿನಬಳಕೆಯ ಸಾಮಾಗ್ರಿಗಳು ದಾಸ್ತಾನಿರುವುದರಿಂದ ಜಿಲ್ಲಾಡಳಿತವು ಜಿಲ್ಲೆಯಲ್ಲಿ ತೆರೆಯಲಾದ ಸಂಗ್ರಹಣಾ ಕೇಂದ್ರಗಳನ್ನು ಮುಚ್ಚಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯ ದಾನಿಗಳು, ಸಂಘ ಸಂಸ್ಥೆಗಳು ಜಿಲ್ಲೆಯ ಸಂತ್ರಸ್ತರಿಗೆ ನೆರವು ನೀಡಲು ಬಯಸಿದಲ್ಲಿ, ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರರುಗಳನ್ನು ಸಂಪರ್ಕಿಸಿ ಸಾಮಾಗ್ರಿಗಳನ್ನು ಹಸ್ತಾಂತರಿಸಬಹುದಾಗಿದೆ. ದಾನಿಗಳು ಅಥವಾ ಸಂಘ ಸಂಸ್ಥೆಗಳು ಸಾಮಾಗ್ರಿಗಳನ್ನು ನೇರವಾಗಿ ಸಂತ್ರಸ್ತರಿಗೆ ವಿತರಿಸುವಾಗ ಕೆಲವು ಪರಿಹಾರ ಕೇಂದ್ರಗಳಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗಿರುವ ಹಿನ್ನೆಲೆಯಲ್ಲಿ  ಯಾವುದೇ ಕಾರಣಕ್ಕೂ ನೇರವಾಗಿ ಸಂತ್ರಸ್ತರಿಗೆ ವಿತರಿಸಲು ಅವಕಾಶ ಇರುವುದಿಲ್ಲ. ಆದರೆ ದಾನಿಗಳು ನೀಡಿದ ವಸ್ತುಗಳನ್ನು ಅವರ ಸಮ್ಮುಖದಲ್ಲಿಯೇ ಸಂತ್ರಸ್ತರಿಗೆ ವಿತರಿಸಲು ವ್ಯವಸ್ಥೆ ಮಾಡಲಾಗುವುದು ಎಂದಿರುವ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಈ ನಿಟ್ಟಿನಲ್ಲಿ ಎಲ್ಲರೂ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X