Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 10 ಕೋಟಿ ರೂ.ಗೂ ಅಧಿಕ ದೇಣಿಗೆ ನೀಡುವ...

10 ಕೋಟಿ ರೂ.ಗೂ ಅಧಿಕ ದೇಣಿಗೆ ನೀಡುವ ಸಂಸ್ಥೆಯ ಹೆಸರು ಗ್ರಾಮಕ್ಕೆ ನಾಮಕರಣ: ಯಡಿಯೂರಪ್ಪ

ಪ್ರವಾಹ ಪೀಡಿತರ ನೆರವಿಗೆ ಧಾವಿಸಲು ಮುಖ್ಯಮಂತ್ರಿ ಮನವಿ

ವಾರ್ತಾಭಾರತಿವಾರ್ತಾಭಾರತಿ14 Aug 2019 7:19 PM IST
share
10 ಕೋಟಿ ರೂ.ಗೂ ಅಧಿಕ ದೇಣಿಗೆ ನೀಡುವ ಸಂಸ್ಥೆಯ ಹೆಸರು ಗ್ರಾಮಕ್ಕೆ ನಾಮಕರಣ: ಯಡಿಯೂರಪ್ಪ

ಬೆಂಗಳೂರು, ಆ. 14: ‘ನೆರೆ ಪೀಡಿತ ಗ್ರಾಮಗಳ ಪುನಶ್ಚೇತನಕ್ಕೆ 10ಕೋಟಿ ರೂ.ಗೂ ಹೆಚ್ಚು ದೇಣಿಗೆ ನೀಡುವ ಸಂಸ್ಥೆಗಳ ಹೆಸರನ್ನು ಪುನಶ್ಚೇತನಗೊಳ್ಳುವ ಗ್ರಾಮಗಳಿಗೆ ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕೈಗಾರಿಕೋದ್ಯಮಿಗಳ ಜತೆ ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಜನತೆಗೆ ನೆರವು ನೀಡಲು ಉದ್ಯಮಿಗಳಿಗೆ ಇದೇ ಸಂದರ್ಭದಲ್ಲಿ ಮನವಿ ಮಾಡಿದರು. ಕೆಲ ದಿನಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿ ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಇವರ ನೆರವಿಗೆ ಎಲ್ಲ ಕೈಗಾರಿಕೋದ್ಯಮಿಗಳು, ಸಂಘ-ಸಂಸ್ಥೆಗಳು ನಿಂತು ಉದಾತ್ತವಾಗಿ ದೇಣಿಗೆ ನೀಡುವಂತೆ ಇದೇ ವೇಳೆ ಕೋರಿದರು.

ರಾಜ್ಯ ಸರಕಾರದ ಕರೆಗೆ ಮನ್ನಣೆ ನೀಡಿ 60ಕ್ಕೂ ಹೆಚ್ಚು ಕಂಪೆನಿ ಮುಖ್ಯಸ್ಥರು ಆಗಮಿಸಿ ನೆರವು ನೀಡುವ ಭರವಸೆ ನೀಡಿದರು. ಸಭೆಯಲ್ಲಿ ಎಲ್ಲ ಉದ್ದಿಮೆದಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗಿದೆ. 23 ಜಿಲ್ಲೆಯ 103 ತಾಲೂಕು ನೆರೆ ಪೀಡಿತ ಎಂದು ಘೋಷಿಸಲಾಗಿದೆ ಎಂದರು.

ಮಹಾರಾಷ್ಟ್ರ, ಕೇರಳ, ಕರ್ನಾಟಕದಲ್ಲಿ ಮಳೆಯಿಂದ ಭೂ ಕುಸಿತ ಸಂಭವಿಸಿದೆ. ಹಳ್ಳಿ, ಪಟ್ಟಣ ಜಲಾವೃತವಾಗಿದೆ. ಸೇತುವೆ ಮುಳುಗಿ, ರಸ್ತೆ ಹಾಳಾಗಿದೆ. ರಕ್ಷಣಾ ಕಾರ್ಯಗಳು ನಡೆಯುತ್ತಿವೆ. ಈ ವರೆಗೂ 6.97 ಲಕ್ಷ ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. 1160 ಪರಿಹಾರ ಕೇಂದ್ರ ತೆರೆಯಲಾಗಿದೆ. 56 ಸಾವಿರ ಮನೆ ವಾಸಕ್ಕೆ ಯೋಗ್ಯವಿಲ್ಲ ಎಂದು ಘೋಷಿಸಿದ್ದೇವೆ. ಅಧಿಕಾರಿಗಳು, ನಾನು ಪ್ರವಾಹ ಮಾಡಿ ಪ್ರವಾಹ ಪೀಡಿತ ಸ್ಥಳಗಳಿಗೆ ತೆರಳಿದ್ದೇವೆ. ರಕ್ಷಣೆ, ಪರಿಹಾರ ಕೆಲಸ ನಡೆಯುತ್ತಿದೆ. ಕಳೆದೆರಡು ದಿನದಿಂದ ಮಳೆ ಹತೋಟಿಗೆ ಬಂದಿದೆ. ಸಂಪೂರ್ಣ ಚಿತ್ರಣ, ನಷ್ಟ ತಿಳಿಯಲು ಇನ್ನು ಕೆಲವು ದಿನ ಬೇಕಾಗಲಿದೆ. 23 ಜಿಲ್ಲೆಗಳ ಪೈಕಿ 200ಗ್ರಾಮವನ್ನು ಸ್ಥಳಾಂತರಿಸುವ ಸ್ಥಿತಿ ಇದೆ. ಇಂಥ ಸ್ಥಿತಿಯಲ್ಲಿ ಉದ್ಯಮಿದಾರರು ಸಹಾಯ ಹಸ್ತ ಚಾಚಬೇಕು. ಉದಾರ ಮನಸ್ಸಿನಿಂದ ದೇಣಿಗೆ ನೀಡಿ ಎಂದರು.

10 ಕೋಟಿಗೂ ಹೆಚ್ಚು ನೆರವು ನೀಡಿದ ಗ್ರಾಮಕ್ಕೆ ನಿಮ್ಮ ಸಂಸ್ಥೆ ಹೆಸರನ್ನೆ ಇಡಲು ತೀರ್ಮಾನಿಸಿದ್ದೇವೆ. ಆ ಗ್ರಾಮವನ್ನು ಹಣ ನೀಡುವ ಸಂಸ್ಥೆ ದತ್ತು ಪಡೆದುಕೊಂಡಂತೆ ಬಿಂಬಿಸಲಾಗುವುದು ಎಂದು ಅವರು, ಆಹಾರ ಧಾನ್ಯ ಇತರೆ ಮೂಲಸೌಕರ್ಯ ಒದಗಿಸಿಕೊಡುವ ಬದಲು ಹಣವನ್ನು ಸಿಎಂ ಪರಿಹಾರ ನಿಧಿಗೆ ನೀಡಿದರೆ ಸಂತ್ರಸ್ತರಿಗೆ ಹೆಚ್ಚು ನೆರವಾಗಲಿದೆ ಎಂದರು.

ಕೈಗಾರಿಕೋದ್ಯಮಿಗಳೊಂದಿಗೆ ನಮ್ಮ ಸರಕಾರ ಇದೆ. ನೀವು ಏನು ಸಹಕಾರ ಬಯಸುತ್ತೀರ ಅದನ್ನು ನಾವು ಕೊಡಲು ಸಿದ್ಧ. ನಿಮ್ಮ ಸಂಸ್ಥೆ ಉದ್ಯಮ ನಡೆಸಲು ಬೇಕಾದ ಮೂಲಸೌಕರ್ಯಕ್ಕೆ ಯಾವುದೇ ರೀತಿಯ ಸಮಸ್ಯೆ ಮಾಡದಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ರಾಜ್ಯ ಸರಕಾರದಿಂದ ಯಾವುದೇ ಸಮಸ್ಯೆ, ತೊಡಕು ಆಗುವುದಿಲ್ಲ. ಒಂದು ವೇಳೆ ಅನಗತ್ಯ ಸಮಸ್ಯೆ ಆಗುತ್ತಿದ್ದರೆ ನನ್ನ ಗಮನಕ್ಕೆ ತನ್ನಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇದೇ ಸಂದರ್ಭದಲ್ಲಿ ಎಲ್ಲ ಸಂಸ್ಥೆಗಳ ಮುಖ್ಯಸ್ಥರಿಗೆ ಭರವಸೆ ನೀಡಿದರು.

ಕಂಪೆನಿಗಳ ಕೊಡುಗೆ: ಬ್ರಿಟಾನಿಯಾ ಕಂಪೆನಿಯು ಆಹಾರ ಪದಾರ್ಥಗಳ ಕೊಡುಗೆ ನೀಡಿದೆ. ಟಿವಿಎಸ್ ಮೋಟಾರು ಸಂಸ್ಥೆ 1ಕೋಟಿ ರೂ.ದೇಣಿಗೆಯನ್ನು ಸಿಎಂ ಪರಿಹಾರ ನಿಧಿಗೆ ನೀಡಲಿದೆ. ಜಿಎಸ್‌ಕೆ ಸಂಸ್ಥೆ ಹಾಗೂ ಯೂನಿವರ್ಸಲ್ ಬಿಲ್ಡರ್ಸ್ ಎಲ್ಲ ಜಿಲ್ಲೆಯಲ್ಲೂ ಪ್ರಾಥಮಿಕ ಆರೋಗ್ಯ ಕೇಂದ್ರ ಪುನಶ್ಚೇತನಕ್ಕೆ ಆದ್ಯತೆ ನೀಡಲಿದೆ.

ಶಾಹಿ ಎಕ್ಸ್‌ಪೋರ್ಟ್ಸ್ ಸೀರೆ-ಉಡುಪುಗಳ ನೆರವು, ಕಾರ್ಪೋರೇಷನ್ ಬ್ಯಾಂಕ್ ವಾರದಲ್ಲಿ ದೇಣಿಗೆ ನೀಡಲಿದೆ. ಟಯೋಟ ಸಂಸ್ಥೆ 2 ಕೋಟಿ ರೂ., ಲೋಗ್ಸೋಗ್ರೂಪ್ 25 ಲಕ್ಷ ರೂ., ಕ್ರೆಡಾಯ್ 3ಕೋಟಿ ರೂ., ಯುನೈಟೆಡ್ ಟೆಕ್ನಾಲಜಿ ಅಗತ್ಯ ಮೂಲ ಸೌಕರ್ಯ ಪೂರೈಕೆ, ಜೆಕೆ ಸಿಮೆಂಟ್‌ನಿಂದ ಆಹಾರ ಪದಾರ್ಥಗಳ ವಿತರಣೆ, ವೋಲ್ವೋ ಗ್ರೂಪ್‌ನ ನೌಕರರ 1 ದಿನದ ಸಂಬಳ ಸೇರಿ ಇತರೆ ಕಂಪೆನಿಗಳು ತಮ್ಮ ಕೈಲಾದಷ್ಟು ಸಹಾಯ ಮಾಡುವ ಭರವಸೆ ನೀಡಿವೆ ಎಂದು ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X