ನೆರೆ ಸಂತ್ರಸ್ತರಿಗೆ ಸರಕಾರಿ ನೌಕರರ ಒಂದು ದಿನದ ವೇತನ
ಬೆಂಗಳೂರು, ಆ. 14: ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಮತ್ತು ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಸರಕಾರಿ ನೌಕರರ ಒಂದು ದಿನದ ವೇತನವನ್ನು ನೀಡುವ ಪತ್ರವನ್ನು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸಲ್ಲಿಸಿದರು.
ಬುಧವಾರ ಇಲ್ಲಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಸಂಘದ ಅಧ್ಯಕ್ಷರ ನೇತೃತ್ವದ ನಿಯೋಗ, ರಾಜ್ಯದಲ್ಲಿನ ಪ್ರವಾಹ ಸಂತ್ರಸ್ತರ ನೆರವಿಗೆ ರಾಜ್ಯ ಸರಕಾರದ ಎಲ್ಲ ನೌಕರರು ನಿಲ್ಲಲಿದ್ದಾರೆ ಎಂದು ಷಡಕ್ಷರಿ ಇದೇ ವೇಳೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಸಂಸದ ಪಿ.ಸಿ. ಮೋಹನ್, ಮಾಜಿ ಡಿಸಿಎಂ ಆರ್.ಅಶೋಕ್, ಮಾಜಿ ಸಚಿವ ಅರವಿಂದ ಲಿಂಬಾವಳಿ, ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Next Story