Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಲ್ನಡಿಗೆಯಲ್ಲೇ ಬೀಟ್ ನಡೆಸಿದ ಮಂಗಳೂರು...

ಕಾಲ್ನಡಿಗೆಯಲ್ಲೇ ಬೀಟ್ ನಡೆಸಿದ ಮಂಗಳೂರು ಪೊಲೀಸ್ ಆಯುಕ್ತ

ವಾರ್ತಾಭಾರತಿವಾರ್ತಾಭಾರತಿ16 Aug 2019 10:02 PM IST
share
ಕಾಲ್ನಡಿಗೆಯಲ್ಲೇ ಬೀಟ್ ನಡೆಸಿದ ಮಂಗಳೂರು ಪೊಲೀಸ್ ಆಯುಕ್ತ

ಮಂಗಳೂರು, ಆ.16: ‘ಮಳೆ ಬಂದು ರಸ್ತೆ ಹಾಳಾಗಿದೆ.., ಅಲ್ಲಲ್ಲಿ ಕಸದ ರಾಶಿ ಇದ್ದು, ಅದರ ಸೂಕ್ತ ವಿಲೇವಾರಿ ಮಾಡಿಸಿ...’ ಇದು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಶುಕ್ರವಾರ ತಮ್ಮದೇ ಕಲ್ಪನೆಯ ‘ನನ್ನ ಬೀಟ್-ನನ್ನ ಹೆಮ್ಮೆ’ ಹೊಸ ಗಸ್ತು ವ್ಯವಸ್ಥೆಗೆ ಚಾಲನೆ ನೀಡಿದ ಬಳಿಕ ನಡೆಸಿದ ಬೀಟ್‌ನಲ್ಲಿ ಕೇಳಿಬಂದ ದೂರು-ದುಮ್ಮಾನಗಳು.

ಅಚ್ಚರಿಯ ಸಂಗತಿ ಎಂದರೆ, ಸುಮಾರು ಎರಡು ಗಂಟೆ ಕಾಲ ಬೀಟ್ ಸಿಬ್ಬಂದಿ ಜೊತೆಗೆ ಕಾಲ್ನಡಿಗೆಯಲ್ಲೇ ಬೀಟ್ ನಡೆಸಿದ ಆಯುಕ್ತರಿಗೆ ಪೊಲೀಸ್ ಇಲಾಖೆಗೆ ಸಂಬಂಧಿಸಿದ ಯಾವುದೇ ದೂರು ಕೇಳಿ ಬಂದಿಲ್ಲ ! ಶುಕ್ರವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ನಗರದ ಕಂಡತ್‌ಪಳ್ಳಿ ಭಾಗದಿಂದ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಬೀಟ್ ನಂ.8ರ ಗಸ್ತು ಸಿಬ್ಬಂದಿ ಈಶಪ್ರಸಾದ್ ಜೊತೆಗೆ ಕಮಿಷನರ್ ಡಾ.ಹರ್ಷ ಕೂಡ ಬೀಟ್ ನಡೆಸಿದರು.

ಬೀಟ್ ವೇಳೆ 8-10 ಮನೆಗಳು, ಅಂಗಡಿಮುಂಗಟ್ಟು, ಮಸೀದಿ, ಚರ್ಚ್ ಹಾಗೂ ಕೊನೆಯಲ್ಲಿ ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಬೀಟ್‌ನ ಉದ್ದಕ್ಕೂ ಬೀಟ್ ಸಿಬ್ಬಂದಿಗೆ ಜೊತೆಯಾಗಿ ಕಮಿಷನರ್ ಡಾ.ಹರ್ಷ ಸಂಚರಿಸಿದರು.

ಇವರಿಬ್ಬರು ಭೇಟಿ ನೀಡಿದ ಕಡೆಗಳಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಸಂಭವಿಸಿದ ರಸ್ತೆ ಹಾನಿ, ಕಸದ ರಾಶಿ, ತ್ಯಾಜ್ಯ ವಿಲೇವಾರಿ ಇತ್ಯಾದಿ ಪೊಲೀಸ್ ಇಲಾಖೆಗೆ ನೇರವಾಗಿ ಸಂಬಂಧಪಡದ ವಿಚಾರಗಳ ಬಗ್ಗೆ ನಾಗರಿಕರಿಂದ ದೂರು ವ್ಯಕ್ತಗೊಂಡಿತು.

ಈ ಬಗ್ಗೆ ಪಾಲಿಕೆ ಆಯುಕ್ತರು ಹಾಗೂ ಜಿಲ್ಲಾಧಿಕಾರಿಯ ಗಮನಕ್ಕೆ ತಂದು ಸಮಸ್ಯೆ ನಿವಾರಿಸುವ ಭರವಸೆ ದೊರೆಯಿತು. ಆದರೆ ಸಂಚಾರ ಹಾಗೂ ಕಾನೂನು, ಸುವ್ಯವಸ್ಥೆ ಅಥವಾ ಪೊಲೀಸ್ ಇಲಾಖೆಯ ಬಗ್ಗೆ ಯಾವುದೇ ನೇರ ದೂರು ವ್ಯಕ್ತಗೊಂಡಿಲ್ಲ ಎಂದು ಕಮಿಷನರ್ ಡಾ.ಪಿ.ಎಸ್.ಹರ್ಷ ತಿಳಿಸಿದ್ದಾರೆ.

ಆಯುಕ್ತರ ಬೀಟ್‌ಗೆ ಶ್ಲಾಘನೆ

‘ನನ್ನ ಬೀಟ್-ನನ್ನ ಹೆಮ್ಮೆ’ ಹೊಸ ಬೀಟ್ ವ್ಯವಸ್ಥೆಗೆ ಚಾಲನೆ ನೀಡಿದ ದಿನವೇ ಸ್ವತಃ ಪೊಲೀಸ್ ಆಯುಕ್ತರು ಪೊಲೀಸ್ ಸಿಬ್ಬಂದಿ ಜೊತೆಗೆ ಬೀಟ್ ನಡೆಸಿರುವುದು ನಾಗರಿಕ ವಲಯದಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

ಕಂಡತ್‌ಪಳ್ಳಿಯಿಂದ ಮಿಷನ್ ಕಂಪೌಂಡ್ ವರೆಗೆ ಬೀಟ್ ನಡೆಸಿದ ಆಯುಕ್ತ ಡಾ.ಪಿ.ಎಸ್.ಹರ್ಷ ಅವರು, ನಾಗರಿಕರಲ್ಲಿ ಪೊಲೀಸ್ ಇಲಾಖೆ ಬಗ್ಗೆ ಮನವರಿಕೆ ಮಾಡುವ ಹಾಗೂ ಧೈರ್ಯ ತುಂಬುವ ಕೆಲಸ ಮಾಡಿದರು.

ಯಾವುದೇ ಕುಂದು ಕೊರತೆ ಇದ್ದರೆ ನೇರವಾಗಿ ಬೀಟ್ ಪೊಲೀಸ್ ಸಿಬ್ಬಂದಿಯ ಮೊಬೈಲ್‌ಗೆ ಎಸ್‌ಎಂಎಸ್ ಅಥವಾ ವಾಟ್ಸ್‌ಆ್ಯಪ್ ಸಂದೇಶ ಕಳುಹಿಸಬಹುದು. ಇಲ್ಲವೇ ಕರೆ ಮಾಡಿ ತಿಳಿಸಬಹುದು. ನಿಮ್ಮ ಪ್ರದೇಶಕ್ಕೆ ಬೀಟ್ ಸಿಬ್ಬಂದಿಯೇ ಅಧಿಕಾರಿ ಇದ್ದಂತೆ ಎಂದು ಮನವರಿಕೆ ಮಾಡಿದರು.

ಈ ಸಂದರ್ಭ ಹಿರಿಯ ನಾಗರಿಕರ ಭದ್ರತೆಗೆ ಭರವಸೆ ನೀಡಿದ ಪೊಲೀಸ್ ಆಯುಕ್ತರು ರಾತ್ರಿ ಬೀಟ್‌ನಲ್ಲಿ ವಿಶೇಷ ನಿಗಾ ಇರಿಸಲಾಗುವುದು ಎಂದರು. ಈ ಹೊಸ ಬೀಟ್ ವ್ಯವಸ್ಥೆ ಪೊಲೀಸ್ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳು ಮತ್ತು ನಾಗರಿಕರ ಮಧ್ಯೆ ಕೊಂಡಿಯಾಗಿ ಕಾರ್ಯನಿರ್ವಹಿಸಲಿದೆ. ಇದು ಬಹಳ ಪರಿಣಾಮಕಾರಿಯಾಗಿದ್ದು, ನಾಗರಿಕರ ಜೊತೆಗೆ ಪೊಲೀಸ್ ಬಾಂಧವ್ಯಕ್ಕೆ ಹೊಸ ಭಾಷ್ಯ ಬರೆಯುವ ವಿಶ್ವಾಸ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X