Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿರುಕು ಬಿಟ್ಟ ವಿರಾಜಪೇಟೆ ಪ್ರದೇಶಕ್ಕೆ...

ಬಿರುಕು ಬಿಟ್ಟ ವಿರಾಜಪೇಟೆ ಪ್ರದೇಶಕ್ಕೆ ವಿಜ್ಞಾನಿಗಳ ತಂಡ ಭೇಟಿ: ಮಣ್ಣು ಪರೀಕ್ಷೆಗೆ ನಿರ್ಧಾರ

ಸ್ಥಳಾಂತರಗೊಂಡವರಿಗೆ ಪರಿಹಾರ ಕೇಂದ್ರವೇ ಆಶ್ರಯ

ವಾರ್ತಾಭಾರತಿವಾರ್ತಾಭಾರತಿ17 Aug 2019 11:30 PM IST
share
ಬಿರುಕು ಬಿಟ್ಟ ವಿರಾಜಪೇಟೆ ಪ್ರದೇಶಕ್ಕೆ ವಿಜ್ಞಾನಿಗಳ ತಂಡ ಭೇಟಿ: ಮಣ್ಣು ಪರೀಕ್ಷೆಗೆ ನಿರ್ಧಾರ

ಮಡಿಕೇರಿ, ಆ.17: ವೀರಾಜಪೇಟೆ ನಗರ ವ್ಯಾಪ್ತಿಯಲ್ಲಿ ಭಾರೀ ಮಳೆಯಿಂದಾಗಿ ಬಿರುಕು ಕಾಣಿಸಿಕೊಂಡಿರುವ ಮಲೆತಿರಿಕೆ ಬೆಟ್ಟ ಹಾಗೂ ನೆಹರು ನಗರದ ಬೆಟ್ಟ ಪ್ರದೇಶಗಳಿಗೆ ಭಾರತೀಯ ಸರ್ವೇಕ್ಷಣಾ ಇಲಾಖೆಯ ತಂತ್ರಜ್ಞಾನ ವಿಭಾಗದ ವಿಜ್ಞಾನಿಗಳ ತಂಡ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ಪ್ರದೇಶ ಸದ್ಯಕ್ಕೆ ವಾಸಕ್ಕೆ ಯೋಗ್ಯವಲ್ಲದ ಕಾರಣ ಸ್ಥಳಾಂತರಿಸಲ್ಪಟ್ಟಿರುವ ಕುಟುಂಬಗಳನ್ನು ತಾತ್ಕಾಲಿಕವಾಗಿ ಪರಿಹಾರ ಕೇಂದ್ರಗಳಲ್ಲೇ ಇರಿಸುವಂತೆ ಸಲಹೆ ಮಾಡಿದೆ.

ಬೆಟ್ಟ ಬಿರುಕು ಮೂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಕೇಂದ್ರೀಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಪತ್ರ ಬರೆದು ಬೆಟ್ಟ ಪ್ರದೇಶವನ್ನು ವೈಜ್ಞಾನಿಕವಾಗಿ ಪರಿಶೀಲಿಸುವಂತೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವಿಜ್ಞಾನಿಗಳಾದ ಸುನಂದನ್ ಬಸು ಮತ್ತು ಕಪಿಲ್ ಸಿಂಗ್ ಶನಿವಾರ ಬೆಟ್ಟ ಬಿರುಕು ಬಿಟ್ಟ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಬೆಟ್ಟದ ಮಣ್ಣನ್ನು ಸಂಗ್ರಹಿಸಿದ ವಿಜ್ಞಾನಿಗಳು, ಮೊದಲು ಮಣ್ಣಿನ ಪರೀಕ್ಷೆ ನಡೆಸಬೇಕಿದೆ. ಆ ಬಳಿಕವೇ ಬೆಟ್ಟದಲ್ಲಿ ಬಿರುಕು ಮೂಡಲು ಕಾರಣವಾದ ನಿಖರ ಮಾಹಿತಿ ಲಭ್ಯವಾಗುತ್ತದೆ ಎಂದು ಹೇಳಿದರು.

ಬೆಂಗಳೂರಿನ ಭಾರತೀಯ ಸರ್ವೆಕ್ಷಣಾ ಇಲಾಖಾ ಅಧಿಕಾರಿ ಸುನಂದನ್ ಬಸು ಅವರು ಮಾತನಾಡಿ, ಕಲ್ಲು ಮಣ್ಣುಗಳಿಂದ ಕೂಡಿದ ಬೆಟ್ಟ ಪ್ರದೇಶವಾಗಿರುವುದರಿಂದ ಬೆಟ್ಟದ  ಮಣ್ಣು ಕಲ್ಲುಗಳನ್ನು ಹಿಡಿದಿಟ್ಟುಕೊಳ್ಳುತ್ತದೆ. ಬೆಟ್ಟ ತುಂಬಾ ಇಳಿಜಾರು ಆಗಿದ್ದು, ಮಳೆಯ ನೀರು ಕಲ್ಲುಗಳ ಸಂದಿಯಲ್ಲಿ ಸೇರಿ ಮಣ್ಣನ್ನು ತೇವ ಮಾಡುವುದರಿಂದ ಮಣ್ಣು ತನ್ನ ಸಾಂದ್ರತೆಯನ್ನು ಕಳೆದುಕೊಂಡು ಮೊದಲು ಬಿರುಕು ಕಾಣಿಸಿಕೊಳ್ಳುತ್ತದೆ. ಕ್ರಮೇಣ ಕುಸಿಯುವ ಸಾಧ್ಯತೆ ಇರುವುದಾಗಿ ತಿಳಿಸಿದರಲ್ಲದೆ, ಬೆಟ್ಟದ ಕೆಳ ಭಾಗದ ಜನರನ್ನು ಸ್ಥಳಾಂತರ ಮಾಡುವಂತೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ವೀರಾಜಪೇಟೆ ಪಟ್ಟಣ ಪಂಚಾಯತ್ ವತಿಯಿಂದ ಬಿರುಕು ಬಿಟ್ಟ ಸ್ಥಳವನ್ನು ತಾತ್ಕಾಲಿಕವಾಗಿ ಸಿಮೆಂಟ್ ಹಾಕಿ ಮುಚ್ಚಲಾಗಿದೆ. ನೀರು ಹರಿಯಲು ಅನುಕೂಲವಾಗುವಂತೆ ಪರ್ಯಾಯ ದಾರಿ ಮಾಡಿ ಕೊಡಲಾಗಿದೆ. ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ನೀಡಿದ ಪ್ರಾಥಮಿಕ ವರದಿ ಆಧರಿಸಿ, ಬೆಟ್ಟ ತಪ್ಪಲಿನ 54 ಕುಟುಂಬಗಳ ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದೆ. ಸಂತ್ರಸ್ತರಿಗೆ ನಿರಾಶ್ರಿತರ ಶಿಬಿರಗಳಲ್ಲಿ ಆಶ್ರಯ ಕಲ್ಪಿಸಲಾಗಿದ್ದು, ಆ.31ರವರೆಗೆ ಅವರನ್ನು ಅಲ್ಲಿಯೇ ಉಳಿದುಕೊಳ್ಳಲು ತಾತ್ಕಾಲಿಕವಾಗಿ ವ್ಯವಸ್ಥೆ ಮಾಡಲಾಗುತ್ತದೆ. ಮಳೆ ಕಡಿಮೆಯಾದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಇದೇ ಸಂದರ್ಭ ಅಲ್ಲಿನ ವಾರ್ಡ್ ಸದಸ್ಯ ಡಿ.ಪಿ.ರಾಜೇಶ್ ಮಾತನಾಡಿ, ಆ.11 ರಂದು ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು ಮಳೆಯ ನೀರು ಬಿರುಕಿಗೆ ಹೋಗದಂತೆ ಸಿಮೆಂಟ್ ಸ್ಯಾಂಡ್ ಹಾಕಿ ಮುಚ್ಚಲಾಗಿದೆ. ಆದರೂ ಅಲ್ಲಲ್ಲಿ ಸಣ್ಣಪುಟ್ಟ ಬಿರುಕುಗಳು ಕಾಣಿಸುತ್ತಿವೆ. ಈ ಕಾರಣದಿಂದ ಇಲ್ಲಿರುವ ಕುಟುಂಬಗಳನ್ನು ಪರಿಹಾರ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದರು.

ಈ ವೇಳೆ ಪ್ರೊಬೆಷನರಿ ಐಎಎಸ್ ಅಧಿಕಾರಿ ಸುಮೇಶ್, ತಹಶೀಲ್ದಾರ್ ಕೆ.ಪುರಂದರ, ಪಿಡಬ್ಲ್ಯುಡಿ ಸಹಾಯಕ ಅಭಿಯಂತರ ಸುರೇಶ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎ.ಎಂ.ಶ್ರೀಧರ್ ಇತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X