Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೇಂದ್ರದಿಂದ ಚಿಕ್ಕಾಸು ಪರಿಹಾರ ಘೋಷಣೆ...

ಕೇಂದ್ರದಿಂದ ಚಿಕ್ಕಾಸು ಪರಿಹಾರ ಘೋಷಣೆ ಮಾಡಿಲ್ಲ: ರಮಾನಾಥ ರೈ

ವಾರ್ತಾಭಾರತಿವಾರ್ತಾಭಾರತಿ19 Aug 2019 7:40 PM IST
share
ಕೇಂದ್ರದಿಂದ ಚಿಕ್ಕಾಸು ಪರಿಹಾರ ಘೋಷಣೆ ಮಾಡಿಲ್ಲ: ರಮಾನಾಥ ರೈ

ಪುತ್ತೂರು: ಕಾಂಗ್ರೆಸ್ ಪಕ್ಷದ ವತಿಯಿಂದ ನೆರೆಯಿಂದ ಸಂತ್ರಸ್ತರಾದವರಿಗೆ ಸಹಕರಿಸುವ ನಿಟ್ಟಿನಲ್ಲಿ ಕೆಪಿಸಿಸಿ ವತಿಯಿಂದ ತಂಡ ರಚಿಸಿ ಪರಿಶೀಲನೆ ನಡೆಸಲಾಗುತ್ತಿದ್ದು, ನಮ್ಮ ತಂಡ ಉಡುಪಿ, ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ನೆರೆ ದುರಂತ ಅಧ್ಯಯನ ಮಾಡಿ ಕೆಪಿಸಿಸಿಗೆ ವರದಿ ಸಲ್ಲಿಸಲಿದೆ ಅದರ ಆಧಾರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದಲೂ ಸಂತ್ರಸ್ತರಿಗೆ ಪರಿಹಾರ ನೀಡುವ ಉದ್ದೇಶವಿದೆ ಎಂದು ತಂಡದ ಅಧ್ಯಕ್ಷರಾಗಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಹೇಳಿದರು. 

ಅವರು ಸೋಮವಾರ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. 

ಹಿಂದೆ ನೆರೆ ಪ್ರಧಾನಿ ಮನಮೋಹನ್ ಸಿಂಗ್ ತಕ್ಷಣ ರಾಜ್ಯಕ್ಕೆ ಬಂದು ವೈಮಾನಿಕ ಸಮೀಕ್ಷೆ ನಡೆಸಿದ್ದರಲ್ಲದೆ, ಆಗಲೇ 2 ಸಾವಿರ ಕೋಟಿ ರೂ. ಪರಿಹಾರ ಘೋಷಿಸಿದ್ದರು. ಈ ಬಾರಿ ಪ್ರಧಾನಿ ಮೋದಿ ಬರುವ ನಿರೀಕ್ಷೆಯಲ್ಲಿದ್ದೆವು. ಸಚಿವರಾದ ಅಮಿತ್ ಶಾ ಮತ್ತು ನಿರ್ಮಲಾ ಸೀತಾರಾಮನ್ ಬಂದು ಹೋದರೂ ಇನ್ನೂ ಚಿಕ್ಕಾಸು ಪರಿಹಾರ ಘೋಷಣೆ ಮಾಡಿಲ್ಲ. ಮೋದಿ ಪರಿಹಾರದ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ, ಜನರು ಸಂಕಷ್ಟಕ್ಕೆ ಸಿಲುಕಿದ್ದರೆ ಅವರು ಮಾತ್ರ ಭೂತಾನ್‍ಗೆ ಪ್ರವಾಸ ಹೊರಟಿದ್ದಾರೆ. ಇತ್ತ ಮುಖ್ಯಮಂತ್ರಿಗಳು ಕೇವಲ ಕಾಟಾಚಾರಕ್ಕೆ ರಾಜ್ಯ ಪ್ರವಾಸ ಮಾಡಿದ್ದಾರೆ ಎಂದು ದೂರಿದರು. 

ಮಾಜಿ ಸಚಿವ ಯು.ಟಿ. ಖಾದರ್ ಮಾತನಾಡಿ ರಾಜ್ಯದ 17 ಜಿಲ್ಲೆಗಳಲ್ಲಿ ಭೀಕರ ಪ್ರವಾಹದಿಂದ ಜನ ಕಂಗೆಟ್ಟಿದ್ದು, 50 ಸಾವಿರ ಕೋಟಿ ರೂಪಾಯಿಗಿಂತಲೂ ಅಧಿಕ ನಷ್ಟ ಸಂಭವಿಸಿದ ಹೊತ್ತಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎರಡು ಬಾರಿ ದೆಹಲಿಗೆ ಕಳೆದ ವರ್ಷ ಕೊಡಗು ಜಿಲ್ಲೆಯಲ್ಲಿ  ಪ್ರಕೃತಿ ವಿಕೋಪ ಸಂಭವಿಸಿದಾಗ ಮೈತ್ರಿ ಸರಕಾರ ಗರಿಷ್ಠ ಪರಿಹಾರ ನೀಡಿದೆ. ಮನೆ ಕಟ್ಟಲು 9.5 ಲಕ್ಷ ರೂ. ನೀಡಿದೆ. ತುರ್ತು ಪರಿಹಾರವಾಗಿ 50,000 ರೂ. ನೀಡಿದೆ. ಈ ಬಾರಿ ಮುಖ್ಯಮಂತ್ರಿಗಳು ತುರ್ತು ಪರಿಹಾರವಾಗಿ ಕೇವಲ 10 ಸಾವಿರ ರೂ. ಘೋಷಿಸಿದ್ದಾರೆ. ಅದರಲ್ಲೂ ಪೂರ್ತಿ ಹಣ ಇನ್ನೂ ಸಿಕ್ಕಿಲ್ಲ. ತುರ್ತು ಪರಿಹಾರ ಎಂದರೆ ಅದು 24 ಗಂಟೆಯೊಳಗೆ ಸಿಗಬೇಕಿತ್ತು. ಕೊಡಗು ಜಿಲ್ಲೆಯಲ್ಲಿ ನಮ್ಮ ಸರಕಾರ ಕೊಟ್ಟ ಪ್ಯಾಕೇಜ್ ಅದು ದೇಶದಲ್ಲೇ ಮಾದರಿ ಪ್ಯಾಕೇಜ್. ಆಗ ನಮ್ಮ ಸರಕಾರ ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ಆರು ಕೋಟಿ ರೂ.ಗಳನ್ನು ರಸ್ತೆ ದುರಸ್ತಿಗೆಂದೇ ನೀಡಿದ್ದೆವು ಎಂದರು. 

ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಪ್ರಕೃತಿ ವಿಕೋಪಕ್ಕೆ ತುತ್ತಾದ ಸಂತ್ರಸ್ತರಿಗೆ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಗರಿಷ್ಠ ಸಹಾಯವನ್ನು ಪಕ್ಷಭೇದ ಮರೆತು ಮಾಡಬೇಕು. ಈ ಕೆಲಸ ಮುಗಿದ ಮೇಲೆ ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕು. ನಾನು ಪುತ್ತೂರು ಕ್ಷೇತ್ರದ ಎಲ್ಲ ಗ್ರಾಮಗಳಿಗೂ ಪಕ್ಷ ಸಂಘಟನಾ ಕಾರ್ಯಕ್ಕೆ ಬರಲು ಸಿದ್ಧನಿದ್ದೇನೆ. ಪುತ್ತೂರಿನಲ್ಲಿ 2 ಬಾರಿ ಶಾಸಕನಾಗಿ 25 ವರ್ಷ ಕಳೆದರೂ ಈಗಲೂ ಇಲ್ಲಿನ ಜನ ನನ್ನ ಮೇಲಿಟ್ಟಿರುವ ಪ್ರೀತಿಗೆ ಆಭಾರಿಯಾಗಿದ್ದೇನೆ ಎಂದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ, ಮೋದಿ ಮುಂದೆ ಹೋಗಿ ಪರಿಹಾರ ಹಣ ಕೊಡಿ ಎಂದು ಕೇಳುವ ಧೈರ್ಯ ಯಡಿಯೂರಪ್ಪರಿಗಿಲ್ಲ. ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವೇನಾದರೂ ಇದ್ದಿದ್ದರೆ ಬಿಜೆಪಿಯವರು ಬೀದಿ ರಂಪ ಮಾಡುತ್ತಿದ್ದರು. ಮತ್ತೊಂದು ಕಡೆ ಕಾಂಗ್ರೆಸ್ ಸರಕಾರದ ಜನಪ್ರಿಯ ಕಾರ್ಯಕ್ರಮವಾದ ಅನ್ನಭಾಗ್ಯಕ್ಕೆ ಬಿಜೆಪಿ ಸರಕಾರ ಕತ್ತರಿ ಹಾಕಲು ಹೊರಟಿದೆ. ಹಾಗಾದಲ್ಲಿ ಪಕ್ಷದ ವತಿಯಿಂದ ಉಗ್ರ ಹೋರಾಟ ಮಾಡಲಾಗುವುದು ಎಂದರು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಮಾತನಾಡಿದರು. ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಸಭಾಧ್ಯಕ್ಷತೆ ವಹಿಸಿದ್ದರು. ಜಿ.ಪಂ ಸದಸ್ಯ ಎಂ.ಎಸ್. ಮಹಮ್ಮದ್, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಿಶಾಲಾಕ್ಷಿ ಬನ್ನೂರು  ಉಪಸ್ಥಿತರಿದ್ದರು. 
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಸ್ವಾಗತಿಸಿದರು. 

ಇದೇ ವೇಳೆ ನೆರೆ ಸಂತ್ರಸ್ತರ ಪರಿಹಾರಕ್ಕೆಂದು ಪಕ್ಷದ ಕಚೇರಿಯಲ್ಲಿ ತೆರೆಯಲಾದ ಸಹಾಯ ಹಸ್ತ ಕೇಂದ್ರವನ್ನು ಮುಖಂಡರು ಇದೇ ವೇಳೆ ಉಪಸ್ಥಿತರಿದ್ದರು. ಸಭೆಗೆ ಮುನ್ನ ಪಕ್ಷದ ವತಿಯಿಂದ ರಕ್ಷಾ ಬಂಧನ ಆಚರಿಸಲಾಯಿತು. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರು ಮಾಜಿ ಸಚಿವ ಯು.ಟಿ. ಖಾದರ್ ಅವರಿಗೆ ತ್ರಿವರ್ಣದ ರಾಖಿ ಕಟ್ಟುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

ರಾಹುಲ್ ಗಾಂಧಿ ಹಾಗೂ ದೇವರಾಜ ಅರಸ್‍ರವರ ಜನ್ಮದಿನಾಚರಣೆಯ ಅಂಗವಾಗಿ ಬೆಳ್ತಂಗಡಿಯ ಚಾರ್ಮಾಡಿ, ಅರಸಿನಮಕ್ಕಿ ಮತ್ತಿತರ ಕಡೆಗಳಲ್ಲಿ ಕೆಪಿಸಿಸಿ ವತಿಯಿಂದ ನೆರೆಸಂತ್ರಸ್ತ ಹೈಸ್ಕೂಲ್ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ತಲಾ ರೂ. 5 ಸಾವಿರದಂತೆ ನೀಡಲಾಗುವುದು. ಈಗಾಲೇ ಸುಮಾರು 90 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದಾರೆ. ಇನ್ನೂ ಹೆಚ್ಚಾಗಬಹುದು.
ಕೆ. ಹರೀಶ್ ಕುಮಾರ್, ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಸಮಿತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X