Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರೇತ ಉಚ್ಛಾಟನೆಯ ಹೆಸರಲ್ಲಿ ಮಹಿಳೆಯನ್ನು...

ಪ್ರೇತ ಉಚ್ಛಾಟನೆಯ ಹೆಸರಲ್ಲಿ ಮಹಿಳೆಯನ್ನು ತ್ರಿಶೂಲದಿಂದ ಚುಚ್ಚಿ ಕೊಂದ ಮಂತ್ರವಾದಿ

ವಾರ್ತಾಭಾರತಿವಾರ್ತಾಭಾರತಿ19 Aug 2019 9:29 PM IST
share
ಪ್ರೇತ ಉಚ್ಛಾಟನೆಯ ಹೆಸರಲ್ಲಿ ಮಹಿಳೆಯನ್ನು ತ್ರಿಶೂಲದಿಂದ ಚುಚ್ಚಿ ಕೊಂದ ಮಂತ್ರವಾದಿ

ರಾಂಚಿ, ಆ.19: ಪ್ರೇತ ಉಚ್ಛಾಟನೆ ಮಾಡುವುದಾಗಿ ಹೇಳಿದ ಮಂತ್ರವಾದಿಯೊಬ್ಬಳು ಮಹಿಳೆಯೊಬ್ಬಳನ್ನು ಹಲವು ಬಾರಿ ತ್ರಿಶೂಲದಿಂದ ಚುಚ್ಚಿ ಕೊಂದ ಘಟನೆ ಜಾರ್ಖಂಡ್‌ನಲ್ಲಿ ನಡೆದಿರುವುದಾಗಿ ಪೊಲೀಸರು ಹೇಳಿದ್ದಾರೆ.

ಭವಂತ್‌ಪುರ ಗ್ರಾಮದ ನಿವಾಸಿ 60 ವರ್ಷ ಪ್ರಾಯದ ರುದ್ಣೀ ದೇವಿ ಎಂಬಾಕೆ ಮೃತಪಟ್ಟವರು. ಈಕೆ ಹಲವು ಸಮಯದಿಂದ ಕಾಯಿಲೆ ಪೀಡಿತಳಾಗಿದ್ದು ವೈದ್ಯಕೀಯ ಚಿಕಿತ್ಸೆ ಫಲ ನೀಡಿರಲಿಲ್ಲ. ಆಗ ಕೆಲವರು, ರುದ್ಣೀದೇವಿಯ ಮೈಮೇಲೆ ಪ್ರೇತ ಆವಾಹನೆಯಾಗಿದ್ದು, ಇದಕ್ಕೆ ಮಂತ್ರವಾದಿಯಿಂದ ಪ್ರೇತ ಉಚ್ಛಾಟಿಸಬೇಕು ಎಂದು ಹೇಳಿದ್ದರು.

 ಇದರಂತೆ ಆಗಸ್ಟ್ 14ರಂದು ಮಹಿಳೆಯನ್ನು ಸಪಾಹಿ ಗ್ರಾಮದಲ್ಲಿರುವ ಮಂತ್ರವಾದಿ ಆಲಮ್ ದೇವಿ ಎಂಬಾಕೆಯ ಮನೆಗೆ ಕರೆತರಲಾಗಿದೆ. ಕುಟುಂಬದವರನ್ನು ಮನೆಯಿಂದ ಹೊರಗೆ ಕಳುಹಿಸಿದ ಆಲಮ್ ದೇವಿ ಅಸ್ವಸ್ಥ ಮಹಿಳೆಯ ಮೈಮೇಲಿದ್ದ ಪ್ರೇತ ಉಚ್ಛಾಟಿಸುವುದಾಗಿ ಕೆಲವೊಂದು ತಾಂತ್ರಿಕ ವಿಧಿಗಳನ್ನು ಆರಂಭಿಸಿದ್ದಾಳೆ ಎಂದು ಮೃತ ಮಹಿಳೆಯ ಪುತ್ರ ದಿನೇಶ್ ಒರಾನ್ ಹೇಳಿದ್ದಾನೆ.

ಸ್ವಲ್ಪ ಹೊತ್ತಿನಲ್ಲಿ ಮನೆಯೊಳಗಿಂದ ತಾಯಿಯ ಕಿರುಚಾಟ ಕೇಳಿ ನಾವೆಲ್ಲಾ ಒಳಗೆ ಓಡಿದೆವು. ಆಗ ಮಂತ್ರವಾದಿ ಕೈಯಲ್ಲಿ ತ್ರಿಶೂಲ ಹಿಡಿದುಕೊಂಡು ತಾಯಿಯ ಕಣ್ಣು, ಕಾಲು ಹಾಗೂ ಹೊಟ್ಟೆಗೆ ಚುಚ್ಚುತ್ತಿದ್ದಳು. ನೋವು ತಡೆಯಲಾರದೆ ತಾಯಿ ಸ್ಮೃತಿ ತಪ್ಪಿ ಬಿದ್ದಿದ್ದರು ಎಂದು ದಿನೇಶ್ ಹೇಳಿದ್ದಾನೆ.

   ಮಹಿಳೆಯ ಕಣ್ಣುಗುಡ್ಡೆ ಹೊರಬಂದಿದ್ದು ಮೂಗು ಕೂಡಾ ಮುರಿದು ಹೋಗಿತ್ತು. ಮಹಿಳೆಯ ಕಿರುಚಾಟ ಕೇಳಿ ಸ್ಥಳಕ್ಕೆ ಬಂದ ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಮಂತ್ರವಾದಿ ಮತ್ತಾಕೆಯ ಪತಿಯನ್ನು ಬಂಧಿಸಿದ್ದು ರುದ್ಣೀದೇವಿ ಸ್ಥಳದಲ್ಲೇ ಮೃತಪಟ್ಟಿದ್ದಳು ಎಂದು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X