ಫೋನ್ ಕದ್ದಾಲಿಕೆ ಪ್ರಕರಣ: ಸಿಬಿಐ ತನಿಖೆಗೆ ಆದೇಶ
![ಫೋನ್ ಕದ್ದಾಲಿಕೆ ಪ್ರಕರಣ: ಸಿಬಿಐ ತನಿಖೆಗೆ ಆದೇಶ ಫೋನ್ ಕದ್ದಾಲಿಕೆ ಪ್ರಕರಣ: ಸಿಬಿಐ ತನಿಖೆಗೆ ಆದೇಶ](https://www.varthabharati.in/sites/default/files/images/articles/2019/08/19/205972-1566234057.jpg)
ಬೆಂಗಳೂರು, ಆ.19: ರಾಜ್ಯದಲ್ಲಿ ದೂರವಾಣಿ ಕರೆಗಳ ಕದ್ದಾಲಿಕೆ ಪ್ರಕರಣವನ್ನು ಸರಕಾರ ಸಿಬಿಐಗೆ ವಹಿಸಿ ಆದೇಶ ಹೊರಡಿಸಿದೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾನಿರೀಕ್ಷಕರ ಶಿಫಾರಸಿನ ಮೇರೆಗೆ ಸರ್ಕಾರ ಈ ಕ್ರಮ ಕೈಗೊಂಡಿದೆ.
2018ರ ಆಗಸ್ಟ್ 1 ರಿಂದ ಈ ವರೆಗಿನ ಅವಧಿಗೆ ನಡೆದಿರಬಹುದಾದ ಆಡಳಿತ ಹಾಗೂ ವಿರೋಧ ಪಕ್ಷಗಳ ಮುಖಂಡರು, ಅವರ ಬಂಧು-ಮಿತ್ರರ ಹಾಗೂ ಸರಕಾರಿ ಅಧಿಕಾರಿಗಳ ದೂರವಾಣಿ ಕದ್ದಾಲಿಕೆ ಕುರಿತು ತನಿಖೆ ನಡೆಸುವಂತೆ ಆದೇಶಿಸಲಾಗಿದೆ.
Next Story