ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್
ಬೆಂಗಳೂರು, ಆ.20: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ ಸಿಂಗ್ ತಿಳಿಸಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾದ ನಂತರ, ತೆರವಾದ ರಾಜ್ಯಾಧ್ಯಕ್ಷ ಸ್ಥಾನಕ್ಕೆ, ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಸೂಚನೆಯ ಮೇರೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪಕ್ಷದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story