ಬಾರಾಮುಲ್ಲಾ ಎನ್‌ಕೌಂಟರ್: ಪೊಲೀಸ್ ಅಧಿಕಾರಿ, ಎಲ್‌ಇಟಿ ಉಗ್ರ ಹತ

ಹೊಸದಿಲ್ಲಿ, ಆ.21: ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ವಿಶೇಷ ಪೊಲೀಸ್ ಅಧಿಕಾರಿಯೊಬ್ಬರು ಹತರಾಗಿದ್ದಾರೆ ಎಂದು ಪೊಲೀಸ್ ವಕ್ತಾರ ಪಿಟಿಐಗೆ ತಿಳಿಸಿದ್ದಾರೆ.
ಮಂಗಳವಾರ ರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಎಲ್‌ಇಟಿ ಉಗ್ರನೊಬ್ಬ ಸಾವನ್ನಪ್ಪಿದ್ದಾನೆ. ಈತ ಹಲವು ಭಯೋತ್ಪಾದಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ.
ಮೃತ ಪೊಲೀಸ್ ಅಧಿಕಾರಿಯನ್ನು ಬಿಲಾಲ್ ಅಹ್ಮದ್ ಎಂದು ಗುರುತಿಸಲಾಗಿದೆ. ಎನ್‌ಕೌಂಟರ್‌ನಲ್ಲಿ ಸಬ್ ಇನ್‌ಸ್ಪೆಕ್ಟರ್ ಅಮರ್‌ದೀಪ್ ಪರಿಹಾರ್ ಗಾಯಗೊಂಡಿದ್ದಾರೆ. ಅವರನ್ನು ಆರ್ಮಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಜು.27ರ ಬಳಿಕ ಮೊದಲ ಬಾರಿ ಭದ್ರತಾ ಸಿಬ್ಬಂದಿ ಹಾಗೂ ಉಗ್ರರ ಮಧ್ಯೆ ಎನ್‌ಕೌಂಟರ್ ನಡೆದಿತ್ತು. ಅಧಿಕಾರಿಗಳು ಎನ್‌ಕೌಂಟರ್ ಸ್ಥಳದಿಂದ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ
Next Story





