Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರವಾಹ ಸಂತ್ರಸ್ತರಿಗೆ ತಾತ್ಕಾಲಿಕ ವಸತಿ...

ಪ್ರವಾಹ ಸಂತ್ರಸ್ತರಿಗೆ ತಾತ್ಕಾಲಿಕ ವಸತಿ ಸೌಲಭ್ಯ ಕಲ್ಪಿಸಿ: ನೂತನ ಸಚಿವ ಲಕ್ಷ್ಮಣ ಸವದಿ

ವಾರ್ತಾಭಾರತಿವಾರ್ತಾಭಾರತಿ21 Aug 2019 8:11 PM IST
share
ಪ್ರವಾಹ ಸಂತ್ರಸ್ತರಿಗೆ ತಾತ್ಕಾಲಿಕ ವಸತಿ ಸೌಲಭ್ಯ ಕಲ್ಪಿಸಿ: ನೂತನ ಸಚಿವ ಲಕ್ಷ್ಮಣ ಸವದಿ

ಬೆಳಗಾವಿ, ಆ.21: ಪ್ರವಾಹ ಬಾಧಿತ ಗ್ರಾಮಗಳಲ್ಲಿ ಮಳೆಯಿಂದ ಸಂಪೂರ್ಣವಾಗಿ ಮನೆಗಳನ್ನು ಕಳೆದುಕೊಂಡಿರುವ ಸಂತ್ರಸ್ತರಿಗೆ ಸರಕಾರಿ ಜಮೀನು ಲಭ್ಯವಿರುವ ಕಡೆ ಅಥವಾ ಜಮೀನು ಇಲ್ಲದಿದ್ದರೆ ಬಾಡಿಗೆ ಜಮೀನು ಪಡೆದುಕೊಂಡು ತಾತ್ಕಾಲಿಕ ವಸತಿ ಸೌಲಭ್ಯ ಒದಗಿಸುವಂತೆ ನೂತನ ಸಚಿವ ಲಕ್ಷ್ಮಣ ಸವದಿ ತಿಳಿಸಿದರು.

ಪ್ರವಾಹ ನಿರ್ವಹಣೆ ಮತ್ತು ಸಂತ್ರಸ್ತರ ಪುನರ್ವಸತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸ್ವಂತ ಶೆಡ್ ನಿರ್ಮಾಣಕ್ಕೆ ಮುಂದಾದರೆ ಸರಕಾರದಿಂದ ತಕ್ಷಣ 50 ಸಾವಿರ ರೂ.ನೀಡಬಹುದು ಎಂದರು.

ಶಾಲೆಗಳಲ್ಲಿ ಪರಿಹಾರ ಕೇಂದ್ರಗಳನ್ನು ಆರಂಭಿಸಿರುವುದರಿಂದ ಸಂತ್ರಸ್ತರಿಗೆ ತಾತ್ಕಾಲಿಕ ಶೆಡ್ ನಿರ್ಮಿಸಿಕೊಟ್ಟರೆ, ಶಾಲೆಗಳನ್ನು ಪುನರಾರಂಭಿಸಲು ಅನುಕೂಲವಾಗಲಿದೆ. ಸರಕಾರ ಈಗಾಗಲೇ ಬಿಡುಗಡೆ ಮಾಡಿರುವ ಪರಿಹಾರದ ಹಣವನ್ನು ತಕ್ಷಣವೇ ಸಂತ್ರಸ್ತರಿಗೆ ತಲುಪಿಸಬೇಕು ಎಂದು ಸಚಿವ ಲಕ್ಷ್ಮಣ ಸವದಿ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಪ್ರವಾಹದಿಂದ ಅಪಾರ ಪ್ರಮಾಣದ ಬೆಳೆಹಾನಿ ಆಗಿರುವುದರಿಂದ ಕೂಡಲೇ ಬೆಳೆಹಾನಿ ಬಗ್ಗೆ ಜಂಟಿ ಸಮೀಕ್ಷೆ ಕೈಗೊಳ್ಳಿ. ಬಿತ್ತನೆ ಮತ್ತು ಬೆಳೆಯ ಬೆಳವಣಿಗೆಯನ್ನು ಗಮನದಲ್ಲಿ ಇಟ್ಟುಕೊಂಡು ಸಮೀಕ್ಷೆ ನಡೆಸಬೇಕು. ಯಾವುದೇ ರೀತಿಯ ಒತ್ತಡಕ್ಕೆ ಒಳಗಾಗದೇ ಸಮೀಕ್ಷೆ ನಡೆಸುವ ಮೂಲಕ ಸಂತ್ರಸ್ತರಿಗೆ ಸೂಕ್ತ ನೆರವು ಒದಗಿಸಬೇಕು ಎಂದು ಅವರು ಹೇಳಿದರು.

ಪ್ರವಾಹ ಬಾಧಿತ ಗ್ರಾಮಗಳಲ್ಲಿ ಮನೆಗಳ ಕುಸಿತದ ಬಗ್ಗೆ ಸಮೀಕ್ಷೆ ಮಾಡುವಾಗ ತಾರತಮ್ಯ ಆಗದಂತೆ ಎಚ್ಚರಿಕೆ ವಹಿಸಬೇಕು. ಲೋಪದೋಷಗಳಾದರೆ ಸಮೀಕ್ಷೆ ಮಾಡುವ ತಂಡವನ್ನೇ ಹೊಣೆಯಾಗಿಸಬೇಕು ಎಂದು ಅವರು ಸೂಚನೆ ನೀಡಿದರು.

ಸಂತ್ರಸ್ತರ ಪುನರ್ವಸತಿ ಈಗ ನಮ್ಮ ಆದ್ಯತೆಯಾಗಿದೆ. ಮುಳುಗಡೆಯಾಗಿರುವ ಗ್ರಾಮಗಳಲ್ಲಿ ಜನರು ಸಂಪೂರ್ಣ ಸ್ಥಳಾಂತರಗೊಳ್ಳಲು ಇನ್ನೂ ಸಮಯ ಬೇಕಿದೆ. ಪುನರ್ವಸತಿ ಸರಕಾರ ಮತ್ತು ಜಿಲ್ಲಾಡಳಿತಕ್ಕೆ ದೊಡ್ಡ ಸವಾಲು. ಆದುದರಿಂದ, ಪ್ರಾಮಾಣಿಕತೆ ಹಾಗೂ ನಿಷ್ಠೆಯಿಂದ ಕೆಲಸ ಮಾಡಬೇಕಿದೆ ಎಂದು ಅವರು ಹೇಳಿದರು.

ಗ್ರಾಮಗಳ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಯಾವುದೇ ರೋಗರುಜಿನಗಳು ಬಾರದಂತೆ ಕ್ರಮ ಕೈಗೊಳ್ಳಬೇಕು. ಸಂತ್ರಸ್ತರು ಮತ್ತು ರೈತರ ಜತೆ ಸರಕಾರ ಇದೆ ಎಂಬ ಭರವಸೆಯನ್ನು ನಾವು ಮೂಡಿಸಬೇಕಿದೆ. ರಸ್ತೆ, ಸೇತುವೆಗಳ ಹಾನಿಯ ಸಮೀಕ್ಷೆ ನಡೆಸಿ ದುರಸ್ತಿಗೆ ಅಂದಾಜುಪಟ್ಟಿಯನ್ನು ತಯಾರಿಸಿ ಸರಕಾರಕ್ಕೆ ಸಲ್ಲಿಸಿ. ಅದೇ ರೀತಿ ವಿದ್ಯುತ್ ಸಂಪರ್ಕ ಕಡಿತಗೊಂಡಿರುವ ಗ್ರಾಮಗಳಿಗೆ ತಕ್ಷಣವೇ ಸಂಪರ್ಕ ಒದಗಿಸುವಂತೆ ಲಕ್ಷ್ಮಣ ಸವದಿ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ನೂತನ ಸಚಿವೆ ಶಶಿಕಲಾ ಜೊಲ್ಲೆ, ಪ್ರವಾಹಬಾಧಿತ ಗ್ರಾಮಗಳಲ್ಲಿ ಜನರ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ಸಂತ್ರಸ್ತರಿಗೆ ಹೊಸ ಬದುಕು ಕಟ್ಟಿಕೊಡಲು ನಾವು ಎಲ್ಲರೂ ಸಮನ್ವಯದೊಂದಿಗೆ ಕಾರ್ಯನಿರ್ವಹಿಸೋಣ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಆಗಸ್ಟ್‌ನಲ್ಲಿ ವಾಡಿಕೆಗಿಂತ ಶೇ.490ರಷ್ಟು ಅಧಿಕ ಮಳೆ ಮತ್ತು ಮಹಾರಾಷ್ಟ್ರದ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಟ್ಟ ಪರಿಣಾಮ ಪ್ರವಾಹ ಪರಿಸ್ಥಿತಿ ಉದ್ಭವಿಸಿತು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ವಿವರಿಸಿದರು.

ಜಿಲ್ಲೆಯ 377 ಗ್ರಾಮಗಳು ಪ್ರವಾಹದಿಂದ ಬಾಧಿತಗೊಂಡಿದ್ದು, 4.15 ಲಕ್ಷ ಜನರನ್ನು ಹಾಗೂ 1.10 ಲಕ್ಷ ಜಾನುವಾರುಗಳನ್ನು ಸ್ಥಳಾಂತರಿಸಲಾಗಿದೆ. 493 ಪರಿಹಾರ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ 1.72 ಲಕ್ಷ ಜನರಿಗೆ ಆಶ್ರಯ ನೀಡಲಾಗಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ 126 ಪರಿಹಾರ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ 2.34 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಜಲಾವೃತಗೊಂಡಿದೆ. ಪ್ರವಾಹ ಮತ್ತು ಮಳೆಯಿಂದಾಗಿ 24 ಜನರು ಸಾವನ್ನಪ್ಪಿದ್ದು, ಎರಡು ಪ್ರಕರಣ ಹೊರತುಪಡಿಸಿ ಮೃತರ ವಾರಸುದಾರರಿಗೆ ಪರಿಹಾರ ನೀಡಲಾಗಿದೆ. ಇಬ್ಬರು ನಾಪತ್ತೆಯಾಗಿದ್ದಾರೆ. ಇದುವರೆಗೆ 14 ಕೋಟಿ ರೂ.ಪರಿಹಾರ ವಿತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಸಭೆಯಲ್ಲಿ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಕೇಶ್ ಸಿಂಗ್, ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X