Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಕರೆ

ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಕರೆ

ವಾರ್ತಾಭಾರತಿವಾರ್ತಾಭಾರತಿ21 Aug 2019 9:00 PM IST
share

ಮಂಗಳೂರು, ಆ.21: ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಕೆಲವೊಂದು ಮಾರ್ಗದರ್ಶನವನ್ನು ನೀಡಿದೆ.

ವಿಷಕಾರಿ ರಾಸಾಯನಿಕ ಲೋಹ ಲೇಪದ ಹಾಗೂ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಿದ ಗಣೇಶನ ಮೂರ್ತಿ ಬಳಕೆ ಮಾಡಬಾರದು, ಬಾವಿ, ಕೆರೆ, ನದಿಗಳಲ್ಲಿ ಗಣಪತಿ ವಿಸರ್ಜನೆ ಮಾಡಬಾರದು, ಹಾಗೆ ಮಾಡಿದರೆ ಅಂತರ್ಜಲ ಹಾಗೂ ಕುಡಿಯುವ ನೀರಿನ ಸೆಲೆ ಎಲ್ಲವೂ ಬತ್ತಿ ಹೋಗುತ್ತದೆ, ಬದಲಿಗೆ ಬಕೆಟ್‌ನಲ್ಲಿ ಅಥವಾ ನಗರಪಾಲಿಕೆ/ ಪುರಸಭೆ ನಿಗದಿಪಡಿಸುವ ಸಂಚಾರ ವಿಸರ್ಜನೆ ವಾಹನದಲ್ಲಿ ವಿಸರ್ಜಿಸಿ, ಮಹಾನಗರಪಾಲಿಕೆ ಸೂಚಿತ ಕೆರೆಗಳಲ್ಲಿ ವಿಸರ್ಜಿಸುವ ಮುನ್ನ ಹೂವು, ವಸ್ತ್ರ, ಪ್ಲಾಸ್ಟಿಕ್ ಹಾರ ಎಲ್ಲವನ್ನೂ ತೆಗೆಯಬೇಕು ಎಂದು ತಿಳಿಸಿದೆ.

ಗಣಪತಿ ಹಬ್ಬದ ಸಂದರ್ಭ ಪಟಾಕಿ ಸಿಡಿಸಬಾರದು, ಪಟಾಕಿಯ ಹೊಗೆ ವಿಷಪೂರಿತವಲ್ಲದೆ ರಸ್ತೆ ತುಂಬಾ ಕಸವಾಗುತ್ತದೆ. ಅತಿಯಾದ ಶಬ್ಧವು ಕಿವಿಗೆ ಹಾನಿಕರವಾಗಿದೆ. ಗಣಪತಿ ಹಬ್ಬದಲ್ಲಿ ರಸ್ತೆ, ಚರಂಡಿಯಲ್ಲಿ ಹೂವಿನ ಹಾರ, ತಟ್ಟೆ, ಲೋಟ, ಎಲೆ ಎಸೆಯಬಾರದು, ಕಸ ವಿಲೇವಾರಿ ವಾಹನಕ್ಕೆ ನೀಡಬೇಕು ಹಾಗೂ ಸಾದಾ ಜೇಡಿ ಮಣ್ಣಿನ, ಬಣ್ಣ ರಹಿತ ಅಥವಾ ನೈಸರ್ಗಿಕ ಬಣ್ಣವುಳ್ಳ ಹಬ್ಬದ ಗಣೇಶ ವಿಗ್ರಹವನ್ನು ನಿರ್ಮಿಸಿರಿ. ಸಾಮೂಹಿಕವಾಗಿ ನಡೆಸುವ ಗಣೇಶನ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಿರಿ ಎಂದು ನಿರ್ದೇಶಿಸಿದೆ.

ಕೆರೆಗಳಲ್ಲಿ ಮೂರ್ತಿ ವಿಸರ್ಜನೆ : ಗಣೇಶ ಮೂರ್ತಿಗಳನ್ನು ಕೊಳಗಳು, ಕೆರೆಗಳಲ್ಲಿ ವಿಸರ್ಜಿಸುವುದಾದರೆ ಎಲೆಗಳು, ಹೂವುಗಳು, ಕೃತಕ ಅಲಂಕಾರಿಕ ವಸ್ತುಗಳನ್ನು ಮೂರ್ತಿಯಿಂದ ಪ್ರತ್ಯೇಕಿಸಬೇಕು. ಕೊಳದ ಒಂದು ಮೂಲೆಯಲ್ಲಿ ತೆಗೆಯಬಹುದಾದ ಸಿಂಥೆಟಿಕ್ ಹಾಳೆಯನ್ನು ಹಾಕಿ ಅನಂತರ ವಿಸರ್ಜಿಸಬೇಕು. ವಿಸರ್ಜನಾ ಕಾರ್ಯ ಪೂರ್ಣಗೊಂಡ ನಂತರ ಸಿಂಥೆಟಿಕ್ ಹಾಳೆಯನ್ನು ತ್ಯಾಜ್ಯಗಳ ಸಮೇತವಾಗಿ ಹೊರತೆಗೆಯಬಹುದು. ಮೂರ್ತಿಗೆ ಬಳಕೆ ಮಾಡಿದ ಮಣ್ಣು ತಳದಲ್ಲಿ ಸಂಗ್ರಹವಾಗುವುದಕ್ಕೆ ಅನುಕೂಲವಾಗುವಂತೆ ಸುಣ್ಣವನ್ನು ಸೇರ್ಪಡೆ ಮಾಡಬೇಕು.

ನದಿಗಳಲ್ಲಿ ಮೂರ್ತಿ ವಿಸರ್ಜನೆ: ನದಿಗಳ ದಡದಲ್ಲಿ ಮಣ್ಣಿನ ತಡೆಗೋಡೆಗಳನ್ನು ಹಾಕಿ ಕೃತಕ ಕೊಳಗಳನ್ನು ನಿರ್ಮಿಸಬೇಕು. ವಿಸರ್ಜನೆಗೆ ಮೊದಲು ಕೊಳದ ತಳದಲ್ಲಿ ತೆಗೆಯಬಹುದಾದ ಸಿಂಥೆಟಿಕ್ ಹಾಳೆಯನ್ನು ಹಾಕಬೇಕು. ಮೂರ್ತಿಗಳ ವಿಸರ್ಜನೆ ಪೂರ್ಣಗೊಂಡ 48 ಗಂಟೆಗಳ ಒಳಗೆ ವಿಸರ್ಜನೆಯಿಂದ ಉತ್ಪತ್ತಿಯಾಗುವ ತ್ಯಾಜ್ಯದ ಸಮೇತವಾಗಿ ಸಿಂಥೆಟಿಕ್ ಹಾಳೆಯನ್ನು ಹೊರತಗೆಯಬೇಕು.

ಸಮುದ್ರದಲ್ಲಿ ಮೂರ್ತಿ ವಿಸರ್ಜನೆ: ಸಮುದ್ರದಲ್ಲಿ ಮೂರ್ತಿಗಳ ವಿಸರ್ಜನೆ ಮಾಡುವುದಾದರೆ ಎತ್ತರದ ಅಲೆಗಳು ಮತ್ತು ಸಣ್ಣ ಅಲೆಗಳ ನಡುವಿನ ಸ್ಥಳವನ್ನು ಆಯ್ಕೆ ಮಾಡಿಕೊಳ್ಳಬೇಕು. ಸ್ಥಳದ ಆಯ್ಕೆಗೆ ಪೂರ್ವಭಾವಿಯಾಗಿ ಕಡಿಮೆ ಅಲೆಗಳು ಮತ್ತು ಎತ್ತರದ ಅಲೆಗಳನ್ನು ಗುರುತಿಸಿಕೊಳ್ಳಬೇಕು. ವಿಸರ್ಜನಾ ಕಾರ್ಯದ ಮೇಲ್ವಿಚಾರಣೆಗೆ ಯಂತ್ರ ಚಾಲಿತ ಬೋಟ್‌ಗಳು, ರಕ್ಷಣಾ ಸಿಬ್ಬಂದಿ, ಗೃಹ ರಕ್ಷಕ ದಳ ಮುಂತಾದವರನ್ನು ಸಾಕಷ್ಟು ಪ್ರಮಾಣದ ಸುರಕ್ಷಿತ ಸಾಮಾಗ್ರಿಗಳೊಂದಿಗೆ ನಿಯೋಜಿಸಬೇಕು ಎಂದು ಮಂಡಳಿಯ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X