Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆ. 22ರಿಂದ ಭಾರತ-ವಿಂಡೀಸ್ ಮೊದಲ ಟೆಸ್ಟ್

ಆ. 22ರಿಂದ ಭಾರತ-ವಿಂಡೀಸ್ ಮೊದಲ ಟೆಸ್ಟ್

ಟೆಸ್ಟ್ ಚಾಂಪಿಯನ್‌ಶಿಪ್‌ನ ಆರಂಭಿಕ ಪಂದ್ಯ

ವಾರ್ತಾಭಾರತಿವಾರ್ತಾಭಾರತಿ21 Aug 2019 10:55 PM IST
share
ಆ. 22ರಿಂದ ಭಾರತ-ವಿಂಡೀಸ್ ಮೊದಲ ಟೆಸ್ಟ್

 ನಾರ್ತ್ ಸೌಂಡ್(ಆ್ಯಂಟಿಗುವಾ), ಆ.21:ಭಾರತ ಮತ್ತು ವೆಸ್ಟ್‌ಇಂಡೀಸ್ ತಂಡಗಳ ನಡುವೆ ಟೆಸ್ಟ್ ಚಾಂಪಿಯನ್‌ಶಿಪ್‌ನ ಮೊದಲ ಪಂದ್ಯ ಗುರುವಾರ ಇಲ್ಲಿ ಆರಂಭಗೊಳ್ಳಲಿದೆ.

ಟ್ವೆಂಟಿ-20 ಮತ್ತು ಏಕದಿನ ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧಿಸಿರುವ ಟೀಮ್ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲೂ ಅದೇ ಪ್ರದರ್ಶನ ಮುಂದುವರಿಸುವ ಯೋಜನೆಯಲ್ಲಿದೆ. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತನ್ನ ನಾಯಕತ್ವದಲ್ಲಿ 27ನೇ ಟೆಸ್ಟ್ ಗೆಲುವು ದಾಖಲಿಸಲು ನೋಡುತ್ತಿದ್ದಾರೆ. ಭಾರತ ಟೆಸ್ಟ್‌ನಲ್ಲಿ ಫೇವರಿಟ್ ಆಗಿದ್ದು, ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ, ಲೋಕೇಶ್ ರಾಹುಲ್, ರೋಹಿತ್ ಶರ್ಮಾ ಮತ್ತು ರಿಷಭ್ ಪಂತ್ ಅವರಿಂದಾಗಿ ತಂಡ ಬಲಿಷ್ಠವಾಗಿದೆ. ವಿಂಡೀಸ್ ತಂಡವನ್ನು ಜೇಸನ್ ಹೋಲ್ಡರ್ ಮುನ್ನಡೆಸಲಿದ್ದಾರೆ.

ನಾಯಕ ವಿರಾಟ್ ಕೊಹ್ಲಿ ಮತ್ತು ಎರಡನೇ ಬಾರಿ ಹೆಡ್ ಕೋಚ್ ಆಗಿ ಆಯ್ಕೆಯಾಗಿರುವ ರವಿ ಶಾಸ್ತ್ರಿಗೆ ಈ ಸರಣಿ ಸವಾಲಿನದ್ದಾಗಿದೆ. ಹೊಸ ಚೆಂಡಿನೊಂದಿಗೆ ದಾಳಿಗಿಳಿಯಲಿರುವ ಕೇಮರ್ ರೋಚ್‌ಮತ್ತು ಶಾನನ್ ಗ್ಯಾಬ್ರಿಯಲ್, ಜೇಸನ್ ಹೋಲ್ಡರ್ ಭಾರತದ ಬ್ಯಾಟಿಂಗ್‌ಗೆ ಸವಾಲನ್ನೊಡ್ಡಲಿರುವರು. ಒಂದು ವೇಳೆ ಪಿಚ್ ವೇಗದ ಬೌಲರ್‌ಗಳಿಗೆ ಸ್ನೇಹಿಯಾಗಿ ಕಂಡು ಬಂದರೆ ಕೊಹ್ಲಿ ಪಡೆ ನಾಲ್ವರು ತಜ್ಞ ಬೌಲರ್‌ಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಇದೆ. ಹೀಗಾದರೆ ಏಕೈಕ ಸ್ಪಿನ್ನರ್ ಸ್ಥಾನಕ್ಕಾಗಿ ರವಿಚಂದ್ರನ್ ಅಶ್ವಿನ್ ಮತ್ತು ಕುಲದೀಪ್ ಯಾದವ್ ನಡುವೆ ಪೈಪೋಟಿ ಕಂಡು ಬರಲಿದೆ. ವೇಗಿಗಳಾದ ಜಸ್‌ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ ಮತ್ತು ಮುಹಮ್ಮದ್ ಶಮಿ ಅವರನ್ನು ಕಣಕ್ಕಿಳಿಸುವ ನಿಟ್ಟಿನಲ್ಲಿ ನಾಯಕ ಕೊಹ್ಲಿ ಚಿಂತನೆ ನಡೆಸಿದ್ದಾರೆ. ಬ್ಯಾಟಿಂಗ್ ಸಂಯೋಜನೆ ಕೊಹ್ಲಿಗೆ ದೊಡ್ಡ ತಲೆ ನೋವು ತಂದಿದೆ. ಬ್ಯಾಟಿಂಗ್‌ನಲ್ಲಿ ಭಾರತ ಮಿಂಚಿದರೆ ಗೆಲುವು ಖಚಿತ. ಹಾರ್ದಿಕ್ ಪಾಂಡ್ಯ ಅಂತಿಮ ಹನ್ನೊಂದರ ಬಳಗದಲ್ಲಿ ಆಡಲು ಲಭ್ಯರಾದರೆ ರೋಹಿತ್ ಶರ್ಮಾ ಮತ್ತು ಅಜಿಂಕ್ಯ ರಹಾನೆ ಇವರಲ್ಲಿ ಒಬ್ಬರು ಹೊರಗುಳಿಯಬೇಕಾಗುತ್ತದೆ. ಆದರೆ ಟೆಸ್ಟ್ ನಲ್ಲಿ ವೆಸ್ಟ್‌ಇಂಡೀಸ್‌ನ ಇತ್ತೀಚಿನ ಸಾಧನೆಯನ್ನು ಒಂದು ವೇಳೆ ಗಣನೆಗೆ ತೆಗದುಕೊಂಡರೆ ರಹಾನೆ ಮತ್ತು ರೋಹಿತ್‌ಗೆಅಂತಿಮ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ.

 ಐವರು ಬೌಲರ್‌ಗಳು ಅಂತಿಮ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದರೆ ರವೀಂದ್ರ ಜಡೇಜ ಆಲ್‌ರೌಂಡರ್ ಅವಕಾಶ ಪಡೆಯಲಿದ್ದಾರೆ. ಆಗ ಮುಂಬೈನ ರೋಹಿತ್ ಮತ್ತು ರಹಾನೆ ನಡುವೆ ಅವಕಾಶಕ್ಕಾಗಿ ಪೈಪೋಟಿ ಕಂಡು ಬರಲಿದೆ. ಆರಂಭಿಕ ಬ್ಯಾಟ್ಸ್ ಮನ್ ಆಗಿ ಮಾಯಾಂಕ್ ಅಗರ್ವಾಲ್ ಜೊತೆ ಇನಿಂಗ್ಸ್ ಆರಂಭಿಸಲಿರುವ ಬ್ಯಾಟ್ಸ್‌ಮನ್ ಯಾರೆಂದು ಇನ್ನೂ ಸ್ಪಷ್ಟಗೊಂಡಿಲ್ಲ. ಲೋಕೇಶ್ ರಾಹುಲ್ ಇನಿಂಗ್ಸ್ ಆರಂಭಿಸುವ ಸಾಧ್ಯತೆ ಇದ್ದರೂ, ಹನುಮ ವಿಹಾರಿ ಆಸ್ಟ್ರೇಲಿಯದಲ್ಲಿ ಚೆನ್ನಾಗಿ ಆಡಿದ್ದಾರೆ. ಈ ಕಾರಣದಿಂದಾಗಿ ಹನುಮ ವಿಹಾರಿ ಕೊನೆಯ ಕ್ಷಣದಲ್ಲಿ ಇನ್ನೊಂದು ಅವಕಾಶ ಪಡೆಯುವುದನ್ನು ಅಲ್ಲಗೆಳೆಯುವಂತಿಲ್ಲ. ವಿಂಡೀಸ್ ತಂಡಕ್ಕೆ ಪ್ರತಿಭಾವಂತ ಯುವ ಬ್ಯಾಟ್ಸ್‌ಮನ್‌ಗಳ ಪ್ರವೇಶವಾಗಿದೆ.ಶಾಹಿ ಹೋಪ್, ಜೋನ್ ಕ್ಯಾಂಪ್‌ಬೆಲ್ ಮತ್ತು ಶಿಮ್ರಾನ್ ಹೆಟ್ಮೆಯರ್ ವಿಂಡೀಸ್‌ನ ಬ್ಯಾಟಿಂಗ್ ವಿಭಾಗಕ್ಕೆ ಹೊಸ ಚೈತನ್ಯ ತುಂಬಿದ್ದಾರೆ. 2016ರ ಸರಣಿಯಲ್ಲಿ ಕಿಂಗ್ಸ್‌ಸ್ಟನ್ ಟೆಸ್ಟ್ ಪಂದ್ಯದಲ್ಲಿ ರೋಸ್ಟನ್ ಚೇಸ್ ಅವರು ಐದನೇ ದಿನ ಭಾರತದ ವಿರುದ್ಧ ಸೋಲು ತಪ್ಪಿಸಲು ಹೋರಾಟ ನಡೆಸಿದ್ದರು. ಹಾಗೆಯೇ ಅವರೊಬ್ಬ ಆಫ್ ಸ್ಪಿನ್ನರ್ 50 ಟೆಸ್ಟ್ ವಿಕೆಟ್‌ಗಳನ್ನು ತಮ್ಮ ಖಾತೆಗೆ ಸೇರಿಸಿಕೊಂಡಿದ್ದಾರೆ. ಡರೆನ್ ಬ್ರಾವೊ ತಂಡದಲ್ಲಿರುವ ಹೆಚ್ಚಿನಅನುಭವಿ ಆಟಗಾರ. ಅವರು 52 ಟೆಸ್ಟ್ ಗಳನ್ನು ಆಡಿದ್ದಾರೆ. 3,500 ರನ್ ತನ್ನ ಖಾತೆಗೆ ಸೇರಿಸಿಕೊಂಡಿದ್ದಾರೆ. ಬ್ಯಾಟಿಂಗ್‌ನಲ್ಲಿ 38 ಸರಾಸರಿ ಹೊಂದಿರುವ ಅವರು 8 ಶತಕಗಳನ್ನು ದಾಖಲಿಸಿದ್ದಾರೆ. ದೈತ್ಯ ಆಟಗಾರನಾಗಿ ಗಮನಸೆಳೆದಿರುವ ರಾಕೀಮ್ ಕಾರ್ನ್‌ವಾಲ್ ಚೊಚ್ಚಲ ಟೆಸ್ಟ್ ಆಡುವ ಅವಕಾಶಕ್ಕಾಗಿ ಕಾಯುತ್ತಿದ್ದಾರೆ.

17 ವರ್ಷಗಳ ಭಾರತದ ಅಜೇಯ ಗೆಲುವಿನ ಸಾಧನೆ

 ಭಾರತ

ವಿರಾಟ್ ಕೊಹ್ಲಿ (ನಾಯಕ), ಮಾಯಾಂಕ್ ಅಗರ್ವಾಲ್, ಲೋಕೇಶ್ ರಾಹುಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ಅಜಿಂಕ್ಯ ರಹಾನೆ, ರೋಹಿತ್ ಶರ್ಮ, ರಿಷಭ್ ಪಂತ್(ವಿಕೆಟ್ ಕೀಪರ್), ಕುಲದೀಪ್ ಯಾದವ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜ, ಇಶಾಂತ್ ಶರ್ಮಾ, ಮುಹಮ್ಮದ್ ಶಮಿ, ಜಸ್‌ಪ್ರೀತ್ ಬುಮ್ರಾ, ಉಮೇಶ್ ಯಾದವ್, ಭುವನೇಶ್ವರ್ ಕುಮಾರ್, ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್).

ವೆಸ್ಟ್ ಇಂಡೀಸ್:

ಜೇಸನ್ ಹೋಲ್ಡರ್(ನಾಯಕ), ಕ್ರೆಗ್ ಬ್ರಾಥ್‌ವೇಟ್, ಡರೆನ್ ಬ್ರಾವೊ, ಶಮ್ರಾಹ್ ಬೂಕ್ಸ್, ಜೋನ್ ಕ್ಯಾಂಪ್‌ಬೆಲ್, ರೋಸ್ಟನ್ ಚೇಸ್, ರಾಕೀಮ್ ಕಾರ್ನ್‌ವಾಲ್, ಶಾನೆ ಡಾವ್ರಿಚ್, ಶಾನನ್ ಗ್ಯಾಬ್ರಿಯಲ್, ಶಿಮ್ರಿನ್ ಹೆಟ್ಮೆಯರ್, ಶಾಹಿ ಹೋಪ್, ಕೀಮೊ ಪಾಲ್, ಕೇಮರ್ ರೋಚ್.

ಹೆಡ್ ಟು ಹೆಡ್

ಗೆಲುವು : ಭಾರತ 9, ವಿಂಡೀಸ್ 12

ವಿಂಡೀಸ್‌ನಲ್ಲಿ ಭಾರತದ ಸರಣಿ ಗೆಲುವು 4

share
ವಾರ್ತಾಭಾರತಿ
ವಾರ್ತಾಭಾರತಿ
Next Story
X