Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಒಂದು ತಿಂಗಳಲ್ಲಿ ಸಂತ್ರಸ್ತರಿಗೆ ಮನೆಗಳ...

ಒಂದು ತಿಂಗಳಲ್ಲಿ ಸಂತ್ರಸ್ತರಿಗೆ ಮನೆಗಳ ಹಸ್ತಾಂತರ: ಸಚಿವ ಸುರೇಶ್ ಕುಮಾರ್ ಭರವಸೆ

ವಾರ್ತಾಭಾರತಿವಾರ್ತಾಭಾರತಿ22 Aug 2019 11:46 PM IST
share
ಒಂದು ತಿಂಗಳಲ್ಲಿ ಸಂತ್ರಸ್ತರಿಗೆ ಮನೆಗಳ ಹಸ್ತಾಂತರ: ಸಚಿವ ಸುರೇಶ್ ಕುಮಾರ್ ಭರವಸೆ

ಮಡಿಕೇರಿ, ಆ.22: ಕಳೆದ ವರ್ಷದ ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಕರ್ಣಂಗೇರಿಯಲ್ಲಿ 35, ಜಂಬೂರಿನಲ್ಲಿ 350 ಕ್ಕೂ ಹೆಚ್ಚು ಮನೆಗಳನ್ನು ನಿರ್ಮಾಣ ಮಾಡುತ್ತಿದ್ದು, ಸದ್ಯ ಕರ್ಣಂಗೇರಿಯಲ್ಲಿ ಮನೆಯ ಕಾಮಗಾರಿ ಪೂರ್ಣಗೊಂಡಿದೆ. ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಸಂತ್ರಸ್ತರಿಗೆ ಒಂದು ತಿಂಗಳಲ್ಲಿ ಮನೆಗಳನ್ನು ಹಸ್ತಾಂತರಿಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. 

ಕಳೆದ ವರ್ಷ ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಕರ್ಣಂಗೇರಿ ಹಾಗೂ ಜಂಬೂರಿನಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಮನೆಗಳನ್ನು ಸಚಿವರು ಪರಿಶೀಲಿಸಿದರು. 

ಸುದ್ದಿಗಾರರ ಜೊತೆ ಮಾತನಾಡಿದ ಅವರು ಜಂಬೂರಿನಲ್ಲಿ ರಾಜೀವ್ ಗಾಂಧಿ ವಸತಿ ನಿಗಮದಿಂದ 350 ಮನೆಗಳು ಹಾಗೂ ಇನ್‍ಪೋಸಿಸ್ ಸಂಸ್ಥೆಯಿಂದ 200 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಈ ಮನೆಗಳ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲಾಗುವುದು. ಈಗಾಗಲೇ 50 ಮನೆಗಳು ಪೂರ್ಣಗೊಳ್ಳುವ ಹಂತದಲ್ಲಿದೆ. ಹಾಗೆಯೇ 220 ಮನೆಗಳು ರೂಪ್ ಹಂತದಲ್ಲಿದೆ. ಚರಂಡಿ, ವಿದ್ಯುತ್ ಸಂಪರ್ಕ, ಕುಡಿಯುವ ನೀರು ಮತ್ತಿತರ ಮೂಲಸೌಲಭ್ಯ ಕಲ್ಪಿಸಿ ಶೀಘ್ರ ಮನೆಗಳನ್ನು ಹಸ್ತಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಆ ನಿಟ್ಟಿನಲ್ಲಿ ಕಾಮಗಾರಿಯನ್ನು ಚುರುಕುಗೊಳಿಸಲಾಗುವುದು ಎಂದು ಸುರೇಶ್ ಕುಮಾರ್ ಅವರು ಹೇಳಿದರು. ಮನೆಗಳ ಕಾಮಗಾರಿಯು ಗುಣಮಟ್ಟದಿಂದ ಕೂಡಿದೆ ಎಂದು ಇದೇ ಸಂದರ್ಭದಲ್ಲಿ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.  

ಪ್ರಸಕ್ತ ವರ್ಷದಲ್ಲಿ ತೋರ ಮತ್ತು ಕಾವೇರಿ ನದಿ ಪಾತ್ರದ ಕರಡಿಗೋಡು, ಕುಂಬಾರಗುಂಡಿ ಮತ್ತಿತರ ಕಡೆಗಳಲ್ಲಿ ಪ್ರವಾಹ ಉಂಟಾಗಿದ್ದು, ಈ ಗ್ರಾಮಗಳನ್ನು ಸ್ಥಳಾಂತರಿಸಬೇಕಿದೆ. ಈ ಸಂಬಂಧ ಗ್ರಾಮಸಭೆಯಲ್ಲಿ ತೀರ್ಮಾನಿಸಿ ವರದಿ ನೀಡುವಂತೆ ಗ್ರಾ.ಪಂ.ಅಧಿಕಾರಿಗಳಿಗೆ ತಿಳಿಸಲಾಗಿದ್ದು, ಈ ಗ್ರಾಮಗಳ ಜನರನ್ನು ಸ್ಥಳಾಂತರಿಸಲಾಗುವುದು ಎಂದು ಸುರೇಶ್ ಕುಮಾರ್ ಅವರು ಹೇಳಿದರು. 

ಈ ಗ್ರಾಮಗಳ ಜನರ ಪುನರ್ ವಸತಿ ಸಂಬಂಧ ಹತ್ತಿರದಲ್ಲಿ ಸರ್ಕಾರಿ ಜಾಗ ಗುರುತಿಸಲಾಗುವುದು. ಇಲ್ಲದಿದ್ದಲ್ಲಿ ಖಾಸಗಿಯವರು ಭೂಮಿ ನೀಡಲು ಮುಂದೆ ಬಂದಲ್ಲಿ ಖರೀದಿಸಲಾಗುವುದು. ಒಟ್ಟಾರೆ ಈ ಬಾರಿ ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದವರಿಗೆ ಪುನರ್ ವಸತಿ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ನುಡಿದರು.  

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ರಾಜ್ ಕುಮಾರ್ ಖತ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ, ಉಪ ವಿಭಾಗಧಿಕಾರಿ ಟಿ.ಜವರೇಗೌಡ, ತಹಶೀಲ್ದಾರ್ ಮಹೇಶ್, ಗೋವಿಂದ ರಾಜು, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಇಬ್ರಾಹಿಂ, ತಾ.ಪಂ.ಇಒ ಲಕ್ಷ್ಮಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವರಾಮು, ರಾಜೀವ್ ಗಾಂಧಿ ವಸತಿ ನಿಗಮದ ಎಂಜಿನಿಯರ್ ಶ್ರೀನಿವಾಸ್, ಇತರರು ಇದ್ದರು. 

ಬಸವನಹಳ್ಳಿಗೆ ಭೇಟಿ
ಸಚಿವ ಎಸ್.ಸುರೇಶ್ ಕುಮಾರ್ ಅವರು ಪ್ರಕೃತಿ ವಿಕೋಪದ ಪ್ರದೇಶಗಳ ವೀಕ್ಷಣೆ ಸಂದರ್ಭದಲ್ಲಿ ದಿಡ್ಡಳ್ಳಿ ಗಿರಿಜನರಿಗೆ ಹಸ್ತಾಂತರಿಸಲಾಗಿರುವ ಬಸವನಹಳ್ಳಿಯ ಮನೆಗಳನ್ನು ವೀಕ್ಷಣೆ ಮಾಡಿದರು. 

ಈ ಸಂದರ್ಭದಲ್ಲಿ ಬಸವನಹಳ್ಳಿಯ ಪ್ರಮುಖರಾದ ಸ್ವಾಮಿಯಪ್ಪ ಹಾಗೂ ಸ್ಥಳೀಯರ ಅಹವಾಲು ಆಲಿಸಿದರು. ರಸ್ತೆ, ಕುಡಿಯುವ ನೀರು, ವಿದ್ಯುತ್ ಸಂಪರ್ಕ ಮತ್ತಿತರ ಕಾಮಗಾರಿಗಳ ಬಗ್ಗೆ ಪರಿಶೀಲಿಸಿದರು. ಈಗಾಗಲೇ ಹಸ್ತಾಂತರಿಸಿರುವ ಮನೆಗಳಲ್ಲಿ ದಿಡ್ಡಳ್ಳಿ ಆದಿವಾಸಿಗಳು ವಾಸ ಮಾಡುತ್ತಿದ್ದಾರೆ ಎಂಬ ಬಗ್ಗೆ ಸಂಬಂಧಪಟ್ಟವರಿಂದ ಮಾಹಿತಿ ಪಡೆದರು. 

ಹಾರಂಗಿ ಪರಿಶೀಲನೆ
ಬಳಿಕ ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವರು ಜಲಾಶಯದ ನೀರಿನ ಸಂಗ್ರಹಣಾ ಸಾಮಥ್ರ್ಯ ಹಾಗೂ ಜಲಾನಯನ ವ್ಯಾಪ್ತಿಯ ಬಗ್ಗೆ ಮಾಹಿತಿ ಪಡೆದರು. ಬಳಿಕ ಹಾರಂಗಿ ಹಾಗೂ ಕುಶಾಲನಗರ ಪ್ರವಾಸಿ ಮಂದಿರದಲ್ಲಿ ಅಲ್ಲಿನ ಸ್ಥಳೀಯರ ಅಹವಾಲು ಆಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X