ಕ್ರೀಡಾಂಗಣದ ಸಜ್ಜಾ ಕುಸಿದು ಇಬ್ಬರು ಮೃತ್ಯು: ಮುಖ್ಯಮಂತ್ರಿ ಯಡಿಯೂರಪ್ಪ ವಿಷಾದ

ಬೆಂಗಳೂರು, ಆ. 23: ‘ಬಳ್ಳಾರಿಯ ಸಿರಗುಪ್ಪದಲ್ಲಿ ಕ್ರೀಡಾಂಗಣದ ಸಜ್ಜಾ ಕುಸಿದು ಇಬ್ಬರು ಸಾವನ್ನಪ್ಪಿರುವುದು ದುರದೃಷ್ಟಕರ ಸಂಗತಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದಿಲ್ಲಿ ವಿಷಾದ ವ್ಯಕ್ತಪಡಿಸಿದ್ದಾರೆ.
‘ಸಚಿವ ಶ್ರೀರಾಮುಲು ಅವರು ಸ್ಥಳಕ್ಕೆ ಭೇಟಿ ನೀಡಿದ್ದು ದುಃಖತಪ್ತ ಕುಟುಂಬಗಳಿಗೆ ಸಾಂತ್ವನ ಹೇಳಿ, ಮುಂದಿನ ಕ್ರಮದ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದ್ದಾರೆ.
Next Story