Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅರುಣ್ ಜೇಟ್ಲಿ ನಿಧನ ಹಿನ್ನೆಲೆ: ಖಾತೆ...

ಅರುಣ್ ಜೇಟ್ಲಿ ನಿಧನ ಹಿನ್ನೆಲೆ: ಖಾತೆ ಹಂಚಿಕೆ ಸೋಮವಾರಕ್ಕೆ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ24 Aug 2019 6:08 PM IST
share
ಅರುಣ್ ಜೇಟ್ಲಿ ನಿಧನ ಹಿನ್ನೆಲೆ: ಖಾತೆ ಹಂಚಿಕೆ ಸೋಮವಾರಕ್ಕೆ ಮುಂದೂಡಿಕೆ

ಬೆಂಗಳೂರು, ಆ. 24: ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ನಿಧನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರಕಾರದ ನೂತನ ಸಚಿವರ ಖಾತೆ ಹಂಚಿಕೆ ಮತ್ತೆ ಮುಂದೂಡಿಕೆಯಾಗಿದೆ.

ನಾಳೆ ಬೆಳಗ್ಗೆ 9:45ರ ಸುಮಾರಿಗೆ ಹೊಸದಿಲ್ಲಿಗೆ ಪ್ರಯಾಣ ಬೆಳೆಸಲಿರುವ ಸಿಎಂ ಯಡಿಯೂರಪ್ಪ, ಅರುಣ್ ಜೇಟ್ಲಿ ಅವರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲಿದ್ದು, ನಾಳೆ ರಾತ್ರಿ 8ಗಂಟೆಯ ಸುಮಾರಿಗೆ ದಿಲ್ಲಿಯಿಂದ ಬೆಂಗಳೂರಿಗೆ ಹಿಂದಿರುಗಲಿದ್ದಾರೆ. ಹೀಗಾಗಿ ಸೋಮವಾರ(ಆ.26) ನೂತನ ಸಚಿವರಿಗೆ ಖಾತೆ ಹಂಚಿಕೆಯಾಗುವ ಸಾಧ್ಯತೆಗಳಿವೆ.

ಸಿದ್ಧತೆ ನಡುವೆ ನಿಧನದ ಸುದ್ದಿ: ಶನಿವಾರ(ಆ.24) ಮಧ್ಯಾಹ್ನದ ವೇಳೆ ನೂತನ ಸಚಿವರಿಗೆ ಖಾತೆ ಹಂಚಿಕೆ ಅಂತಿಮಗೊಳಿಸಿ ಪಟ್ಟಿ ರಾಜ್ಯಪಾಲರಿಗೆ ರವಾನಿಸಲು ಸಿಎಂ ಸಿದ್ಧತೆ ನಡೆಸಿದ್ದರು. ಈ ಮಧ್ಯೆ ಜೇಟ್ಲಿ ಅವರ ನಿಧನದ ಸುದ್ದಿ ಹೊಸದಿಲ್ಲಿಯಿಂದ ಬಂದಿದ್ದರಿಂದ ಖಾತೆ ಹಂಚಿಕೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಸೂಕ್ತ ಸ್ಥಾನಮಾನಕ್ಕಾಗಿ ಅನರ್ಹ ಶಾಸಕರ ಪಟ್ಟು, ನೂತನ ಸಚಿವರ ಖಾತೆ ಹಂಚಿಕೆ ಗೊಂದಲ, ಸಚಿವ ಸ್ಥಾನ ವಂಚಿತ ಶಾಸಕರ ಅಸಮಾಧಾನದ ಹಿನ್ನೆಲೆಯಲ್ಲಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಸಿಎಂ ಬಿಎಸ್‌ವೈ ಖಾತೆ ಹಂಚಿಕೆ ಮೂಲಕ ಗೊಂದಲ ಪರಿಹಾರಕ್ಕೆ ಮುಂದಾಗಿದ್ದರು. ಆ ಹಿನ್ನೆಲೆಯಲ್ಲಿ ತಮ್ಮ ಡಾಲರ್ಸ್‌ ಕಾಲನಿಯಲ್ಲಿನ ದವಳಗಿರಿ ನಿವಾಸದಲ್ಲಿ ಹಿರಿಯ ಸಚಿವರಾದ ಗೋವಿಂದ ಕಾರಜೋಳ, ಬಸವರಾಜ ಬೊಮ್ಮಾಯಿ ಸೇರಿದಂತೆ ಆಪ್ತರ ಜತೆ ಸುದೀರ್ಘ ಸಮಾಲೋಚನೆಯನ್ನೂ ನಡೆಸಿದ್ದರು. ಸಚಿವ ಸ್ಥಾನ ವಂಚಿತರಿಗೂ 2ನೆ ಬಾರಿ ಸಂಪುಟ ವಿಸ್ತರಣೆ ಮೂಲಕ ಸ್ಥಾನ ಕಲ್ಪಿಸುವ ಬಗ್ಗೆಯೂ ಚರ್ಚಿಸಿದ್ದರು.

ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಉಮೇಶ್ ಕತ್ತಿ, ತಿಪ್ಪಾರೆಡ್ಡಿ, ಅರವಿಂದ ಲಿಂಬಾವಳಿ, ಮುರುಗೇಶ್ ನಿರಾಣಿ, ರಾಜೂಗೌಡ, ರೇಣುಕಾಚಾರ್ಯ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೆ.ಜಿ.ಬೋಪಯ್ಯ ಸೇರಿದಂತೆ ನಾಲ್ಕೈದು ಮಂದಿಗೆ ಸಚಿವ ಸ್ಥಾನ ನೀಡಲು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಈ ಮಧ್ಯೆ ಅನರ್ಹರಾದ ರಮೇಶ್ ಜಾರಕಿಹೊಳಿ, ಎಚ್.ವಿಶ್ವನಾಥ್, ಮಹೇಶ್ ಕುಮಟಳ್ಳಿ, ಬಿ.ಸಿ.ಪಾಟೀಲ್, ಬೈರತಿ ಬಸವರಾಜ್, ಗೋಪಾಲಯ್ಯ, ಎಂಟಿಬಿ ನಾಗರಾಜ್ ಸೇರಿ ಇನ್ನಿತರರಿಗೆ ಪ್ರಮುಖ ಖಾತೆ ನೀಡಲು ತೀರ್ಮಾನಿಸಲಾಗಿದೆ. ಆದರೆ, ಅವರ ಪ್ರಕರಣ ಇತ್ಯರ್ಥ ಆದ ಬಳಿಕ ಸಚಿವ ಸ್ಥಾನ ನೀಡುವ ಸಾಧ್ಯತೆಗಳಿವೆ.

ಡಿಸಿಎಂ ಗೊಂದಲ: ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಹಿರಿಯ ಮತ್ತು ಪ್ರಬಲ ಸಮುದಾಯದ ಶಾಸಕರೇ ಆರೇಳು ಮಂದಿ ಇದ್ದು, ಅವರೆಲ್ಲರೂ ಉಪ ಮುಖ್ಯಮಂತ್ರಿ (ಡಿಸಿಎಂ) ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಹೀಗಾಗಿ ಮೂರ್ನಾಲ್ಕು ಡಿಸಿಎಂ ಸ್ಥಾನ ಸೃಷ್ಟಿಸಿಲು ಬಿಎಸ್‌ವೈ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ. ಆದರೆ, ಬಿಜೆಪಿ ಆಡಳಿತವಿರುವ ಯಾವುದೇ ರಾಜ್ಯದಲ್ಲಿಯೂ ಡಿಸಿಎಂ ಸ್ಥಾನ ನೀಡಿಲ್ಲ. ಹೀಗಾಗಿ ಕರ್ನಾಟಕದಲ್ಲಿ ಏಕೆ ಎಂದು ರಾಷ್ಟ್ರೀಯಾಧ್ಯಕ್ಷ ಅಮಿತ್ ಶಾ ಪ್ರಶ್ನಿಸಿದ್ದಾರೆ. ಹೀಗಾಗಿ ಬಿಎಸ್‌ವೈ ಸಂಕಷ್ಟಕ್ಕೆ ಸಿಲುಕಿದ್ದು, ಸೋಮವಾರ ಖಾತೆ ಹಂಚಿಕೆ ಮೂಲಕ ಎಲ್ಲ ಗೊಂದಲಕ್ಕೆ ತೆರೆ ಎಳೆಯುವ ನಿರೀಕ್ಷೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X