Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಮಂಗಳೂರು: ‘ಮಾಧ್ಯಮ ಭಯೋತ್ಪಾದನೆ...

​ಮಂಗಳೂರು: ‘ಮಾಧ್ಯಮ ಭಯೋತ್ಪಾದನೆ ನಿಲ್ಲಿಸಿ’ ಎಸ್ಸೆಸ್ಸೆಫ್‌ನಿಂದ ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ26 Aug 2019 5:31 PM IST
share
​ಮಂಗಳೂರು: ‘ಮಾಧ್ಯಮ ಭಯೋತ್ಪಾದನೆ ನಿಲ್ಲಿಸಿ’ ಎಸ್ಸೆಸ್ಸೆಫ್‌ನಿಂದ ಬೃಹತ್ ಪ್ರತಿಭಟನೆ

ಮಂಗಳೂರು, ಆ.26: ಎಸ್ಸೆಸ್ಸೆಫ್ ಮತ್ತು ಎಸ್‌ವೈಎಸ್ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ‘ಮಾಧ್ಯಮ ಭಯೋತ್ಪಾದನೆ ನಿಲ್ಲಿಸಿ’ ಘೋಷಣೆಯಡಿ ಬೃಹತ್ ಪ್ರತಿಭಟನೆಯನ್ನು ಸ್ಟೇಟ್‌ಬ್ಯಾಂಕ್ ಬಳಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸೋಮವಾರ ಸಂಜೆ  ಹಮ್ಮಿಕೊಳ್ಳಲಾಯಿತು.

ಪ್ರತಿಭಟನೆಯನ್ನು ಎಸ್‌ವೈಎಸ್ ರಾಜ್ಯಾಧ್ಯಕ್ಷ ಜಿ.ಎಂ.ಮುಹಮ್ಮದ್ ಕಾಮಿಲ್ ಸಖಾಫಿ ಉದ್ಘಾಟಿಸಿ ಮಾತನಾಡಿ, ‘ನಮ್ಮ ಸಂಘಟನೆಯಿಂದ ನಡೆಯುತ್ತಿರುವ ಪ್ರತಿಭಟನೆ ಎಲ್ಲ ಪತ್ರಿಕಾ ಮಾಧ್ಯಮಗಳ ವಿರುದ್ಧದ ಸಮರವಲ್ಲ. ಸಮಾಜಕ್ಕೆ ಬೇಡವಾದ ವಿಷಯಗಳನ್ನಿಟ್ಟುಕೊಂಡು ಕೆಲ ಮಾಧ್ಯಮಗಳು ಪತ್ರಿಕಾ ಸ್ವಾತಂತ್ರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಅಮಾಯಕರನ್ನು ಬಲಿಪಶುವಾಗಿಸುವುದು ಅಕ್ಷಮ್ಯ ಅಪರಾಧ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಸಮಿತಿಯ ಕೋಶಾಧಿಕಾರಿ ಮುಹಮ್ಮದ್ ಅಲಿ ತುರ್ಕಳಿಕೆ ಮಾತನಾಡಿ, ‘ಬೆಳ್ತಂಗಡಿ ತಾಲೂಕಿನ ಗೋವಿಂದೂರು ನಿವಾಸಿ ಅಬ್ದುಲ್ ರವೂಫ್ ಮುಸ್ಲಿಯಾರ್ ಎಂಬ ಅಮಾಯಕನಿಗೆ ಉಗ್ರ ಪಟ್ಟ ಕಟ್ಟಲು ರಾಜ್ಯದ ಬಹುತೇಕ ಮಾಧ್ಯಮಗಳು ಮುಂದಾಗಿದ್ದವು. ಇಂತಹ ಸುಳ್ಳುಭರಿತ ಸುದ್ದಿಗಳನ್ನು ಪ್ರಸಾರ ಮಾಡುವ ಪತ್ರಿಕೆ-ಸುದ್ದಿವಾಹಿನಿಗಳು ಮಾಧ್ಯಮ ಜಗತ್ತಿಗೆ ಕಳಂಕವಾಗಿದೆ’ ಎಂದು ಮಾಧ್ಯಮಗಳ ಬೇಜವಾಬ್ದಾರಿತನವನ್ನು ಖಂಡಿಸಿದರು.

ಮಾಧ್ಯಮಗಳು ಸೃಷ್ಟಿಸಿದ ಅವಾಂತರಗಳಿಗೆ ಅಮಾಯಕರು ಬಲಿಯಾಗುವುದು ಖಂಡನೀಯ. ದಲಿತರು, ದಮನಿತರು, ಶೋಷಿತರು, ನಿರ್ಗತಿಕರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿ, ಸಮಾಜದ ಅಭಿವೃದ್ಧಿಗೆ ಕಾರಣೀಭೂತವಾಗುವ ಬದಲು ವಾಮಮಾರ್ಗ ತುಳಿಯುತ್ತಿರುವುದು ಸಲ್ಲದು. ಇಂತಹ ಅಮಾಯಕನ ಗೌರವಕ್ಕೆ ಚ್ಯುತಿ ತಂದ ತಪ್ಪಿತಸ್ಥರ ವಿರುದ್ಧ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಭಾರತವು ಪರಸ್ಪರ ಸೌಹಾರ್ದ ಬಯಸುವ ದೇಶವಾಗಿದೆ. ಸಂವಿಧಾನದ ಮುಂದೆ ಎಲ್ಲರೂ ಸಮಾನರು. ಆದರೆ ಕೆಲ ಮಾಧ್ಯಮಗಳ ಬೇಜವಾಬ್ದಾರಿಯಿಂದ ತಾರತಮ್ಯ ಹೆಚ್ಚುತ್ತಿದೆ. ಒಂದೇ ಧರ್ಮವನ್ನು ಗುರಿಯಾಗಿಸಿಟ್ಟುಕೊಂಡು ಇಲ್ಲಸಲ್ಲದ ಆರೋಪಗಳನ್ನು ಹೊರಿಸುವುದನ್ನು ಸಮಾಜವು ಒಪ್ಪುವುದಿಲ್ಲ. ಅಮಾಯಕನಿಗೆ ಭಯೋತ್ಪಾದನೆ ಪಟ್ಟ ಕಟ್ಟಿರುವುದನ್ನು ಜಿಲ್ಲೆಯ ಜನತೆ ಸಹಿಸುವುದಿಲ್ಲ ಎಂದು ಹೇಳಿದರು.

‘ನಾಲ್ಕನೇ ಅಂಗವೆಂದು ಕರೆಯಲ್ಪಡುವ ಪತ್ರಿಕಾ ರಂಗವು ಸೌಹಾರ್ದ ಬೆಸೆಯುವ ವರದಿಗಳನ್ನು ಪ್ರಕಟಿಸಬೇಕು. ಆದರೆ ಇಂದಿನ ಬಹುತೇಕ ಮಾಧ್ಯಮಗಳು ಕೋಮು ದ್ವೇಷ ಹರಡಲು ಮುಂದಾಗುತ್ತಿರುವುದು ಖಂಡನೀಯ. ದೇಶದಲ್ಲಿ ಅಸ್ಥಿರತೆ ಉಂಟಾಗಲು ಪೊಲೀಸ್ ಇಲಾಖೆ ಆಸ್ಪದ ನೀಡಬಾರದು. ತಪ್ಪಿತಸ್ಥರಿಗೆ ಕೂಡಲೇ ಕಾನೂನು ಕ್ರಮವಾಗಿ ಶಿಕ್ಷೆಯಾಗಬೇಕು. ಇಲ್ಲದಿದ್ದರೆ ರಾಜ್ಯ ಹಾಗೂ ದೇಶದ ರಾಜಧಾನಿಗಳಲ್ಲೂ ಪ್ರತಿಭಟನೆ ನಡೆಸಲು ಹಿಂಜರಿಯುವುದಿಲ್ಲ’ ಎಂದೂ ಅವರು ತಿಳಿಸಿದರು.

ಪ್ರತಿಭಟನೆಯ ಅಧ್ಯಕ್ಷತೆಯನ್ನು ಎಸ್ಸೆಸ್ಸೆಫ್ ಜಿಲ್ಲಾ ಸಮಿತಿಯ ಅಧ್ಯಕ್ಷ ಇಬ್ರಾಹೀಂ ಸಖಾಫಿ ಸೆರ್ಕಳ ವಹಿಸಿದ್ದರು. ಪ್ರತಿಭಟನೆಯಲ್ಲಿ ಸಂತ್ರಸ್ತ ಅಬ್ದುಲ್ ರವೂಫ್ ಮುಸ್ಲಿಯಾರ್, ಎಸ್ಸೆಸ್ಸೆಫ್ ಜಿಲ್ಲಾ ಸಮಿತಿ ಕಾರ್ಯದರ್ಶಿಗಳಾದ ಹಾಫಿಳ್ ಯಾಕೂಬ್ ಸಅದಿ ನಾವೂರು, ಕೆ.ಪಿ. ಸಿರಾಜುದ್ದೀನ್ ಸಖಾಫಿ ಕನ್ಯಾನ ಹಾಗೂ ಎಸ್‌ವೈಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಿನಾರ, ಎಸ್‌ಎಂಎ ರಾಜ್ಯ ಉಪಾಧ್ಯಕ್ಷ ಹಮೀದ್ ಹಾಜಿ ಕೊಡುಂಗಾಯ, ಉಮರುಲ್ ಫಾರೂಕ್ ಪಾಣೆಮಂಗಳೂರು, ಕೆಸಿಎಫ್ ದಮಾಮ್‌ನ ಖಾಸಿಂ ಅಡ್ಡೂರು, ದ.ಕ. ಜಿಪಂ ಸದಸ್ಯ ಎಂ.ಎಸ್.ಮುಹಮ್ಮದ್, ಎಸ್ಸೆಸ್ಸೆಫ್ ಜಿಲ್ಲಾ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.

ಪ್ರತಿಭಟನೆಯಲ್ಲಿ ಎಸ್ಸೆಸ್ಸೆಫ್ ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ರಶೀದ್ ಹಾಜಿ ಸ್ವಾಗತಿಸಿದರು. ಶರೀಫ್ ನಂದಾವರ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X