ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಪದಕ

ಉಡುಪಿ, ಆ.26: ಉಡುಪಿ ವಳಕಾಡು ಸಂಯುಕ್ತ ಪ್ರೌಢಶಾಲೆಯ 9ನೆ ತರಗತಿ ವಿದ್ಯಾರ್ಥಿನಿ ದೀಕ್ಷಾ ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಇಂಡಿ ಪೆಂಡೆನ್ಸ್ ಕಪ್ -2019 ರಾಜ್ಯಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್ ನ ಕಟಾದಲ್ಲಿ ಪ್ರಥಮ ಸ್ಥಾನ, ಕುಮಿಟೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಉಡುಪಿ ಸಮಾಜ ಕಲ್ಯಾಣ ಇಲಾಖೆಯ ವಾಹನ ಚಾಲಕ ದಾಮೋದರ ಮತ್ತು ಶಕುಂತಳ ದಂಪತಿಯ ಪುತ್ರಿಯಾಗಿರುವ ಇವರು, ಮೂಲ್ಕಿಯ ಚಂದ್ರ ಹಾಸ ಅವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.
Next Story





