Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಮಂಗಳೂರು: ಕುಡಿದ ಮತ್ತಿನಲ್ಲಿ ಸ್ನೇಹಿತನ...

​ಮಂಗಳೂರು: ಕುಡಿದ ಮತ್ತಿನಲ್ಲಿ ಸ್ನೇಹಿತನ ಕೊಲೆ; ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ26 Aug 2019 8:04 PM IST
share
​ಮಂಗಳೂರು: ಕುಡಿದ ಮತ್ತಿನಲ್ಲಿ ಸ್ನೇಹಿತನ ಕೊಲೆ; ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ

ಮಂಗಳೂರು, ಆ.26: ಕುಡಿತದ ಮತ್ತಿನಲ್ಲಿ ಸ್ನೇಹಿತನ ಮೇಲೆಯೇ ಸಂಶಯಗೊಂಡು ಆತನನ್ನು ಕಡಿದು ಕೊಲೆ ಮಾಡಿದ್ದ ಆರೋಪಿಗೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ.

ಮೂಡುಬಿದಿರೆಯ ಶಿರ್ತಾಡಿ ದೇವಸಮನೆ ನಿವಾಸಿ ಜಯ ಮಡಿವಾಳ (42) ಅಪರಾಧಿ.

ಈತ ಕಳೆದ ವರ್ಷ ಅ. 2ರಂದು ರಾತ್ರಿ ತನ್ನ ಮನೆಯಲ್ಲಿಯೇ ತನ್ನ ಸ್ನೇಹಿತ, ಪಚ್ಚಾಡಿ ಕಜೆ ಶಿರ್ತಾಡಿ ನಿವಾಸಿ ಶೇಖರ ಪೂಜಾರಿ(52) ಎಂಬವರನ್ನು ಕಡಿದು ಕೊಲೆ ಮಾಡಿದ್ದ.

ನೇರ ಸಾಕ್ಷಿಗಳಿಲ್ಲದಿದ್ದರೂ ಸಾಂದರ್ಭಿಕ ಸಾಕ್ಷಿಗಳ ಆಧಾರದಲ್ಲಿ ಆತ ಮಾಡಿದ ಅಪರಾಧ ಸಾಬೀತಾಗಿದ್ದು, ಜಿಲ್ಲಾ ಪ್ರಧಾನ ಮತ್ತು ನ್ಯಾಯಾಧೀಶ ಕಡ್ಲೂರು ಸತ್ಯನಾರಾಯಣ ಆಚಾರ್ಯ ತೀರ್ಪು ಪ್ರಕಟಿಸಿದರು. ಕಠಿಣ ಜೀವಾವಧಿ ಶಿಕ್ಷೆ, 10 ಸಾವಿರ ರೂ. ದಂಡ ಮತ್ತು ದಂಡ ತೆರಲು ತಪ್ಪಿದರೆ ಆರು ತಿಂಗಳು ಸಜೆ ವಿಧಿಸಲಾಗಿದೆ.

ಪ್ರಕರಣ ವಿವರ: ಜಯ ಮಡಿವಾಳ ಹಾಗೂ ಶೇಖರ ಪೂಜಾರಿ ಸ್ನೇಹಿತರು. ಜಯ ಮಡಿವಾಳ ಏಕಾಂಗಿಯಾಗಿ ದೇವಸಮನೆಯಲ್ಲಿ ವಾಸಿಸುತ್ತಿದ್ದ. ಕೊಲೆಯಾಗುವ ದಿನದಂದು ಮಧ್ಯಾಹ್ನ ಇಬ್ಬರೂ ಶಿರ್ತಾಡಿ ಪೇಟೆಯಲ್ಲಿ ಭೇಟಿಯಾಗಿದ್ದರು. ಮಾತನಾಡುವಾಗ ಶೇಖರ ಪೂಜಾರಿ ಜಯ ಮಡಿವಾಳನಲ್ಲಿ ತನ್ನೊಂದಿಗೆ ಆಂಧ್ರಕ್ಕೆ ಬರುವಂತೆ ಕೇಳಿದ್ದರು.

ಬಳಿಕ ಇಬ್ಬರೂ ಹಂದಿ ಮಾಂಸ ಖರೀದಿಸಿ, ಜಯ ಮಡಿವಾಳನ ಮನೆಗೆ ತೆರಳಿದ್ದರು. ರಾತ್ರಿ ಇಬ್ಬರೂ ಮದ್ಯ ಸೇವಿಸಿ, ಬಳಿಕ ಅಡುಗೆ ಮಾಡಿ ಊಟ ಮಾಡಿದ್ದು, ಆಗಲೂ ಶೇಖರ ಆಂಧ್ರಕ್ಕೆ ಬರುವಂತೆ ಕೇಳಿದ್ದರು. ಅಲ್ಲದೆ, ಜಯ ಒಬ್ಬನೇ ಇರುವುದರಿಂದ ಜಮೀನು ತನಗೆ ಕೊಡುವಂತೆ ಕೇಳಿದ್ದರು. ಇದರಿಂದ ಜಯ ಸಿಟ್ಟಿಗೆದ್ದಿದ್ದ. ಇಬ್ಬರಿಗೂ ಜಗಳ ನಡೆದಿದ್ದು, ಸಿಟ್ಟಿನಿಂದ ಶೇಖರ ಪೂಜಾರಿಯ ತಲೆ, ಕೊರಳು, ಕೈಗಳಿಗೆ ಕಡಿದು ಕೊಲೆ ಮಾಡಿದ್ದ.

ಮರುದಿನ ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿತ್ತು. ತನ್ನನ್ನು ಆಂಧ್ರಕ್ಕೆ ಕರೆದು ಕೊಲೆ ಮಾಡಲು ಶೇಖರ ಪೂಜಾರಿ ಹವಣಿಸುತ್ತಿದ್ದುದರಿಂದ ತಾನು ಕೊಲೆ ಮಾಡಿದ್ದಾಗಿ ಆರೋಪಿ ತನಿಖೆ ವೇಳೆ ಹೇಳಿಕೆ ನೀಡಿದ್ದ.
ಇನ್‌ಸ್ಪೆಕ್ಟರ್ ರಾಮಚಂದ್ರ ನಾಯಕ್ ಅವರು ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ಪ್ರಾರಂಭದಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಪುಷ್ಪರಾಜ್ ಕೆ. ವಾದಿಸಿದ್ದು, ಬಳಿಕ ರಾಜು ಪೂಜಾರಿ ಬನ್ನಾಡಿ ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X