Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಂಕಣಿಯಲ್ಲಿ ಯುಪಿಎಸ್‌ಸಿ ಪರೀಕ್ಷೆ...

ಕೊಂಕಣಿಯಲ್ಲಿ ಯುಪಿಎಸ್‌ಸಿ ಪರೀಕ್ಷೆ ಬರೆಯವ ಅವಕಾಶ: ಮೆಲ್ವಿನ್ ರಾಡ್ರಿಗ್

ವಾಮಂಜೂರಿನಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ26 Aug 2019 8:22 PM IST
share
ಕೊಂಕಣಿಯಲ್ಲಿ ಯುಪಿಎಸ್‌ಸಿ ಪರೀಕ್ಷೆ ಬರೆಯವ ಅವಕಾಶ: ಮೆಲ್ವಿನ್ ರಾಡ್ರಿಗ್

ಮಂಗಳೂರು, ಆ.26: ಕೊಂಕಣಿಗೆ ಮಾನ್ಯತೆ ದೊರೆತುದರಿಂದ ಮಹತ್ವದ ಕೆಲ ಬೆಳವಣಿಗೆಗಳು ಆಗಿವೆ. ಕೊಂಕಣಿಯನ್ನು ಸಮೃದ್ಧ ಭಾಷೆಯನ್ನಾಗಿಸುವ ಅವಕಾಶವನ್ನು ಸಂವಿಧಾನದ ಎಂಟನೇ ಪರಿಚ್ಛೇದ ಕೇಂದ್ರ ಮತ್ತು ರಾಜ್ಯ ಸರಕಾರ ಹಾಗೂ ಕೊಂಕಣಿಗರಿಗೆ ನೀಡಿದೆ. ಕೊಂಕಣಿಯಲ್ಲಿ ಯುಪಿಎಸ್‌ಸಿ (ಐಎಎಸ್/ಐಪಿಎಸ್ ಇತ್ಯಾದಿ) ಪರೀಕ್ಷೆಗಳನ್ನು ಬರೆಯವ ಅವಕಾಶವೂ ಲಭಿಸಿದೆ ಎಂದು ಸಾಹಿತ್ಯ ಅಕಾಡಮಿ ಪ್ರಶಸ್ತಿ ಪಡೆದ ಕವಿ ಮೆಲ್ವಿನ್ ರೊಡ್ರಿಗಸ್ ಹೇಳಿದರು.

ವಾಮಂಜೂರಿನ ಶ್ರಮಿಕ ಸಂತ ಜೊಸೆಫ್ ಚರ್ಚ್ ವತಿಯಿಂದ ಸಾಂಗಾತಿ ವಾಮಂಜೂರ್ ಸಹಕಾರದಲ್ಲಿ ಚರ್ಚ್ ಸಭಾಂಗಣದಲ್ಲಿ ರವಿವಾರ ನಡೆದ ಕೊಂಕಣಿ ಮಾನ್ಯತಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

22 ರಾಷ್ಟ್ರೀಯ ಭಾಷೆಗಳಲ್ಲಿ ಒಂದಾದ ಕೊಂಕಣಿಯು ಸರಕಾರಿ ವ್ಯವಸ್ಥೆಯ ವಿವಿಧ ಸ್ತರಗಳಲ್ಲಿ ಬಳಸಲ್ಪಡುತ್ತದೆ. ಜನಪ್ರತಿನಿಧಿಗಳಿಗೆ ವಿಧಾನಮಂಡಲ, ಸಂಸತ್ತುಗಳಲ್ಲಿ, ನಾಗರಿಕರಿಗೆ ಸರಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೊಂಕಣಿಯನ್ನು ಉಪಯೋಗಿಸುವ ಅವಕಾಶವಿದೆ. ಸಾಹಿತ್ಯ ರಚನೆ, ಅನುವಾದದ ಬೆಳವಣಿಗೆಗೆ ವಿಫುಲ ಅವಕಾಶಗಳು ತೆರೆದಿವೆ. ಕೊಂಕಣಿಯಲ್ಲಿ ಶಿಕ್ಷಣ, ಶಿಕ್ಷಕರಿಗೆ ನೌಕರಿ ಇತ್ಯಾದಿ ಕೆಲಸಗಳು ವೇಗ ಪಡೆಯಬೇಕಾಗಿವೆ ಎಂದ ಮೆಲ್ವಿನ ರೊಡ್ರಿಗಸ್ ಎಲ್ಲಕ್ಕಿಂತ ಮೊದಲು ಕೊಂಕಣಿತನವನ್ನು ಹೃದಯದಲ್ಲಿ ಪೋಸಿ ಬೆಳೆಸಬೇಕು. ಮನೆಗಳಲ್ಲಿ ಹಾಗೂ ಹೊರಗಡೆ ಸಾಧ್ಯವಿರುವೆಡೆ ಕೊಂಕಣಿ ಬಳಸಬೇಕು. ಮಕ್ಕಳಲ್ಲಿ ಕೊಂಕಣಿ ಪ್ರೇಮವನ್ನು ಬೆಳೆಸಬೇಕು. ಕೊಂಕಣಿ ಕಾರ್ಯಕ್ರಮಗಳು, ಕಲಾವಿದರು, ಸಾಹಿತ್ಯ, ಪತ್ರಿಕೆಗಳನ್ನು ಪ್ರೋತ್ಸಾಹಿಸಿದಾಗ ಕೊಂಕಣಿ ವಿಕಸಿಸುತ್ತದೆ, ಮಾನ್ಯತೆಗೆ ಸಾರ್ಥಕತೆ ಬರುತ್ತದೆ ಎಂದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಚರ್ಚ್ ಉಪಾಧ್ಯಕ್ಷ ಸುನೀಲ್ ಪಿಂಟೊ ಕೃಷಿ ಸಂಸ್ಕೃತಿಯನ್ನು ಬಿಂಬಿಸುವ ಅಕ್ಕಿಯಲ್ಲಿ ಕೊಂಕಣಿ ಬಾವುಟವನ್ನು ನೆಟ್ಟು ಕಾರ್ಯಕ್ರಮ ಉದ್ಘಾಟಿಸಿದರು. ಸೃಜನಾ ಪ್ರಕಾಶನ ಪ್ರಕಟಿಸಿದ ಡೇವಿಡ್ ಡಿಸೋಜ ವಾಮಂಜೂರ್ ರಚಿಸಿದ ‘ತಪ್ಕಟೆ ಫುಲಾಂ’ ಕಾದಂಬರಿಯನ್ನು ಬಿಡುಗಡೆಗೊಳಿಸಲಾಯಿತು. ಪ್ರಕಾಶಕ ತೊರಿ ಕಾರ್ಕಳ ಪುಸ್ತಕ ಪರಿಚಯಿಸಿದರು. ಅರುಣ್ ರಾಜ್ ರಾಡ್ರಿಗಸ್ ಬರೆದು ನಿರ್ದೇಶಿಸಿದ, ಕಲಾ ಕುಲೋತ್ಸವ್‌ನ ಎರಡನೇ ನಾಟಕ ‘ಪೇಯೊಂಗ್ ಗೆಸ್ಟ್’ ಕಲಾಕುಲ್ ಕಲಾವಿದರಿಂದ ಪ್ರದರ್ಶನಗೊಂಡಿತು.

ಮಾಂಡ್ ಸೊಭಾಣ್ ಅಧ್ಯಕ್ಷ ಲುವಿ ಪಿಂಟೊ, ಸಂತ ಆಗ್ನೆಸ್ ಕಾಲೇಜಿನ ರಿಜಿಸ್ಟ್ರಾರ್ ಚಾರ್ಲ್ಸ್ ಪಾಯ್ಸ್ ಉಪಸ್ಥಿತರಿದ್ದರು. ಲಾರೆನ್ಸ್ ಡಿಸೋಜ ಸ್ವಾಗತಿಸಿದರು. ರೋಶನ್ ಮಿನೇಜಸ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X