Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಉದ್ಯಮಿ ಸಿದ್ಧಾರ್ಥ ಆತ್ಮಹತ್ಯೆ: 2ನೇ...

​ಉದ್ಯಮಿ ಸಿದ್ಧಾರ್ಥ ಆತ್ಮಹತ್ಯೆ: 2ನೇ ಹಂತದ ತನಿಖೆ ಆರಂಭ

ವಾರ್ತಾಭಾರತಿವಾರ್ತಾಭಾರತಿ26 Aug 2019 10:30 PM IST
share
​ಉದ್ಯಮಿ ಸಿದ್ಧಾರ್ಥ ಆತ್ಮಹತ್ಯೆ: 2ನೇ ಹಂತದ ತನಿಖೆ ಆರಂಭ

ಮಂಗಳೂರು, ಆ. 26: ಕೆಫೆ ಕಾಫಿ ಡೇ ಮಾಲಕ, ಉದ್ಯಮಿ ಸಿದ್ಧಾರ್ಥ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾದೇಶಿಕ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ವರದಿಯಲ್ಲಿ ಆತ್ಮಹತ್ಯೆ ಎಂದು ಉಲ್ಲೇಖಿಸಲಾಗಿದೆ. ಇನ್ನು ಎರಡನೇ ಹಂತದ ತನಿಖೆ ಆರಂಭಿಸಲು ಪ್ರಕರಣದ ತನಿಖಾಧಿಕಾರಿಗಳು ಮುಂದಾಗಿದ್ದಾರೆ.

ಪ್ರಕರಣದ ಎರಡನೇ ಹಂತದ ತನಿಖೆಯಲ್ಲಿ ‘ಸಿದ್ಧಾರ್ಥ ಆತ್ಮಹತ್ಯೆಗೆ ಏನು ಕಾರಣ’ ಎನ್ನುವುದರ ಬಗ್ಗೆ ತನಿಖೆ ನಡೆಯಲಿದೆ. ಎಫ್‌ಎಸ್‌ಎಲ್ ವರದಿ ಫೋರೇನ್ಸಿಕ್ ತಜ್ಞರಿಂದ ಪ್ರಕರಣದ ತನಿಖಾಧಿಕಾರಿಗೆ ಶುಕ್ರವಾರ ಸಲ್ಲಿಕೆಯಾಗಿತ್ತು. ಈ ವರದಿಯಲ್ಲಿ ಸಿದ್ಧಾರ್ಥ ‘ಆತ್ಮಹತ್ಯೆ ಮಾಡಿಕೊಂಡಿರುವುದು’ ಎಂದು ಉಲ್ಲೇಖಿಸಿದ ಹಿನ್ನೆಲೆಯಲ್ಲಿ ಮತ್ತೊಂದು ಸುತ್ತಿನ ತನಿಖೆ ನಡೆಯಲಿದೆ.

ಬಹಳಷ್ಟು ಕುತೂಹಲ ಕೆರಳಿಸಿದ್ದ ಸಿದ್ಧಾರ್ಥ ಕೈಬರಹದ ಸಾಚಾತನದ ಪರೀಕ್ಷಾ ವರದಿ ಕೂಡ ತನಿಖಾಧಿಕಾರಿಗಳ ಕೈಸೇರಿದೆ. ಇದರಿಂದಾಗಿ ಈಗ ಸಿದ್ಧಾರ್ಥ ಆತ್ಮಹತ್ಯೆಗೆ ಕಾರಣವಾದ ಅಂಶಗಳ ಬಗ್ಗೆ ತನಿಖಾಧಿಕಾರಿಗಳು ತನಿಖೆಯನ್ನು ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಉದ್ಯಮಿ ಸಿದ್ಧಾರ್ಥನಿಗೆ ಅವರ ಕುಟುಂಬದ ಜೊತೆಗಿನ ಒಡನಾಟ, ಸಿದ್ಧಾರ್ಥನ ವಹಿವಾಟಿನ ವಿವರವನ್ನು ತನಿಖಾ ತಂಡ ಸಂಗ್ರಹಿಸಲಿದೆ. ಸಿದ್ಧಾರ್ಥ ಹೊಂದಿದ್ದ ಸಾಲ, ಶೇರುಗಳ ವಹಿವಾಟು, ಬ್ಯಾಂಕ್ ಖಾತೆಗಳ ವಿವರ, ಆರ್ಥಿಕ ಸಲಹೆಗಾರರ ಸಲಹೆ, ಅಲ್ಲದೆ ಇತರ ವ್ಯವಹಾರಗಳ ಬಗ್ಗೆ ವಿಸ್ತೃತ ತನಿಖೆ ನಡೆಸಲಿದೆ.

ಆದಾಯ ತೆರಿಗೆ ಇಲಾಖೆಯ ವಿಭಾಗದಿಂದ ಸಿದ್ಧಾರ್ಥಗೆ ನೀಡಲಾದ ನೋಟಿಸ್‌ಗಳು, ಐಟಿ ಅಧಿಕಾರಿಗಳಿಂದ ಒತ್ತಡ ಇತ್ತೇ ? ಐಟಿ ಅಧಿಕಾರಿಗಳಿಗೆ ಸಿದ್ಧಾರ್ಥ ಸೂಕ್ತವಾಗಿ ಉತ್ತರ ನೀಡುತ್ತಿದ್ದರೇ ಎಂಬಿತ್ಯಾದಿ ಮಾಹಿತಿಗಳನ್ನು ತನಿಖಾ ತಂಡ ತನಿಖೆಗೆ ಒಳಪಡಿಸಲಿದೆ.

ಸಿದ್ಧಾರ್ಥನೊಂದಿಗೆ ಒಡನಾಟ ಹೊಂದಿದವರನ್ನೂ ತನಿಖೆ ನಡೆಸಲಿದ್ದು, ಈ ಮೂಲಕ ಸಿದ್ಧಾರ್ಥ ಆತ್ಮಹತ್ಯೆ ಮಾಡಿಕೊಳ್ಳಲು ಉಂಟಾದ ನಿಖರ ಕಾರಣ ಏನು ಎಂಬುದನ್ನು ಪತ್ತೆ ಮಾಡಲು ತನಿಖಾ ತಂಡ ಎಲ್ಲ ಆಯಾಮದಲ್ಲೂ ತನಿಖೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.

ಜು.29ರಂದು ಮಂಗಳೂರಿನ ಉಳ್ಳಾಲ ನೇತ್ರಾವತಿ ಸೇತುವೆಯಿಂದ ಸಿದ್ಧಾರ್ಥ ಕಣ್ಮರೆಯಾಗಿದ್ದರು. ಅವರ ಶವ ಎರಡು ದಿನಗಳ ಬಳಿಕ ನಾಲ್ಕು ಕಿ.ಮೀ. ದೂರದ ಹೊಯ್ಗೆ ಬಜಾರ್ ಎಂಬಲ್ಲಿ ಪತ್ತೆಯಾಗಿತ್ತು. ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ ಮಾರ್ಗದರ್ಶನದಲ್ಲಿ ಮಂಗಳೂರು ದಕ್ಷಿಣ ಎಸಿಪಿ ಕೋದಂಡರಾಮ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X